ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ
ಮೈಸೂರು: ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸಿಹಿಸುದ್ದಿ ನೀಡಿದ್ದಾರೆ. ವಿಧಾನ ಪರಿಷತ್‌ನ ನೂತನ ಸದಸ್ಯ ಕೆ.ಶಿವಕುಮಾರ್ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಮೈಸೂರು ವಿಶ್ವವಿದ್ಯಾಲಯದ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ನಿವೃತ್ತ ನೌಕರರ ಪಿಂಚಣಿ ನೀಡಲು ಅನುದಾನ ಬಿಡುಗಡೆ ಜೊತೆಗೆ ಮೈಸೂರು ವಿವಿ ಸರಿಪಡಿಸಲು ವಿಶೇಷ ಗಮನ ಹರಿಸಿ, ವಿಶೇಷ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ದಲಿತರು ಪತ್ರಕರ್ತರಾಗುವುದು ಬಹಳ ಅಪರೂಪ. ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಗಾಂಧಿಯವರು ಪತ್ರಕರ್ತರಾಗಿದ್ದರು. ಎಲ್ಲರೂ ಅವರಂತೆ ಆಗಲು ಸಾಧ್ಯವಿಲ್ಲ. ಆದರೆ ಅವರು ಹಾಕಿ ಕೊಟ್ಟ ದಾರಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಬೇಕು. ಅದನ್ನು ಶಿವಕುಮಾರ್ ಅವರು ಮಾಡಿಕೊಂಡು ಬಂದಿದ್ದಾರೆ. ಸಾಮಾಜಿಕ ವ್ಯವಸ್ಥೆಗಳ ಬಗ್ಗೆ ಚಿಂತಿಸಿ ಪರಿಹಾರಗಳನ್ನು ಹುಡುಕುವ ಕೆಲಸವನ್ನು ಪತ್ರಕರ್ತರಾಗಿ ಶಿವಕುಮಾರ್ ಸದಾ ಮಾಡಿದ್ದಾರೆ ಎಂದು ಶ್ಲಾಘಿಸಿದ್ದಾರೆ. ದಲಿತರ ಪರವಾಗಿ ವಿಧಾನ ಪರಿಷತ್‌ನಲ್ಲಿ ಶಿವಕುಮಾರ್ ಕೆಲಸ ಮಾಡಬೇಕು. ಧ್ವನಿಯಿಲ್ಲದವರ, ಅವಕಾಶಗಳಿಂದ ವಂಚಿತರಾದವರ ಪರವಾಗಿ ಶಿವಕುಮಾರ್ ಕೆಲಸ ಮಾಡಲಿ ಎಂದು ಕಿವಿಮಾತು ಹೇಳಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇಷ್ಟು ವರ್ಷಗಳಾದರೂ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯನ್ನು ರೂಪಿಸಿಲ್ಲ. ಬಡ್ತಿಯಲ್ಲಿ ಮೀಸಲಾತಿಯನ್ನು ಅಸಾಂವಿಧಾನಿಕ ಎಂದು ಸುಪ್ರೀಂಕೋರ್ಟ್ ಹೇಳಿದ್ದರೂ, ರಾಜ್ಯದಲ್ಲಿ ಸಮಿತಿ ರಚಿಸಿ ವರದಿಯನ್ನು ಜಾರಿ ಮಾಡಲಾಯಿತು, ಇದು ಊರ್ಜಿತವೂ ಆಯಿತು. ಕೇಂದ್ರ ಸರ್ಕಾರ ಏಕೆ ಇದನ್ನು ಜಾರಿ ಮಾಡಬಾರದು? ದಲಿತ ಸಮುದಾಯಕ್ಕೆ ಸೇರಿದವರೇ ಇದರ ವಿರುದ್ಧವಾಗಿ ವಾದ ಮಾಡುವುದು ಇದೆ. ಮನರೇಗಾ ಯೋಜನೆಯನ್ನು ಕೈಬಿಟ್ಟು, ವಿಬಿ ಜಿ ರಾಮ್ ಜಿ ಎಂದು ತಂದಿದ್ದಾರೆ. ನಮ್ಮಲ್ಲಿ ಎಸ್.ಸಿ ಹಾಗೂ ಎಸ್‌ಟಿ ಸಮುದಾಯದ ಫಲಾನುಭವಿಗಳು ಇದರ ಬಗ್ಗೆ ಮಾತನಾಡಬೇಕು ಎಂದು ಕರೆ ನೀಡಿದ್ದಾರೆ.
ಮೌಢ್ಯದ ದಾಸರಾಗಬೇಡಿ
ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ ನಿಜವಾದ ಶಿಕ್ಷಣ. ಜಾತಿ ಮತ್ತು ಚಾತುರ್ವರ್ಣ ವ್ಯವಸ್ಥೆಗೆ ಪರಿಹಾರಗಳನ್ನು ಕಂಡುಕೊಳ್ಳಬೇಕು. ಇವುಗಳನ್ನು ತಿಳಿದುಕೊಳ್ಳದೆ ಹೋದರೆ ವೈಚಾರಿಕ, ವೈಜ್ಞಾನಿಕ ಜ್ಞಾನ ಪಡೆದುಕೊಳ್ಳಲಾಗುವುದಿಲ್ಲ. ಸಮಾಜದಲ್ಲಿರುವ ಕಂದಾಚಾರ ಹಾಗೂ ಮೌಢ್ಯಗಳಿಗೆ ದಾಸರಾಗುತ್ತೇವೆ ಎಂದು ಎಚ್ಚರಿಸಿದ್ದಾರೆ.
