ಯಾದವ ಸಮುದಾಯಕ್ಕೆ ಗುಡ್‌ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ
ಹಿಂದುಳಿದಿರುವ ಯಾದವ ಸಮುದಾಯಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಿಹಿಸುದ್ದಿ ಕೊಟ್ಟಿದ್ದಾರೆ. ಯಾದವ ಸಮುದಾಯದ ಬಹುವರ್ಷಗಳ ಬೇಡಿಕೆ ಈಡೇರಿಸುವ ಭರಸವೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಗೊಲ್ಲ (ಯಾದವ) ಹಣಬರ ಸಂಘದ ಶತಮಾನೋತ್ಸವ ಹಾಗೂ ಯಾದವಾನಂದ ಸ್ವಾಮಿಗಳ 16ನೇ ಪಟ್ಟಾಭಿಷೆಕ ಕಾರ್ಯಕ್ರಮದಲ್ಲಿ ಈ ಬಗ್ಗೆ ಮಾತನಾಡಿದ್ದಾರೆ. ಗೊಲ್ಲ ಸಮಾಜದವರೂ ಸೇರಿದಂತೆ ಎಲ್ಲ ತಳಸಮುದಾಯದವರು ಉತ್ತಮ ಶಿಕ್ಷಣ ಪಡೆದು ವೈದ್ಯರು, ಐಪಿಎಸ್, ಐಎಎಸ್ ಅಧಿಕಾರಿಗಳು, ವಕೀಲರಾಗಬಹುದು. ಯಾದವ ಸಮುದಾಯಕ್ಕೆ ಅಭಿವೃದ್ಧಿ ನಿಗಮ ರಚಿಸುವ ಬೇಡಿಕೆ ಇದೆ. ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿ, ಆರ್ಥಿಕ ಸಹಾಯ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ತಿಳಿಸಿದಂತೆ ಶಿಕ್ಷಣ, ಸಂಘಟನೆ, ಹೋರಾಟಗಳು ಶೋಷಿತ ವರ್ಗಗಳಿಗೆ ಮೂಲಮಂತ್ರವಾಗಬೇಕು. ಆಗ ಮಾತ್ರ ಗುಲಾಮಗಿರಿಯನ್ನು ಮೆಟ್ಟಿನಿಂತು, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸಾಧ್ಯ. ಯಾದವ ಸಂಘಕ್ಕೆ ನೂರು ವರ್ಷಗಳು ಸಂದಿದ್ದು, ಸಮಾಜವನ್ನು ಸಂಘಟಿಸಿ ಮುಖ್ಯವಾಹಿನಿಗೆ ತರಲು ಸಹಕಾರಿಯಾಗಿದೆ. ಸಮಾಜದ ಸಂಘಟನೆಯತ್ತ ಯಾದವ ಸಮುದಾಯದ ಮುಖಂಡರು ಗಮನಹರಿಸಬೇಕು. ಎಲ್ಲ ಜಾತಿಗಳು ತಮ್ಮ ಕಸುಬಿನಿಂದಲೇ ನಿರ್ಮಾರ್ಣವಾಗಿವೆ. ಸಮಾಜವನ್ನು ವಿಭಜಿಸಲು, ಕಸುಬಿನ ಆಧಾರದಲ್ಲಿ ಜಾತಿಯೆಂದು ಕರೆಯಲಾಯಿತು. ಗೊಲ್ಲ ಜಾತಿಯಲ್ಲಿ ಕಾಡು ಗೊಲ್ಲ, ಅಡವಿ ಗೊಲ್ಲ ಸೇರಿದಂತೆ ಹಲವು ಉಪಜಾತಿಗಳಿವೆ ಎಂದಿದ್ದಾರೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ದೀನದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಅವಕಾಶವಂಚಿತರು ಸಮಾಜದಲ್ಲಿ ಏಳಿಗೆಯನ್ನು ಕಾಣಲು ಶಿಕ್ಷಣ ಅತ್ಯಗತ್ಯ. ಶಿಕ್ಷಣ, ಸಂಘಟನೆ, ಹೋರಾಟ ಎಂಬ ಮೂರುಮಂತ್ರಗಳನ್ನು ಶೋಷಿತ ವರ್ಗಗಳಿಗೆ ಬೋಧಿಸಿದ್ದಾರೆ. ಸಮಾಜದಲ್ಲಿ ಅಸಮಾನತೆ ಸಾಕಷ್ಟಿದೆ. ಬಹುಸಂಖ್ಯಾತರು ಅಕ್ಷರಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಮನುಸ್ಮೃತಿಯ ಮೂಲಕ ಸಮಾಜದಲ್ಲಿ ಬ್ರಾಹ್ಮಣರು, ವೈಶ್ಯರು, ಕ್ಷತ್ರಿಯರು ಹಾಗೂ ಶೂದ್ರರು ಹೀಗೆ ಚತುರ್ವಣ ಪದ್ಧತಿಯನ್ನು ಜಾರಿಗೆ ತಂದು, ಶೂದ್ರರಿಗೆ ಶಿಕ್ಷಣದ ಅವಕಾಶವನ್ನು ನೀಡಲಾಗಿರಲಿಲ್ಲ. ಆದ್ದರಿಂದ ಸಮಾನ ಅವಕಾಶ ಹಾಗೂ ಶಿಕ್ಷಣ ಪಡೆದ ವರ್ಗಗಳಷ್ಟೇ ಸಮಾಜದಲ್ಲಿ ಉನ್ನತಿಯನ್ನು ಕಾಣಲು ಸಾಧ್ಯವಾಯಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಸಮಾನತೆಯಿರುವ ವೈರುಧ್ಯದ ಸಮಾಜಕ್ಕೆ ಕಾಲಿಡುತ್ತಿದ್ದೇವೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ತಿಳಿಸಿದ್ದರು. ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮಾನತೆ ಬಂದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಸಮಾಜದಲ್ಲಿ ಅವಕಾಶ ವಂಚಿತರಿಗೆ, ಬಡವರಿಗೆ, ಶೋಷಿತರಿಗೆ ಸಮಾನ ಅವಕಾಶ ಹಾಗೂ ಸಮಾನತೆಯನ್ನು ಪಡೆಯಲು ಹೋರಾಟ ಮಾಡಬೇಕು ಎಂದು ಹೇಳಿದ್ದಾರೆ.

1918ರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ರವರು ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ವಿವಿಧ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡುವ ಸಂಬಂಧ ಮಿಲ್ಲರ್ ಆಯೋಗವನ್ನು ರಚಿಸಿದರು. ಬ್ರಾಹ್ಮಣೇತರ ಸಮುದಾಯಗಳಿಗೆ ಶೇ.75 ರಷ್ಟು ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿಯನ್ನು ನೀಡಲಾಯಿತು. ನಂತರ ಮೀಸಲಾತಿ ಸೌಲಭ್ಯಕ್ಕಾಗಿ ಹಲವು ಆಯೋಗಗಳನ್ನು ರಚಿಸಲಾಗಿದೆ. ಶಿಕ್ಷಣ ಪಡೆಯದಿದ್ದರೆ ಗುಲಾಮಗಿರಿ ಹೆಚ್ಚಲಿದ್ದು, ಸ್ವಾಭಿಮಾನದ ಬದುಕು ಸಾಧ್ಯವಾಗುವುದಿಲ್ಲ. ನಾನು ಶಿಕ್ಷಣ ಪಡೆದಿದ್ದರಿಂದ ಮಾತ್ರ ಮುಖ್ಯಮಂತ್ರಿಯ ಹುದ್ದೆಗೇರಲು ಸಾಧ್ಯವಾಯಿತು ಎಂದು ಸಿದ್ದರಾಮಯ್ಯ ನೆನೆದಿದ್ದಾರೆ.
ಜಿಎಸ್‌ಟಿ ಸಂಗ್ರಹದಲ್ಲಿ ಎರಡನೇ ಸ್ಥಾನ
ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ. ನಿಮ್ಮ ಕಾರಣದಿಂದ ರಾಜ್ಯ ಜಿಎಸ್‌ಟಿ ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಬ್ಬಂದಿ ಮತ್ತು ಆಡಳಿತಾ ಸುಧಾರಣಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯಲ್ಲಿ 2023ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ಸಮಾಜದ ನಾಲ್ಕೂ ಅಂಗಗಳಾದ ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಮತ್ತು ಪತ್ರಿಕಾ ರಂಗದ ಕೆಲಸ ಸಂವಿಧಾನದ ಆಶಯವನ್ನು ಈಡೇರಿಸುವುದೇ ಆಗಿದೆ. ಸಂವಿಧಾನದ ಆಶಯದಂತೆ ಜಾತ್ಯತೀತ ಸಮಾಜ ನಿರ್ಮಿಸಿ, ಜಾತಿ ಅಸಮಾನತೆಯನ್ನು ಅಳಿಸುವುದಾಗಿದೆ. ಬುದ್ಧ, ಬಸವ, ಗಾಂಧೀಜಿ ಹೇಳಿದ್ದನ್ನೇ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅಳವಡಿಸಿದ್ದಾರೆ. ಇವರೆಲ್ಲರ ಆಶಯದಂತೆ ನಾವು ಸಂವಿಧಾನ ಪಾಲಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದ್ದಾರೆ.
5.5 ಲಕ್ಷ ಸರ್ಕಾರಿ ನೌಕರರಿಗೆ ಇವತ್ತಿನ ಪ್ರಶಸ್ತಿ ಪುರಸ್ಕೃತರು ಸ್ಫೂರ್ತಿಯಾಗಬೇಕು. ಪ್ರಶಸ್ತಿ ಪುರಸ್ಕೃತರ ಜವಾಬ್ದಾರಿ ಈಗ ಹೆಚ್ಚಾಗಿದೆ. ಹೀಗಾಗಿ ಎಲ್ಲಾ ಸರ್ಕಾರಿ ನೌಕರರು ಕರ್ತವ್ಯಪ್ರಜ್ಞೆ ಹೆಚ್ಚಿಸಿಕೊಂಡು ಜನರ ಸೇವೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು. ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗದ ಹೊರತು ನಮಗೆ ಸಿಕ್ಕಿರುವ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥವಿಲ್ಲ. ಹೀಗಾಗಿ ಅಸಮಾನತೆಯನ್ನು ಬೇರು ಸಹಿತ ಕಿತ್ತು ಹಾಕುವ ದಿಕ್ಕಿನಲ್ಲಿ ನಾವು ಕರ್ತವ್ಯ ನಿರ್ವಹಿಸಬೇಕು ಎಂದಿದ್ದಾರೆ.
ರಾಜಸ್ತಾನದ ನಂತರ ಅತಿ ಹೆಚ್ಚು ಒಣಭೂಮಿ ಹೊಂದಿರುವ ರಾಜ್ಯ ಕರ್ನಾಟಕ. ಇಲ್ಲಿ ಮಳೆಗಾಲದಲ್ಲಿ ಬೀಳುವ ಮಳೆ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ರೈತರಿಗೆ ಅನುಕೂಲವಾಗಲಿ ಎಂದು ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ ಕೃಷಿಭಾಗ್ಯ ಯೋಜನೆಯನ್ನು ಜಾರಿಗೆ ಕೊಟ್ಟಿದ್ದೆ. ನಂತರ ಬಂದ ಬಿಜೆಪಿ ಸರ್ಕಾರ ಈ ಯೋಜನೆಯನ್ನು ನಿಲ್ಲಿಸಿತ್ತು. ಈಗ ಮತ್ತೆ ಈ ಯೋಜನೆಗೆ ಚಾಲನೆ ನೀಡಿದ್ದೇನೆ. ಇದಕ್ಕಾಗಿ ಬಜೆಟ್‌ನಲ್ಲಿ 200 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದ್ದೇನೆ ಎಂದಿದ್ದಾರೆ.
ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ. ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ. ಇದನ್ನು ಮಾಡಿದ್ದು ನಮ್ಮ ಸರ್ಕಾರವೇ, ಈಗ ಕಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ. ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 150 ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಇದರಲ್ಲಿ 102 ಕಾರ್ಯಕ್ರಮಗಳು ಪೂರ್ಣಗೊಂಡಿವೆ. ಉಳಿದವು ಸದ್ಯದಲ್ಲೇ ಪೂರ್ಣಗೊಳ್ಳಲಿವೆ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 6,928 ಕೋಟಿ ರೂಪಾಯಿ ಮೊತ್ತದ ಕೆಲಸಗಳು ನಡೆಯುತ್ತಿವೆ. ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ನಿರಂತರವಾಗಿ ಯೋಜನೆ, ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತಿದೆ ಎಂದೂ ಸಿದ್ದರಾಮಯ್ಯ ಹೇಳಿದ್ದಾರೆ.
ಜನಿವಾರ ತೆಗೆದವರ ವಿರುದ್ಧ ಕ್ರಮ
ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಕ್ರಮ ನಿಯಮ ಬಾಹಿರವಾದುದ್ದು. ಪರೀಕ್ಷೆಯಲ್ಲಿ ಅಕ್ರಮ ನಡೆಸಬಹುದಾದ ಸಾಧ್ಯತೆಗಳನ್ನು ಪರಿಗಣಿಸಿ ಮಾತ್ರವೇ ಕ್ರಮ ಕೈಗೊಳ್ಳಬೇಕು, ವಿನಃ ಹೀಗೆ ಅನವಶ್ಯಕವಾಗಿ ಇತರರ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾದ ನಿಯಮ ಹೇರಿಕೆ ಮಾಡಬಾರದು. ಇಂಥದ್ದನ್ನು ನಾವು ಸಹಿಸುವುದಿಲ್ಲ. ತಪ್ಪಿತಸ್ಥ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.
-
ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು












Click it and Unblock the Notifications