₹600 ಕೋಟಿ ವೆಚ್ಚದ ಅನುಭವ ಮಂಟಪದ ಲೋಕಾರ್ಪಣೆ ಯಾವಾಗ? ಸಿಎಂ ಮಹತ್ವದ ಅಪ್ಡೇಟ್
ಸುಮಾರು 600 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಅನುಭವ ಮಂಟಪದ ಲೋಕಾರ್ಪಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಅಪ್ಡೇಟ್ ಕೊಟ್ಟಿದ್ದಾರೆ. ಬಸವ ಬಳಗಗಳ ಒಕ್ಕೂಟ ಹಾಗೂ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಆಯೋಜಿಸಿದ್ದ ಬಸವ ಜಯಂತಿ-2025 ಹಾಗೂ "ನಮ್ಮ ನಡೆ ಅನುಭವ ಮಂಟಪದ ಕಡೆ" ಉದ್ಘಾಟನಾ ಕಾರ್ಯಕ್ರಮದಲ್ಲಿ ಈ ಬಗ್ಗೆ ಸಿಎಂ ಮಾತನಾಡಿದ್ದಾರೆ.
ನಮ್ಮ ಸರ್ಕಾರ ಆರಂಭಿಸಿದ 600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪವನ್ನು ಮುಂದಿನ ವರ್ಷ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಸಿಹಿಸುದ್ದಿ ನೀಡಿದ್ದಾರೆ. ಬಸವ ಬಳಗಗಳ ಒಕ್ಕೂಟದ ಬೇಡಿಕೆಯಂತೆ ಬಸವ ಭವನ ನಿರ್ಮಿಸಲು ಹೆಚ್ಚಿನ ಅನುದಾನವನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಸಕಲ ವೃತ್ತಿಗಳೂ ಪವಿತ್ರ ಎನ್ನುವ ಮಹಾನ್ ಮಾನವೀಯ ಸಂದೇಶವನ್ನು ಜಗತ್ತಿಗೆ ನೀಡಿದ ಬಸವಣ್ಣನವರು ಕ್ರಾಂತಿಪುರುಷ ಮಾತ್ರವಲ್ಲ, ವಿಶ್ವ ವಿಖ್ಯಾತ ಆರ್ಥಿಕ ತಜ್ಞರು ಕೂಡ. ಕಾಯಕ ಮತ್ತು ದಾಸೋಹದ ಶ್ರಮ ಸಂಸ್ಕೃತಿಯ ಮಹತ್ವವನ್ನು ಬಸವಣ್ಣ ಇಡೀ ವಿಶ್ವಕ್ಕೆ ನೀಡಿದರು. ಬಸವಾದಿ ಶರಣರಿಂದ ಆದ ಜಾತಿ ವ್ಯವಸ್ಥೆ ವಿರುದ್ಧದ ಸಾಮಾಜಿಕ ಕ್ರಾಂತಿ ಪ್ರಪಂಚದ ಬೇರೆ ಎಲ್ಲೂ ನಡೆದಿಲ್ಲ. ಸಮ ಸಮಾಜ ಮತ್ತು ಜಾತ್ಯತೀತ ಸಮಾಜ ನಿರ್ಮಾಣಕ್ಕಾಗಿ ಹೋರಾಡಿದ ಬಸವಾದಿ ಶರಣರು ನುಡಿದಂತೆ ನಡೆದರು ಎಂದು ಸ್ಮರಿಸಿದ್ದಾರೆ.
ಜಾತಿ, ವರ್ಗ ರಹಿತ ಮಾನವೀಯ ಸಮಾಜ ಅವರ ತುಡಿತವಾಗಿತ್ತು. ಬಸವಾದಿ ಶರಣರ ಅನುಭಾವವೇ ವಚನಗಳಾಗಿವೆ. ವಚನ ಎಂದರೆ ಮಾತು. ಕನ್ನಡ ಸಾಹಿತ್ಯದಲ್ಲಿ ವಚನ ಮತ್ತು ದಾಸ ಸಾಹಿತ್ಯ ದೊಡ್ಡ ಮೈಲಿಗಲ್ಲು. ಅಕ್ಷರ ಸಂಸ್ಕೃತಿಯಿಂದ ವಂಚಿತರನ್ನಾಗಿ ಮಾಡಲಾಗಿದ್ದವರಿಗೆ ವಚನ ಸಾಹಿತ್ಯ ಆಡು ಮಾತಿನ ಮೂಲಕ ತಲುಪಿತು ಎಂದಿದ್ದಾರೆ.