ಸಹಸ್ರ ಕಾಳುಗಳ ಸಿದ್ದರಾಮಯ್ಯ ಭಾವಚಿತ್ರ ಉಡುಗೊರೆ
ರಾಜ್ಯದ ಇತಿಹಾಸದಲ್ಲಿ ಸುದೀರ್ಘ ಅವಧಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ದಾಖಲೆ ನಿರ್ಮಿಸಿದ್ದಾರೆ. ಈ ಹಿನ್ನೆಲೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸಹಸ್ರ ಕಾಳುಗಳಿಂದ ರಚಿಸಿದ ಸಿದ್ದರಾಮಯ್ಯ ಭಾವಚಿತ್ರವನ್ನು ಉಡುಗೊರೆಯಾಗಿ ನೀಡಿದ್ದಾರೆ. ದೇವರಾಜ ಅರಸರು ಅವರು ಮುಖ್ಯಮಂತ್ರಿಗಳಾಗಿ ಏಳು ವರ್ಷ ಏಳು ತಿಂಗಳು ಇಪ್ಪತ್ತ ಮೂರು ದಿನಗಳ ಕಾಲ ಈ ರಾಜ್ಯದ ಜನರ ಸೇವೆ ಮಾಡಿದ್ದಾರೆ. ಅದಕ್ಕಿಂತಲೂ ಹೆಚ್ಚಿನ ಅವಧಿಗೆ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸುವ ಅವಕಾಶವನ್ನು ರಾಜ್ಯದ ಜನತೆ ನನಗೆ ನೀಡಿದ್ದಾರೆ ಎಂದು ಧನ್ಯವಾದ ಅರ್ಪಿಸಿದ್ದಾರೆ.
ಇದನ್ನು ದಾಖಲೆಗಳ ದೃಷ್ಟಿಯಿಂದ ನಾನು ನೋಡುವುದಿಲ್ಲ, ಬೇರೆ ಯಾರೂ ನೋಡಬಾರದು. ಇದು ಜನರ ಸೇವೆಗೆ ಸಿಕ್ಕಿರುವ ಅವಕಾಶದ ಭಾಗ್ಯ ಎಂದು ತಿಳಿದುಕೊಂಡಿದ್ದೇನೆ. ನನ್ನ ರಾಜಕೀಯ ಜೀವನಕ್ಕೆ ಹಲವು ಹಿರಿಯರ ಚಿಂತನೆ ಮತ್ತು ಸಾಧನೆಗಳು ಪ್ರೇರಣೆ ಮತ್ತು ಮಾರ್ಗದರ್ಶನ ನೀಡಿವೆ. ಆ ಹಿರಿಯರ ಸಾಲಿನಲ್ಲಿ ದೇವರಾಜ ಅರಸು ಪ್ರಮುಖರು. ನಮ್ಮಿಬ್ಬರ ನಡುವಿನ ಸೈದ್ಧಾಂತಿಕ ಸಹಮತ ಮತ್ತು ನಾನು ಕೂಡಾ ಅವರಂತೆ ಮೈಸೂರಿನ ಮಣ್ಣಿನ ಮಗ ಎನ್ನುವ ಕಾರಣಕ್ಕೆ ನನ್ನ ಹೃದಯದಲ್ಲಿ ಅವರಿಗೆ ವಿಶೇಷವಾದ ಸ್ಥಾನ ಇದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಅಧಿಕಾರ, ಸಂಪತ್ತು ಮತ್ತು ಅವಕಾಶಗಳ ಹೆಬ್ಬಾಗಿಲನ್ನು ಸರ್ವರಿಗೂ ತೆರೆದು ಸಮಾನವಾಗಿ ಹಂಚಿಕೆ ಮಾಡದ ಹೊರತು ಸುಸ್ಥಿರ ಅಭಿವೃದ್ದಿ ಸಾಧ್ಯ ಇಲ್ಲ ಎನ್ನುವುದು ದೇವರಾಜ್ ಅರಸರ ನಂಬಿಕೆಯಾಗಿತ್ತು. ಇದಕ್ಕಾಗಿಯೇ ಅವಕಾಶ ವಂಚಿತ ಸಮುದಾಯಗಳಿಗೆ ಸೇರಿರುವ ನಾಯಕರನ್ನು ಗುರುತಿಸಿ ರಾಜಕೀಯವಾಗಿ ಬೆಳೆಸಿದರು. ಭೂಸುಧಾರಣೆಯ ಮೂಲಕ ಸಂಪತ್ತಿನ ಸಮಾನ ಹಂಚಿಕೆ ಪ್ರಾರಂಭಿಸಿದರು. ಮೀಸಲಾತಿಯ ಮೂಲಕ ವಂಚಿತ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಹೆಚ್ಚಿನ ಪ್ರಾತಿನಿಧ್ಯ ಸಿಗುವಂತೆ ಮಾಡಿದರು. ಜನಪ್ರತಿನಿಧಿಗಳೆಲ್ಲರಿಗೂ ಈ ಸಾಧನೆ ಪ್ರೇರಣೆಯಾಗಲಿ ಎಂದು ಆಶಿಸಿದ್ದಾರೆ.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications