ಜನಸ್ಪಂದನ ಕಾರ್ಯಕ್ರಮ: ಸ್ಥಳದಲ್ಲೇ ಮೂವರ ಚಿಕಿತ್ಸೆಗೆ 10 ಲಕ್ಷ ರೂ ಪರಿಹಾರ ಘೋಷಿಸಿದ ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ 08: ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮವನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸುತ್ತಿದ್ದಾರೆ. ಈ ವೇಳೆ ಸ್ಥಳದಲ್ಲೇ ಮೂವರ ಚಿಕಿತ್ಸೆಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಒಟ್ಟು 10 ಲಕ್ಷ ರೂ ಪರಿಹಾರವನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.

ಈ ಕುರಿತು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದ್ದು, ರಾಮನಗರ ಜಿಲ್ಲೆಯ ವಿಜಯಕುಮಾರ್‌ ಬಿನ್‌ ನರಸಿಂಹಮೂರ್ತಿ ಎಂಬುವವರಿಗೆ ಕಿಡ್ನಿ ಕಸಿ ಚಿಕಿತ್ಸೆಗಾಗಿ 4 ಲಕ್ಷ ರೂ.ಗಳ ಧನಸಹಾಯವನ್ನು ಮುಖ್ಯಮಂತ್ರಿಗಳು ಸ್ಥಳದಲ್ಲಿಯೇ ಮಂಜೂರು ಮಾಡಿದರು. ಇನ್ನೂ ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಬಸನಗೌಡ ಬಿರಾದಾರ್‌ ಬೋನ್‌ ಮ್ಯಾರೋ ಕಸಿಗಾಗಿ 4 ಲಕ್ಷ ರೂ.ಗಳ ಧನಸಹಾಯವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸ್ಥಳದಲ್ಲಿಯೇ ಮಂಜೂರು ಮಾಡಿದರು.

CM Siddaramaiah announced a compensation of Rs 10 lakh for the treatment of the three

ಅಲ್ಲದೇ ತುಮಕೂರು ಜಿಲ್ಲೆಯ ಐದು ವರ್ಷದ ಶಾಂಭವಿ ಎಂಬ ಮಗುವಿಗೆ ಶ್ರವಣ ಸಾಧನಕ್ಕಾಗಿ 50 ಸಾವಿರ ರೂ.ಗಳನ್ನು ಮುಖ್ಯಮಂತ್ರಿಗಳು ಸ್ಥಳದಲ್ಲಿಯೇ ಮಂಜೂರು ಮಾಡಿದರು. ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ನಾಗರಾಜಯ್ಯ ಅವರು ಮುಖ್ಯ ಮಂತ್ರಿಗಳನ್ನು ಭೇಟಿ ಮಾಡಿ ಶಿರಾಸಲ್ಲಿ ರೂಢಿದಾರಿಯನ್ನು ಕತ್ತರಿಸಿರುವುದರಿಂದ 5 ಕಿ.ಮೀ ಬಳಸಿಕೊಂಡು ಓಡಾಡಬೇಕಿದೆ. ಇದನ್ನು ಸರಿಪಡಿಸುವಂತೆ ಕೋರಿದರು. ಅರ್ಜಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+