Get Updates
Get notified of breaking news, exclusive insights, and must-see stories!

ಎಸ್‌ಸಿ, ಎಸ್‌ಟಿ ಸಮುದಾಯದಕ್ಕೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಿಎಂ; ಏನದು?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಅನುಸೂಚಿತ ಜಾತಿಗಳು, ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳಿಗೆ ಸಿಎಂ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಕಳೆದ ವರ್ಷ ಎಸ್‌ಸಿಎಸ್‌‌ಪಿ, ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ 38,793 ಕೋಟಿ ಬಿಡುಗಡೆಯಾಗಿದ್ದು ಇದರಲ್ಲಿ ಶೇ.97ರಷ್ಟು ಪ್ರಗತಿ ಸಾಧಿಸಿದ್ದೇವೆ. ಕೇಂದ್ರ ಸರ್ಕಾರದಿಂದ ಬರಬೇಕಾಗಿದ್ದ 880 ಕೋಟಿ ಅನುದಾನ ಬಿಡುಗಡೆಯಾಗಿಲ್ಲ. ಇದನ್ನು ಬಿಡುಗಡೆ ಮಾಡಿಸಲು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆ ಜಾರಿಗೊಂಡು 10 ವರ್ಷಗಳಾದ ಹಿನ್ನೆಲೆ ಇದರ ಅನುಷ್ಠಾನದ ಪ್ರಗತಿ ಬಗ್ಗೆ ಐಸೆಕ್ ವತಿಯಿಂದ ಮೌಲ್ಯಮಾಪನ ನಡೆಸಿದ್ದೇವೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಸಂಖ್ಯೆ ಹೆಚ್ಚಿರುವ 39 ತಾಲೂಕುಗಳನ್ನು ಗುರುತಿಸಿ ಅಧ್ಯಯನ ಕೈಗೊಳ್ಳಲಾಗಿದೆ. ಶಿಕ್ಷಣ, ಆರೋಗ್ಯ, ಜೀವನಮಟ್ಟ ಸುಧಾರಣೆ ಮತ್ತು ಬಡತನ ನಿರ್ಮೂಲನೆ ಮಾನದಂಡಗಳನ್ನು ಪರಿಗಣಿಸಿ ಸಮೀಕ್ಷೆ ನಡೆಸಲಾಗಿದೆ. ಅಭಿವೃದ್ಧಿ ಅನುದಾನ ಬಿಡುಗಡೆಯಲ್ಲಿ ಈ ಅವಧಿಯಲ್ಲಿ ಶೇ 9.6ರಷ್ಟು ವಾರ್ಷಿಕ ಪ್ರಗತಿ ಸಾಧಿಸಲಾಗಿದೆ. ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ರಾಜ್ಯ ಕಳೆದ 10 ವರ್ಷಗಳಲ್ಲಿ ವಿವಿಧ ಮಾನದಂಡಗಳಲ್ಲಿ ಮುಂಚೂಣಿಯಲ್ಲಿರುವುದು ಸ್ಪಷ್ಟವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

CM Siddaramaiah Announces Big Relief For SC ST Communities What Is The Good News

ಈ ಕಾಯ್ದೆ ಪ್ರಕಾರ ಪ್ರತಿವರ್ಷ ಕನಿಷ್ಠ ಶೇ.24.1 ರಷ್ಟು ಅನುದಾನ ನೀಡಬೇಕು. ಆದರೆ 2019-20ರ ಅವಧಿಯಲ್ಲಿ ನಿಗದಿತ ಶೇಕಡಾಕ್ಕಿಂತ ಕಡಿಮೆ ಅನುದಾನ ಬಿಡುಗಡೆ ಮಾಡಲಾಗಿದೆ. ಕಾಯ್ದೆ ಜಾರಿ ಬಳಿಕ ಒಟ್ಟು ರೂ.2.97 ಲಕ್ಷ ಕೋಟಿ ವೆಚ್ಚ ಮಾಡಲಾಗಿದೆ. ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗುತ್ತಿದೆಯೇ ಎಂಬುವುದರ ಬಗ್ಗೆ ಪರಿಶೀಲನೆ ನಡೆಸಬೇಕು. ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ ವಿನಿಯೋಗ, ಸಾಮಾಜಿಕ, ಆರ್ಥಿಕ ಪರಿಸ್ಥಿತಿ ಸುಧಾರಣೆ, ಜೀವನ ಮಟ್ಟ ಮತ್ತು ವಾಸಸ್ಥಳಗಳ ಅಭಿವೃದ್ಧಿಪಡಿಸುವುದು ಕಾಯ್ದೆಯ ಉದ್ದೇಶ. ಯಾವುದೇ ಕಾರಣಕ್ಕೂ ಕಾಯ್ದೆಯ ಆಶಯಕ್ಕೆ ಭಂಗ ಬರಬಾರದು. ಆಯಾ ಇಲಾಖೆಯವರು ಸಮರ್ಪಕ ಕ್ರಿಯಾ ಯೋಜನೆ ರೂಪಿಸಿ ಪರಿಶಿಷ್ಟ ಜಾತಿ/ಪಂಗಡದ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಪರಿಸ್ಥಿತಿ ಸುಧಾರಣೆಗೆ ಯೋಜನಾಬದ್ಧವಾಗಿ ಕಾರ್ಯನಿರ್ವಹಿಸಬೇಕು. ಕಳೆದ 10 ವರ್ಷಗಳಲ್ಲಿ ನಿರೀಕ್ಷಿತ ಬದಲಾವಣೆ ಸಾಧ್ಯವಾಗಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

