ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಜಯ: ಗೌರವಧನ 10 ಸಾವಿರಕ್ಕೆ ಹೆಚ್ಚಿಸಿ ಸಿಎಂ ಸಿದ್ದರಾಮಯ್ಯ ಆದೇಶ

ಬೆಂಗಳೂರು, ಜನವರಿ 10: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಇಂದು ಆಶಾ ಕಾರ್ಯಕರ್ತೆಯರ ಸಂಧಾನ ಯಶಸ್ವಿಯಾಗಿದ್ದು, ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ 10 ಸಾವಿರ ರೂ.ಗಳ ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ. ರಾಜ್ಯ ಸರ್ಕಾರದಿಂದ ಪ್ರತಿ ಮಾಹೆ 5000 ರೂ ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು 10 ಸಾವಿರ ರೂ.ಗಳನ್ನು ತಿಂಗಳಿಗೆ ನೀಡಲಾಗುವುದು ಎಂದು ತಿಳಿಸಿದರು.

ಮಾಹಿತಿಯನ್ನು ಪೋರ್ಟಲ್ ನಲ್ಲಿ ನಮೂದು ಮಾಡುವುದು ಕಷ್ಟ ಸಾಧ್ಯವಾಗಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದಾಗ ಪೋರ್ಟಲ್ ಸುಧಾರಣೆ ಮಾಡಿ ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು. ಆಶಾ ಕಾರ್ಯಕರ್ತೆಯರ ಆರೋಗ್ಯ ಕೆಟ್ಟರೆ ಪ್ರತಿ ತಿಂಗಳು ಸಿಗುವ ರಜೆ ಕ್ರೋಡೀಕರಿಸಿ, ಗರಿಷ್ಠ ಮೂರು ತಿಂಗಳವರೆಗೆ ಗೌರವ ಧನ ನಿಲ್ಲಿಸದೆ ರಜೆ ಮಂಜೂರು ಮಾಡಲು ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ತಿಳಿಸಿದರು.

CM Siddaramaiah Agreed With Asha Workers Demand

ಆಯವ್ಯಯ ಪೂರ್ವಭಾವಿ ಸಭೆ ನಡೆಸುವಾಗ ಆಶಾ ಕಾರ್ಯಕರ್ತೆಯರೊಂದಿಗೂ ಸಭೆ ನಡೆಸಲಾಗುವುದು. ಸರ್ಕಾರ ನಿಮ್ಮೊಂದಿಗಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ಹೋರಾಟ ಮಾಡುವುದು ಸಂವಿಧಾನ ಬದ್ಧ ಹಕ್ಕು.ಪ್ರಜಾಸತ್ತಾತ್ಮಕ ಹೋರಾಟಗಳನ್ನು ಸರ್ಕಾರ ಹತ್ತಿಕ್ಕುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಚಾಮರಾಜನಗರದಲ್ಲಿ ಫೆಬ್ರವರಿ 15 ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಇದರಲ್ಲಿ ಯಾವುದೇ ಗೊಂದಲವಿಲ್ಲ. ಚಾಮರಾಜನಗರ ಭಾಗದ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಸಭೆ ನಡೆಸಲಾಗುವುದು ಎಂದರು.

ಮೈಸೂರಿನ ರಸ್ತೆಯೊಂದಕ್ಕೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಹೆಸರಿಡುವ ಬಗ್ಗೆ ರಾಜಕಾರಣ ನಡೆಯುತ್ತಿರುವ ಪ್ರತಿಕ್ರಿಯೆ ನೀಡಿ, ನನ್ನ 45 ವರ್ಷದ ರಾಜಕೀಯದ ಅವಧಿಯಲ್ಲಿ ಎಂದಿಗೂ ತನ್ನ ಹೆಸರಿನ್ನಿಡುವಂತೆ ತಿಳಿಸಲಿಲ್ಲ. ಹಿಂದೆ ಮೈಸೂರು ವಿಶ್ವವಿದ್ಯಾಲಯದವರು ನೀಡುವ ಡಾಕ್ಟರೇಟ್ ನ್ನು ತಾನು ನಿರಾಕರಿಸಿದ್ದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು.

ಡಾ.ಅಂಬೇಡ್ಕರ್ ರವರ ಜಪ ಮಾಡಬಾರದೆಂದು ಹೇಳುವ ಕೇಂದ್ರ ಸಚಿವ ಅಮಿತ್ ಶಾ ಅವರು ದಲಿತರ ಮನೆಗಳಿಗೆ ಭೇಟಿ ನೀಡಿ,ಡಾ.ಅಂಬೇಡ್ಕರ್ ಅಭಿಯಾನ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಡಾ. ಅಂಬೇಡ್ಕರ್ ಅವರ ಕುರಿತ ಅವರ ಹೇಳಿಕೆ, ಬಿಜೆಪಿಯವರಿಗೆ ಅಂಬೇಡ್ಕರ್ ರವರ ಮೇಲಿನ ಅಗೌರವವನ್ನು ತೋರಿಸುತ್ತದೆ. ಕಾಂಗ್ರೆಸ್ ಪಕ್ಷದವರ ಕಾಲದಲ್ಲಿ ಸಂವಿಧಾನವನ್ನು ಅಂಬೇಡ್ಕರ್ ಅವರೇ ರಚಿಸಿದ್ದರು. ವಾಜಪೇಯಿಯವರ ಸರ್ಕಾರವಿದ್ದ ಸಂದರ್ಭದಲ್ಲಿ ಸಂವಿಧಾನ ಬದಲಾವಣೆಗೆ ಮುಂದಾಗಿದ್ದರು. ಸಂವಿಧಾನ ಬದಲಾವಣೆಗಾಗಿಯೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಬಿಜೆಪಿಯ ಅನೇಕ ಸಚಿವರು ಹೇಳಿಕೆ ನೀಡಿದ್ದರು. ಆರ್ ಎಸ್ ಎಸ್ ನ ಪ್ರಮುಖರು ಸಂವಿಧಾನವನ್ನು ವಿರೋಧಿಸಿದ್ದರು ಎಂದರು.

ನವದೆಹಲಿಯಲ್ಲಿ ಎಂಎಸ್ ಪಿ ಬೇಡಿಕೆ ಸಂಬಂಧ ರೈತರ ಬಹಳ ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ಕೇಂದ್ರ ಸರ್ಕಾರ ಅವರ ನ್ಯಾಯಬದ್ಧ ಬೇಡಿಕೆಗೆ ಸ್ಪಂದಿಸುತ್ತಿಲ್ಲವೆಂಬ ಬಗ್ಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿ, ಕೇಂದ್ರಸರ್ಕಾರ ರೈತರ ಪರವಾದ ಸರ್ಕಾರವಲ್ಲ. ಬೆಳೆಗಳಿಗೆ ಎಂಎಸ್ ಪಿ ನೀಡುವುದಕ್ಕೆ ಕಾನೂನು ರಚಿಸುವಂತೆ ರೈತರ ಬೇಡಿಕೆಯಾಗಿದ್ದು, ಈ ಬೇಡಿಕೆಗೆ ಮಣಿಯದ ಅಮಾನವೀಯ ಹಾಗೂ ರೈತವಿರೋಧಿ ಸರ್ಕಾರವಾಗಿದೆ. ನೂರಾರು ರೈತರು ಪ್ರತಿಭಟನೆಯನ್ನು ಪ್ರಾಣ ಕಳೆದುಕೊಂಡಿದ್ದರೂ ಸಹ ರೈತರ ಬೇಡಿಕೆಗೆ ಮಣಿಯುತ್ತಿಲ್ಲ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+