ಗುಡ್‌ನ್ಯೂಸ್: ಪ್ರತಿ ಜಿಲ್ಲೆಗೆ ಮಲ್ಟಿಸೆಷಾಲಿಟಿ ಆಸ್ಪತ್ರೆ, ವೈದ್ಯಕೀಯ ಕಾಲೇಜು ಸ್ಥಾಪನೆ: ಸಿದ್ದರಾಮಯ್ಯ ಘೋಷಣೆ
ಬೆಂಗಳೂರು, ಅಕ್ಟೋಬರ್ 04: ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಹಾಗೂ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ, ವೈದ್ಯಕೀಯ ಕೋರ್ಸ್ ಮಾಡುವ ಅಭ್ಯರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ಪ್ರತಿ ಜಿಲ್ಲೆಗೂ ಅಗತ್ಯ ವೈದ್ಯಕೀಯ ಸೌಲಭ್ಯ ಸಿಗುವಂತೆ ಮಾಡಲು ಜೊತೆಗೆ ತಜ್ಞರ ವೈದ್ಯರ ನೇಮಕಾತಿಗೆ ಅವರು ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತೀ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿಯಾಗಿದೆ. ಬರೀ ಆಸ್ಪತ್ರೆ ಕಟ್ಟಡ ಕಟ್ಟಿದರೆ ಸಾಲದು, ಅದಕ್ಕೆ ತಕ್ಕಂತೆ ತಜ್ಞ ವೈದ್ಯರನ್ನೂ ನೇಮಿಸುತ್ತೇವೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಂದು ಶನಿವಾರ ಬೆಳಗಾವಿಯಲ್ಲಿ ಜರುಗಿದ ಸಮಾರಂಭದಲ್ಲಿ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನೆ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಮಾಜಿ ಸಂಸದ ಪ್ರಭಾಕರ್ ಕೋರೆ ಅವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಸರ್ಕಾರಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅದಕ್ಕಾಗಿ ಕೋರೆ ಅವರಿಗೆ ಅಭಿನಂದಿಸುತ್ತೇನೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಸಮಾನತೆಯನ್ನು ಅಳಿಸುವ ದಿಕ್ಕಿನಲ್ಲಿ ತಳ ಸಮುದಾಯಗಳಿಗೆ ಅವಕಾಶ ಮತ್ತು ಅನುಕೂಲಗಳನ್ನು ಕಲ್ಪಿಸುತ್ತಿದೆ. ಅಸಮಾನತೆ ಇರುವವರೆಗೆ ತಳ ಸಮುದಾಯಗಳ ಜನ ಮುಖ್ಯವಾಹಿನಿಗೆ ಬರಲು ಸಾಧ್ಯವಿಲ್ಲ ಎನ್ನುವ ಮಾತುಗಳನ್ನು ನೆನಪಿನಲ್ಲಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಅವರು ವಿವರಿಸಿದರು.
ರಾಜ್ಯದ ಎಂಟು ಜಿಲ್ಲೆಗಳಲ್ಲಿ ಶೇಕಡಾ 95 ರಷ್ಟು ಅಧಿಕ ಮಳೆಯಾಗಿ ರಾಜ್ಯದಲ್ಲಿ 10 ಲಕ್ಷ ಹೆಕ್ಟೇರ್ ಬೆಳೆ ನಾಶ ಆಗಿರುವ ಅಂದಾಜಿಸಲಾಗಿದೆ. ಈ ಬೆಳೆ ಹಾನಿಗೆ ದಾಖಲೆ ಮೊತ್ತದ ಪರಿಹಾರ ಹಣ ನೀಡಿ ರೈತರು, ಬೆಳೆಗಾರರು, ಕೃಷಿಕರ ನೆರವಿಗೆ ಧಾವಿಸಿದ್ದೇವೆ ಎಂದರು.
ಸಮೀಕ್ಷೆ ಮಾಡಿ ಪರಿಹಾರ ಘೋಷಿಸಿದ್ದ ಸಿಎಂ
ಸೆಪ್ಟಂಬರ್ 30ರಂದು ಅವರು ಸಿಎಂ ಸಿದ್ದರಾಮಯ್ಯ ಅವರು ನೆರೆ ಹಾಗೂ ಪ್ರಭಾವ ಭೀತಿಗೆ ತುತ್ತಾದ ಉತ್ತರ ಕರ್ನಾಟಕದ ಜಿಲ್ಲೆಗಳ ವೈಮಾನಿಕ ಸಮೀಕ್ಷೆ ನಡೆಸಿದರು. ಜೊತೆಗೆ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಹ ಜೊತೆಗಿದ್ದರು. ಈ ಸಮೀಕ್ಷೆಗೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿ, ಪರಿಹಾರ ನೀಡಿಲ್ಲ ಎಂದು ಆಕ್ಷೇಪಿಸಿದರು. ಇದಕ್ಕೆ ಸಚಿವರು ತಿರುಗೇಟು ನೀಡಿದರು.
ಒಟ್ಟು 10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಜಮೀನು ಹಾನಿ ಆಗಿದೆ. ಬೆಳೆ ನಾಶವಾಗಿದೆ. ಅಗತ್ಯ ಪರಿಹಾರ ಕ್ರಮ ಕೈಗೊಳ್ಳುವಂತೆ, ನಿರಾಶ್ರಿತರಿಗೆ ಕೇಂದ್ರಗಳಲ್ಲಿ ಸೂಕ್ತ ವ್ಯವಸ್ಥೆ ಮಾಡುವಂತೆ ಸಿದ್ದರಾಮಯ್ಯ ಅವರು ಸೂಚಿಸಿದರು. ಎನ್‌ಡಿಆರ್ಎಫ್ ನೀಡುವ ಪರಿಹಾರದ ಜೊತೆಗೆ ಹೆಚ್ಚುವರಿಯಾಗಿ 8,500 ರೂಪಾಯಿ ಹೆಚ್ಚುವರಿಯಾಗಿ ರಾಜ್ಯ ಸರ್ಕಾರದಿಂದ ಘೋಷಿಸಿದರು. ರೈತರಿಗೆ ಧೈರ್ಯ ನೀಡಿದರು.












Click it and Unblock the Notifications