42,017 ಕೋಟಿ ರೂ. ಬಿಡುಗಡೆ

ವಿವಿಧ ಕಲ್ಯಾಣ ಯೋಜನೆಗಳಡಿ ಬ್ಯಾಂಕ್‌ಗಳು ಸಕಾಲದಲ್ಲಿ ಹಣಕಾಸು ನೆರವು ಒದಗಿಸುವುದನ್ನು ಖಾತ್ರಿಪಡಿಸಬೇಕು. ಸಾಲ ಸೌಲಭ್ಯ ಒದಗಿಸಲು ವಿಳಂಬ ಧೋರಣೆ ತೋರಿಸುವ ಬ್ಯಾಂಕ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರದ ಯೋಜನೆಗಳು ಶೇ 100ರಷ್ಟು ಎಸ್‌ಸಿ/ಎಸ್‌ಟಿ ಜನರಿಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು. ಈ ವರ್ಷ ರೂ. 42,017.51 ಕೋಟಿ ಹಂಚಿಕೆ ಮಾಡಿದ್ದೇವೆ. ಈ ಅನುದಾನವನ್ನು ಸಮರ್ಪಕವಾಗಿ ವೆಚ್ಚ ಮಾಡಲು ಅದಷ್ಟು ಬೇಗನೆ ಕ್ರಿಯಾ ಯೋಜನೆ ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನ ಕಾರ್ಯ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅನುದಾನ ಬಾಕಿ ಉಳಿಯಬಾರದು. ಶೇ.100ರಷ್ಟು ಪ್ರಗತಿ ಸಾಧಿಸಲೇಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಾಯ್ದೆ ಪ್ರಕಾರ ಶಿಕ್ಷೆ ವಿಧಿಸುವ ಕಾರ್ಯ ಆಗಬೇಕು ಎಂದೂ ಎಚ್ಚರಿಕೆ ನೀಡಿದ್ದಾರೆ.

ದೇವದಾಸಿ ಪದ್ಧತಿ ನಿರ್ಮೂಲನೆಗೆ ಕ್ರಮ

ದೇವದಾಸಿ ಪುನರ್‌ವಸತಿ ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಉದ್ದೇಶದಿಂದ ಸೆಪ್ಟಂಬರ್‌ ಮೊದಲ ವಾರದಿಂದ ಪುನರ್‌ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ದೇವದಾಸಿ ಪದ್ಧತಿಯನ್ನು ಈಗಾಗಲೇ ನಿರ್ಬಂಧಿಸಲಾಗಿದ್ದು, ಯಾವುದೇ ಕಾರಣಕ್ಕೂ ದೇವದಾಸಿ ಪದ್ಧತಿ ಮುಂದುವರೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ದೇವದಾಸಿ ಪದ್ಧತಿಯನ್ನು ತೊಡೆದು ಹಾಕಲು ಕಾನೂನಿಗೆ ಸೂಕ್ತ ತಿದ್ದುಪಡಿ ತರಲಾಗುವುದು. ಹೆಣ್ಣು ಮಕ್ಕಳನ್ನು ದೇವದಾಸಿ ಪದ್ಧತಿಗೆ ದೂಡುವ ಪಾಲಕರು ಸೇರಿದಂತೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ದೇವದಾಸಿ ಪದ್ಧತಿ ಇನ್ನೂ ಜೀವಂತವಾಗಿದೆ ಎಂದರೆ ನಾವೆಲ್ಲರೂ ತಲೆತಗ್ಗಿಸಬೇಕು ಎಂದಿದ್ದಾರೆ. ದೇವದಾಸಿಯರೂ, ಸಫಾಯಿ ಕರ್ಮಚಾರಿಗಳು ಮುಂತಾದ ಸಮಾಜದಿಂದ ನಿರ್ಲಕ್ಷಿತ ವರ್ಗಗಳ ಜೀವನಮಟ್ಟ ಸುಧಾರಣೆಗೆ ಸರಿಯಾದ ಕಾರ್ಯಕ್ರಮಗಳನ್ನು ರೂಪಿಸಬೇಕು. ಕಾರ್ಯಕ್ರಮಗಳು ಯಶಸ್ವಿಯಾಗಿ ಕಾರ್ಯರೂಪಕ್ಕೆ ಬರದೇ ಹೋದರೆ, ಸಂವಿಧಾನದ ಉದ್ದೇಶಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+