Film Subsidy Delay: ಸಿನಿಮಾ ಸಬ್ಸಿಡಿ ಬಗ್ಗೆ ಚಿತ್ರ ಕಲಾವಿದರಿಗೆ ಗುಡ್ ನ್ಯೂಸ್ ಕೊಟ್ಟ ಸಿದ್ದರಾಮಯ್ಯ
ಬೆಂಗಳೂರು, ನವೆಂಬರ್ 03: ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ ಜೀವನದಲ್ಲೂ ನಡೆದುಕೊಳ್ಳಬೇಕು. ಡಾ.ರಾಜ್ ಕುಮಾರ್ ಅವರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು. ಈ ಕಾರಣಕ್ಕೇ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಸಲಹೆಯನ್ನು ಸಿನಿಮಾ ಕಲಾವಿದರಿಗೆ ನೀಡಿದರು.
ಇಂದು ಸೋಮವಾರ ಮೈಸೂರಿನ ಘಟಿಕೋತ್ಸವ ಭವನದಲ್ಲಿ ಆಯೋಜಿಸಿದ್ದ 2018 ಮತ್ತು 19ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಿನಿಮಾ ಅತ್ಯಂತ ಪ್ರಭಾವೀ ಮಾಧ್ಯಮ. ಸಮಾಜದ ಮೇಲೆ ಆಳವಾದ ಪರಿಣಾಮ ಬೀರುತ್ತದೆ. ಆದ್ದರಿಂದ ಸಿನಿಮಾ ತಾರೆಯರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅಷ್ಟೇ ಮೌಲ್ಯಯುತವಾಗಿ ಬದುಕಬೇಕು. ಸಮಾಜವನ್ನು ತಿದ್ದುವ ಸಿನಿಮಾಗಳನ್ನು ಹೆಚ್ಚೆಚ್ಚು ತಯಾರಿಸಿದರೆ ಅದರಿಂದ ಬದಲಾವಣೆ ಸಾಧ್ಯ ಎಂದರು.

ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ..! ಗುಡ್ ನ್ಯೂಸ್ ಏನು?
ನಮ್ಮ ಸರ್ಕಾರ ಕನ್ನಡ ಸಿನಿಮೋದ್ಯಮದ ಆರೋಗ್ಯಕಾರಿ ಪ್ರಗತಿ ಮತ್ತು ಬೆಳವಣಿಗೆಗೆ ಸದಾ ಬೆಂಬಲ ನೀಡುತ್ತದೆ. ಕೇವಲ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ. ಒಳ್ಳೆ ಸಿನಿಮಾ ಮಾಡಿ, ಜನ ಮೆಚ್ಚುವ, ಸಮಾಜದ ಮೇಲೆ ಉತ್ತಮ ಪರಿಣಾಮ ಬೀರುವ ಸಿನಿಮಾ ಮಾಡಿದರೆ ಸಬ್ಸಿಡಿ ನೀಡಿದ್ದಕ್ಕೂ ಸಾರ್ಥಕವಾಗುತ್ತದೆ. ಸದ್ಯ ಬಾಕಿ ಇರುವ ಎಲ್ಲಾ ವರ್ಷದ ಸಬ್ಸಿಡಿಯನ್ನೂ ಒಟ್ಟಿಗೇ ನೀಡಲಾಗುವುದು ಎಂದು ಚಿತ್ರ ಕಲಾವಿದರಿಗೆ ಸಿದ್ದರಾಮಯ್ಯ ಅವರು ಇದೇ ವೇಳೆ ಗುಡ್ ನ್ಯೂಸ್ ನೀಡಿದರು.
ಚಿತ್ರನಗರಿ ನಿರ್ಮಾಣ ಕಾರ್ಯ ಇನ್ನೇನು ಶುರು
ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಚಿತ್ರನಗರಿ ಮಾಡಲು 160 ಎಕರೆ ಜಾಗವನ್ನು ವಾರ್ತಾ ಇಲಾಖೆಗೆ ಹಸ್ತಾಂತರಿಸಲಾಗಿದೆ. ಎರಡು ತಿಂಗಳಲ್ಲಿ ಕಾನೂನು ಪ್ರಕ್ರಿಯೆ ಮುಗಿಸಿ ಚಿತ್ರನಗರಿ ನಿರ್ಮಾಣ ಕಾರ್ಯ ಆರಂಭವಾಗಲಿದೆ.