ಸಂಸ್ಕೃತ ಕಲಿಯುವ ಶೂದ್ರರ ಕಿವಿಗೆ ಕಾದ ಸೀಸ ಹುಯ್ಯುವ ಶಿಕ್ಷೆ ಇದ್ದಿದ್ದರಿಂದ ಶೂದ್ರ ಸಮುದಾಯ ಶಿಕ್ಷಣದಿಂದ ವಂಚಿತರಾದರು. ನನ್ನ ಅಪ್ಪ, ಅಮ್ಮ ಇಬ್ಬರೂ ಶಿಕ್ಷಣದಿಂದ ವಂಚಿತರಾಗಿದ್ದರು. ರಾಜಪ್ಪ ಮೇಸ್ಟ್ರು ಕಾರಣದಿಂದ ನಾನು ನೇರವಾಗಿ ಐದನೇ ತರಗತಿಗೆ ದಾಖಲಾಗಿ ಶಿಕ್ಷಣ ಪಡೆದು ಎರಡು ಬಾರಿ ಮುಖ್ಯಮಂತ್ರಿಯಾದೆ. ಅಂಬೇಡ್ಕರ್ ಅವರ ಕಾರಣದಿಂದ ನನಗೆ ಶಿಕ್ಷಣ ಸಿಕ್ಕರೆ, ಸಂವಿಧಾನದ ಕಾರಣದಿಂದ ನಾನು ಮುಖ್ಯಮಂತ್ರಿಯಾದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಗೊತ್ತಿದ್ದೋ ಗೊತ್ತಿಲ್ಲದೆಯೋ ಮೌಢ್ಯ, ಕಂದಾಚಾರಗಳನ್ನು ಆಚರಿಸುತ್ತೇವೆ. ಇದನ್ನು ಬಿಟ್ಟಾಗ ಮಾತ್ರ ಬಸವಾದಿ ಶರಣರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತೆ. ಮೌಡ್ಯ, ಕಂದಾಚಾರ, ಜಾತಿ ತಾರತಮ್ಯದ ವಿರುದ್ಧ ವಚನಕ್ರಾಂತಿ ಆರಂಭಿಸಿದ್ದರಿಂದ ನಾನು ಬಸವಾದಿ ಶರಣರ ಅನುಯಾಯಿ. ದುಡಿಯುವವರು ಯಾರೋ, ಕೂತು ತಿನ್ನುವವರು ಇನ್ಯಾರೋ ಎನ್ನುವ ಪರಿಸ್ಥಿತಿ ಸಮಾಜದಲ್ಲಿತ್ತು. ಈ ತಾರತಮ್ಯ ಮತ್ತು ಮೇಲು-ಕೀಳು ಹೋಗಲಾಡಿಸಲು ಬಸವಣ್ಣನವರ ನೇತೃತ್ವದಲ್ಲಿ ವಚನಕ್ರಾಂತಿ ಶುರುವಾಯ್ತು, ಈ ಕಾರಣಕ್ಕೆ ನಾನು ಅವರ ಅನುಯಾಯಿ ಎಂದು ಸಿದ್ದರಾಮಯ್ಯ ಈ ಹಿಂದೆ ಹೇಳಿದ್ದರು.
ಕ್ರಾಂತಿಯ ಪ್ರಭಾವದಲ್ಲಿ ಸಮಾಜ ಪೂರ್ಣ ಬದಲಾಗುವ ಮೊದಲೇ ವಚನ ಕ್ರಾಂತಿಗೆ ಅಡ್ಡಗಾಲು ಹಾಕಿದರು. ಆದ್ದರಿಂದ ಇನ್ನೂ ಬಸವಣ್ಣನವರ ಇವ ನಮ್ಮವ ಇವ ನಮ್ಮವ ಎನ್ನುವ ಆಶಯ ಈಡೇರದೆ ಜಾತಿ ವ್ಯವಸ್ಥೆ ಗಟ್ಟಿಯಾಗಿದೆ. ಬಸವಾದಿ ಶರಣರು ಹೇಳಿದಂತೆ ಇವನಾರವ ಎಂದು ಎಣಿಸದೆ ಇವ ನಮ್ಮವ ಎಂದು ಎಣಿಸಬೇಕು. ಅವರ ವಚನಗಳನ್ನು ಹೇಳುತ್ತಲೇ ನೀವು ಯಾವ ಜಾತಿ ಎಂದು ಕೇಳುತ್ತೇವೆ. ಇದನ್ನು ಮೊದಲು ನಾವು ಬಿಡಬೇಕು. ಆರ್ಥಿಕ, ಸಾಮಾಜಿಕ ಸಮಾನತೆ ಹೋಗಲಾಡಿಸಲು, ಬಸವಾದಿ ಶರಣರ ಕನಸು ನನಸಾಗಿಸಲು ಶ್ರಮಿಸಿದ್ದಲ್ಲಿ ಅವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ. ಇದೇ ಕಾರಣಕ್ಕೆ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದಾಗಿ ತಿಳಿಸಿದ್ದರು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications