ರಾಜ್ಯದ ಕ್ರೀಡಾಪಟುಗಳಿಗೆ ವಾರ್ಷಿಕ ₹10 ಲಕ್ಷ ಸಹಾಯಧನ, ತರಬೇತಿ: ಸಿಎಂ ಹೇಳಿದ್ದೇನು?

ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಕ್ರೀಡಾಪಟುಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಇಂದು ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಇಂದಿನ ಯುವಜನತೆ ಶಿಕ್ಷಣ ಹಾಗೂ ಕ್ರೀಡೆಗೆ ಹೆಚ್ಚು ಒತ್ತು ನೀಡಿದರೆ ಅವರ ದೈಹಿಕ ಹಾಗೂ ಮಾನಸಿಕ ವಿಕಸನಕ್ಕೆ ಸಹಕಾರಿಯಾಗಲಿದೆ. ಸದೃಢ ಆರೋಗ್ಯಕ್ಕೆ ಕ್ರೀಡೆ ಹಾಗೂ ವ್ಯಾಯಾಮ ಅತ್ಯಗತ್ಯ ಎಂದಿರುವ ಅವರು ರಾಜ್ಯದ ಕ್ರೀಡಾಪಟುಗಳಿಗೆ 10 ಲಕ್ಷ ಸಹಾಯಧನ, ತರಬೇತಿ ನೀಡುವ ಬಗ್ಗೆಯೂ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ದಸರಾ ಕ್ರೀಡಾಕೂಟದಲ್ಲಿ ಒಂದು ವಿಭಾಗದಿಂದ 720 ಕ್ರೀಡಾಪಟುಗಳಂತೆ 5 ವಿಭಾಗಗಳಿಂದ ಒಟ್ಟು 3,600 ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲ ಕ್ರೀಡಾಪಟುಗಳಿಗೆ ಶುಭ ಹಾರೈಕೆಗಳು. ಸೋಲು-ಗೆಲುವುಗಳಿಗಿಂತ ಕ್ರೀಡಾಮನೋಭಾವ ಮುಖ್ಯ. ಚಾಮುಂಡಿವಿಹಾರ ಕ್ರೀಡಾಂಗಣದ ಗ್ಯಾಲರಿ ಹಾಗೂ ಈಜುಕೊಳಗಳಿಗೆ ಅತ್ಯಾಧುನಿಕ ಟೆನ್ಸೈಲ್ ಮೆಂಬ್ರೇನ್ ಛಾವಣಿ ಅಳವಡಿಸುವ ಮತ್ತು ಫುಟ್‌ಬಾಲ್‌ ಕೋರ್ಟ್‌ ನಿರ್ಮಿಸುವ ಕಾಮಗಾರಿಯನ್ನು 20.78 ಕೋಟಿ ರೂ. ವೆಚ್ಚದಲ್ಲಿ ನಾವು ಕೈಗೊಂಡಿದ್ದೇವೆ ಎಂದಿದ್ದಾರೆ.

cm-siddaramaiah-announces-10-lakh-annual-aid-training-karnataka-athletes

ವಿಜೇತರಿಗೆ 6 ಕೋಟಿ ನಗದು ಬಹುಮಾನ

ರಾಜ್ಯ ಸರ್ಕಾರ ಕ್ರೀಡಾಪಟುಗಳಿಗೆ ಎಲ್ಲ ರೀತಿಯ ಸಹಕಾರ ನೀಡುತ್ತಿದೆ. ಮುಂದಿನ ಒಲಿಂಪಿಕ್ಸ್‌‌ಗೆ ತರಬೇತಿ ಪಡೆಯಲು ರಾಜ್ಯದ 60 ಅತ್ಯಂತ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ವಾರ್ಷಿಕ ತಲಾ 10 ಲಕ್ಷ ರೂ. ಸಹಾಯಧನ ನೀಡಿ ತರಬೇತಿ ನೀಡಲಾಗುವುದು. ಅಲ್ಲದೇ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಸರ್ಕಾರ 6 ಕೋಟಿ ರೂ.ಗಳ ನಗದು ಬಹುಮಾನವನ್ನೂ ನೀಡಲಿದೆ. ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ಒದಗಿಸಲು ಎಲ್ಲ ಇಲಾಖೆಗಳಲ್ಲಿ ಶೇ 2ರಷ್ಟು ಮೀಸಲಾತಿ ಹಾಗೂ ಪೊಲೀಸ್ ಇಲಾಖೆಯಲ್ಲಿ 2ರಿಂದ ಶೇ.3ರಷ್ಟು ಕ್ರೀಡಾ ಮೀಸಲಾತಿಯನ್ನ ನೀಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ.

ವಿನೇಶ್ ಫೋಗಟ್‌ಗೆ ಸನ್ಮಾನ

ಮೈಸೂರಿನ ಈ ಸಮಾರಂಭದಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪುರಸ್ಕೃತ ಅಂತರರಾಷ್ಟ್ರೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಭಾಗವಹಿಸಿರುವುದು ವಿಶೇಷ. ಕುಸ್ತಿ ಕೇವಲ ಪುರುಷರ ಕ್ರೀಡೆ ಎಂದು ಪರಿಗಣಿಸಲಾಗಿದ್ದ ಕಾಲದಲ್ಲಿ ಸಾಮಾಜಿಕ ಅಡೆತಡೆಗಳು ಮತ್ತು ಹಿನ್ನಡೆಗಳನ್ನು ಅನುಭವಿಸಿದರೂ ಇವರು ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಾಗಿದ್ದಾರೆ. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ, ಭಾರತದ ಕೀರ್ತಿ ಮೆರೆದ ವಿನೇಶ್ ಅವರು ಹರಿಯಾಣ ರಾಜ್ಯದಲ್ಲಿ ಶಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಇಂದು ಮೈಸೂರಿನ ಕಾರ್ಯಕ್ರಮದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಸಿದ್ದರಾಮಯ್ಯ, ಜಿಎಸ್‌ಟಿ 18%, 28% ಹೆಚ್ಚಿಸಿದ್ದರ ಬಗ್ಗೆ ವಿರೋಧ ಮಾಡಿದವರು ನಾವು, ಇಷ್ಟು ವರ್ಷ ವಸೂಲಿ ಮಾಡಿದವರೇ ಈಗ ಅದರ ಕ್ರೆಡಿಟ್ ತೆಗೆದುಕೊಳ್ತಾ ಇದ್ದಾರೆ. ಭಾರತೀಯರಿಗೆ ಎಷ್ಟು ನಾಜೂಕಾಗಿ ಟೋಪಿ ಹಾಕ್ತಾರೆ ನೋಡಿ. ನೀವು ಇದಕ್ಕೆಲ್ಲಾ ಮರಳಾಗಬಾರದು ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+