ತಿ.ನರಸೀಪುರ ಬಳಿ ಅಪಘಾತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಗಳ ಪರಿಹಾರ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು, ಮೇ 29: ಮೈಸೂರು ಜಿಲ್ಲೆಯ ತಿ.ನರಸೀಪುರದ ಮೂಗೂರಿನ ಬಳಿ ಕಾರು ಮತ್ತು ಬಸ್ ನಡುವೆಯಾಗಿರುವ ಅಪಘಾತದಲ್ಲಿ ಮೃತಪಟ್ಟಿರುವ ಬಳ್ಳಾರಿ ಮೂಲದ 10 ಜನರ ಕುಟುಂಬದವರಿಗೆ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳು ಕೂಡಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಮಾಡುವಂತೆ ಸೂಚಿಸಲಾಗಿದೆ.ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಬಿಜೆಪಿ ಒತ್ತಾಯಿಸಿರುವ ಕುರಿತು ಮಾತನಾಡಿದ ಮುಖ್ಯಮಂತ್ರಿಗಳು ನರೇಂದ್ರ ಮೋದಿಯವರು 15 ಲಕ್ಷ ನೀಡುವುದಾಗಿ, 2 ಕೋಟಿ ಹುದ್ದೆಗಳನ್ನು ಸೃಷ್ಟಿ ಮಾಡುವುದಾಗಿ, ರೈತರ ಆದಾಯ ದ್ವಿಗುಣ ಮಾಡುವುದಾಗಿ ಹೇಳಿದ್ದರು ಮಾಡಿದರೇ? ಅಚ್ಛೆ ದಿನಗಳನ್ನು ತಂದಿದ್ದಾರೆಯೇ ಎಂದು ಪ್ರಶ್ನಿಸಿದರು.

CM Siddaramaiah Announces 2 Lakh Compensation To T. Narasipur Accident Victims Family

ವಿದ್ಯುತ್ ಬಿಲ್ ಕಟ್ಟುವುದಿಲ್ಲ ಎಂದು ಮಾಜಿ ಸಚಿವ ಅಶೋಕ್ ಅವರ ಹೇಳಿಕೆ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆ ಉತ್ತರಿಸಿದ ಅವರು, ಅಶೋಕ್ ಮಾತಿಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.

ಟಿ ನರಸೀಪುರ ಬಳಿ ಕಾರು ಬಸ್ ನಡುವೆ ಭೀಕರ ರಸ್ತೆ ಅಪಘಾತ ಪ್ರಕರಣದ ಬಳಿಕ ಮೈಸೂರಿನ ಆಸ್ಪತ್ರೆಗೆ ಸಚಿವ ನಾಗೇಂದ್ರ ಅವರು ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಕುಟುಂಬಸ್ಥರ ಬಗ್ಗೆ ಮಾಹಿತಿ ನೀಡಿದ ಸಚಿವರು, ಮೃತಪಟ್ಟಿರುವ ಹತ್ತು ಜನರು ಒಂದೇ ಕುಟುಂಬದವರು. ಚುನಾವಣೆಯಲ್ಲಿ ನನ್ನ ಪರವಾಗಿ ಈ ಕುಟಂಬದವರು ಕೆಲಸ ಮಾಡಿದ್ದರು. ನಾನು ಈ ಕುಟುಂಬವನ್ನು ಬಹಳ ಹತ್ತಿರದಿಂದ ಬಲ್ಲೆ. ಎಲ್ಲರಿಗೂ ಅನ್ನ ಹಾಕುತ್ತಿದ್ದವರೇ ಇಂದು ದುರ್ಮರಣಕ್ಕೆ ಒಳಗಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+