Karnataka Budget 2024: ವಕ್ಫ್ ಆಸ್ತಿ ರಕ್ಷಣೆ, ಅಲ್ಪಸಂಖ್ಯಾತರಿಗೆ ಭಾರೀ ಅನುದಾನ ಘೋಷಣೆ: ಸಿದ್ದರಾಮಯ್ಯ
ಬೆಂಗಳೂರು, ಫೆಬ್ರವರಿ 16: ವಕ್ಫ್ ಆಸ್ತಿಗಳ ಸಂರಕ್ಷಣೆಗೆ ಕರ್ನಾಟಕ ರಾಜ್ಯ ಸರ್ಕಾರವು ಇತ್ತೀಚೆಗೆ 35 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದ ಬೆನ್ನಲ್ಲೆ ಕರ್ನಾಟಕ ಬಜೆಟ್‌ನಲ್ಲಿ ಭಾರೀ ಅನುದಾನ ಘೋಷಣೆ ಮಾಡುವ ಮೂಲಕ ಮುಸ್ಲಿಮರಿಗೆ ಸಿಹಿ ಸುದ್ದಿ ನೀಡಿದೆ.
ವಕ್ಫ್ ಆಸ್ತಿಗಳ ಅಭಿವೃದ್ಧಿ ಮತ್ತು ರಕ್ಷಣೆಗಾಗಿ ಅಂದರೆ, ತಂತಿ ಬೇಲಿ ಹಾಗೂ ಕಾಂಪೌಂಡ್ ನಿರ್ಮಿಸುವುದು ಸೇರಿದಂತೆ ರಕ್ಷಣೆ ಒದಗಿಸಲು ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಒದಗಿಸುವುದಾಗಿ ಘೋಷಿಸಿದ್ದಾರೆ.

ಇದಷ್ಟೇ ಅಲ್ಲದೇ ಜೈನ್ ಅಭಿವೃದ್ಧಿಗಾಗಿ 50 ಕೋಟಿ ರೂಪಾಯಿ ಅನುದಾನ ಜತೆಗೆ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ 200 ಕೋಟಿ ರೂ. ನೀಡಲಾಗುವುದು ಎಂದು ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಈ ಮೂಲಕ ರಾಜ್ಯದ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಲೋಕಸಭಾ ಚುನಾವಣೆ ದೃಷ್ಟಿಯಿಂದ ಸರ್ಕಾರ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ.
ಆದೇಶ ಹಿಂಪಡೆಯಲು ಹಿಂದು ಸಮಿತಿ ಆಗ್ರಹ
ಇತ್ತೀಚೆಗಷ್ಟೇ ವಕ್ಫ್ ಆಸ್ತಿಗಳ ರಕ್ಷಣೆಗೆ ಬಿಡುಗಡೆ ಮಾಡಿದ ಅನುದಾನ ಆದೇಶ ಹಿಂಪಡೆಯುವಂತೆ ಹಿಂದು ಜನಜಾಗೃತಿ ಸಮಿತಿಯ ಮುಖ್ಯಸ್ಥರು ಆಗ್ರಹಿಸಿದ್ದರು. ಸರ್ಕಾರದ ನಿರ್ಧಾರವನ್ನು ಸಮಿತಿ ವಕ್ತಾರ ಮೋಹನ್ ಗೌಡ ಅವರು ಖಂಡಿಸಿದ್ದರು. ಅಲ್ಪಸಂಖ್ಯಾತರ ಓಲೈಕೆಗಾಗಿ ಬಜೆಟ್ ಹಣ ಖಾಲಿ ಮಾಡುವ ಪ್ರಯತ್ನ ಇದಾಗಿದೆ ಎಂದು ಅವರು ಆರೋಪಿಸಿದ್ದರು.
ಈ ಹಿಂದೆ ಮುಖ್ಯಮಂತ್ರಿಗಳು 10,000 ಕೋಟಿ ರೂಪಾಯಿ ಹಣವನ್ನು ಅಲ್ಪಸಂಖ್ಯಾತರ ಅಭಿವೃದ್ಧಿಗೆ ನೀಡುತ್ತೇವೆ ಎಂದು ಹೇಳಿದ್ದರು. ಇದಕ್ಕೆ ವ್ಯಾಪಕ ಆಕ್ರೋಶಗಳು, ಖಂಡನೆಗಳು ವ್ಯಕ್ತವಾದ ಬೆನ್ನಲ್ಲೆ ಮತ್ತೆ 100 ಅನುದಾನ ಘೋಷಣೆ ಮಾಡಿದ್ದಾರೆ.












Click it and Unblock the Notifications