12ನೇ ತರಗತಿಯವರೆಗೆ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತಗಳ ಬಳಕೆಯ ಬಗ್ಗೆ ಎದ್ದಿರುವ ವಿವಾದಗಳ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಪ್ರಾಥಮಿಕ ಶಾಲೆಯಿಂದ ಹಿಡಿದು 12ನೇ ತರಗತಿಯವರೆಗೆ ವಿದ್ಯಾರ್ಥಿಗಳು ತಾವು ಸಾಂಪ್ರದಾಯಿಕವಾಗಿ ಅನುಸರಿಸಿಕೊಂಡು ಬರುತ್ತಿರುವ ಧಾರ್ಮಿಕ ಸಂಕೇತಗಳನ್ನು ಧರಿಸಲು ಅವಕಾಶವಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮೇ 14ರಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಪ್ರಸ್ತುತ ರಾಜಕೀಯ ಹಾಗೂ ಶೈಕ್ಷಣಿಕ ವಿದ್ಯಮಾನಗಳ ಬಗ್ಗೆ ಹಲವು ವಿಚಾರಗಳನ್ನು ಹಂಚಿಕೊಂಡರು.

CM Siddaramaiah

ಧಾರ್ಮಿಕ ಸಂಕೇತಗಳ ವಿಚಾರದಲ್ಲಿ ಇತ್ತೀಚೆಗೆ ಬಿಜೆಪಿ ಎತ್ತಿರುವ ತಕರಾರುಗಳ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, "ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಜನಿವಾರ, ಹಿಜಾಬ್, ಉಡುದಾರ, ಅಥವಾ ರುದ್ರಾಕ್ಷಿಯಂತಹ ಧಾರ್ಮಿಕ ಸಂಕೇತಗಳನ್ನು ಹಾಕಿಕೊಂಡು ಬರಬಹುದು.

ಈಗಾಗಲೇ ಹಿಂದಿನಿಂದಲೂ ಸಾಂಪ್ರದಾಯಿಕವಾಗಿ ಅನುಸರಿಸಿಕೊಂಡು ಬರುತ್ತಿರುವ ಸಂಪ್ರದಾಯಗಳಿಗೆ ಯಾವುದೇ ಅಡ್ಡಿಯಿಲ್ಲ. ಆದರೆ, ಶಾಲಾ ಆವರಣದಲ್ಲಿ ಯಾರೂ ಕೂಡ ಹೊಸದಾಗಿ ಯಾವುದೇ ಧಾರ್ಮಿಕ ಆಚರಣೆಗಳನ್ನು ಅಥವಾ ಸಂಕೇತಗಳನ್ನು ಹುಟ್ಟುಹಾಕುವಂತಿಲ್ಲ" ಎಂದು ಕಟ್ಟುನಿಟ್ಟಾಗಿ ತಿಳಿಸಿದರು. ಈ ಮೂಲಕ ಶಿಕ್ಷಣ ಸಂಸ್ಥೆಗಳಲ್ಲಿ ವಿನಾಕಾರಣ ವಿವಾದ ಸೃಷ್ಟಿಸದಂತೆ ಅವರು ಪರೋಕ್ಷವಾಗಿ ಎಚ್ಚರಿಕೆ ನೀಡಿದರು.

ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. "ನೀಟ್ ಪರೀಕ್ಷೆಯನ್ನು ಸುಗಮವಾಗಿ ನಡೆಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಈ ಪರೀಕ್ಷಾ ಅಕ್ರಮಗಳಿಂದಾಗಿ ಹಗಲಿರುಳು ಕಷ್ಟಪಟ್ಟು ಓದಿದ ಲಕ್ಷಾಂತರ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತೀವ್ರ ಅನ್ಯಾಯವಾಗಿದೆ. ಕೇಂದ್ರ ಸರ್ಕಾರ ಪರೀಕ್ಷಾ ವ್ಯವಸ್ಥೆಯನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ" ಎಂದು ಅವರು ನೇರವಾಗಿ ಆರೋಪಿಸಿದರು.

ಡೀಸೆಲ್ ಬಳಕೆಯನ್ನು ಕಡಿತಗೊಳಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಬೆಂಗಾವಲು ಪಡೆಯ ವಾಹನಗಳನ್ನು ಕಡಿತಗೊಳಿಸಿರುವ ಕ್ರಮದ ಬಗ್ಗೆಯೂ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿದರು. "ಪ್ರಧಾನಿಯವರ ಈ ನಡೆ ಕೇವಲ ಒಂದು ತಾತ್ಕಾಲಿಕ ಕ್ರಮವಷ್ಟೇ. ಇಂತಹ ಕ್ರಮಗಳಿಂದ ಇಂಧನ ಸಮಸ್ಯೆ ಬಗೆಹರಿಯುವುದಿಲ್ಲ. ಪ್ರಧಾನಿಗಳು ಹೇಳಿರುವುದು ಸರಿಯಾದ ನಿರ್ಧಾರವಲ್ಲ. ಅದಕ್ಕೆ ಬದಲಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಇತರ ದೇಶಗಳೊಂದಿಗೆ ಗಂಭೀರವಾಗಿ ಚರ್ಚೆ ನಡೆಸಿ, ಇಂಧನ ದರ ಮತ್ತು ಪೂರೈಕೆ ವಿಚಾರದಲ್ಲಿ ಒಂದು ಒಮ್ಮತಕ್ಕೆ ಬರುವುದು ಸೂಕ್ತವಾದ ಹೆಜ್ಜೆ" ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸಂಪುಟ ಪುನಾರಚನೆ ವಿಚಾರದ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಮಹತ್ವದ ಸುಳಿವು ನೀಡಿದ್ದಾರೆ. ಸಂಪುಟ ಪುನಾರಚನೆಗೆ ಸಂಬಂಧಿಸಿದಂತೆ ಹೈಕಮಾಂಡ್ ಜೊತೆ ಚರ್ಚಿಸಲು ದೆಹಲಿಗೆ ಪ್ರಯಾಣ ಬೆಳೆಸುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, "ಹೌದು, ರಾಜ್ಯ ಸಚಿವ ಸಂಪುಟವನ್ನು ಪುನರ್‌ರಚನೆ ಮಾಡುವ ಉದ್ದೇಶ ನಮ್ಮ ಮುಂದಿದೆ" ಎಂದು ಹೇಳುವ ಮೂಲಕ ಸಚಿವಾಕಾಂಕ್ಷಿಗಳಲ್ಲಿ ಹೊಸ ಭರವಸೆ ಮೂಡಿಸಿದ್ದಾರೆ. ಒಟ್ಟಿನಲ್ಲಿ ಮುಖ್ಯಮಂತ್ರಿಗಳ ಈ ಮಾತುಗಳು ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+