ಹಿಂದಿನ ಸರ್ಕಾರ ಆಯಾ ವರ್ಷವೇ ಚಲನಚಿತ್ರ ಪ್ರಶಸ್ತಿಗಳನ್ನು ವಿತರಿಸದ ಕಾರಣಕ್ಕೇ 2018ನೇ ಸಾಲಿನಿಂದ ಪ್ರಶಸ್ತಿಗಳು ಬಾಕಿ ಉಳಿದಿವೆ. ಇದು ತಪ್ಪು ಹೀಗಾಗಬಾರದು. ಆದ್ದರಿಂದ ನಮ್ಮ ಸರ್ಕಾರ ಇನ್ನು ಮುಂದೆ ಪ್ರತೀ ವರ್ಷ ಸಿನಿಮಾ ಪ್ರಶಸ್ತಿಗಳನ್ನು ನೀಡಲಿದೆ.
ಮರು ವರ್ಷವೇ ಪ್ರಶಸ್ತಿ ನೀಡಬೇಕು
ಆಯಾ ವರ್ಷದ ಸಿನಿಮಾಗಳಿಗೆ ಮರು ವರ್ಷವೇ ಪ್ರಶಸ್ತಿ ಕೊಟ್ಟರೆ ಮಾತ್ರ ಅರ್ಥಪೂರ್ಣ ಆಗಿರುತ್ತದೆ. ಇಂದು ಎರಡು ವರ್ಷದ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಕೆಲವೇ ದಿನಗಳಲ್ಲಿ ಹಳೆ ಸರ್ಕಾರದ ಅವಧಿಯ ಇನ್ನೆರಡು ವರ್ಷದ ಸಿನಿಮಾ ಪ್ರಶಸ್ತಿಗಳನ್ನು ನೀಡಲು ಸೂಚನೆ ನೀಡಿದ್ದೇನೆ. ಬಳಿಕ ಆಯಾ ವರ್ಷದ ಪ್ರಶಸ್ತಿಗಳನ್ನು ಮರು ವರ್ಷದ ಆರಂಭದಲ್ಲೇ ನೀಡಲು ಕ್ರಮ ತೆಗೆದುಕೊಳ್ಳುತ್ತೇವೆಂದು ತಿಳಿಸಿದರು.
ಮೊದಲೆಲ್ಲಾ ಸಿನಿಮಾಗಳ ಸಂಖ್ಯೆ ಕಡಿಮೆ ಇತ್ತು. ನಾವು ನೋಡಿದ್ದನ್ನೇ ಮತ್ತೆ ಮತ್ತೆ ನೋಡುತ್ತಿದ್ದೆವು. ಈಗ ಸಿಕ್ಕಾಪಟ್ಟೆ ಸಿನಿಮಾಗಳು ಬರುತ್ತಿವೆ. ಆದರೆ, ಸಾಮಾಜಿಕ ಕಾಳಜಿ ಮತ್ತು ಗುಣಮಟ್ಟ ಕಡಿಮೆ ಆಗುತ್ತಿದೆ. ಆದ್ದರಿಂದ ಈಗ ಸಿನಿಮಾ ನೋಡುವುದನ್ನೇ ಕಡಿಮೆ ಮಾಡಿದ್ದೇನೆ ಎಂದು ಅವರು ಹೇಳಿದರು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Dhurandhar-2: ಸಕ್ಸಸ್ ಅಲೆಯಲ್ಲಿ ಧುರಂಧರ್ 2: ಫ್ಯಾನ್ಸ್ ಕುರಿತು ಸಾರಾ ಅರ್ಜುನ್ ಪೋಸ್ಟ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ












Click it and Unblock the Notifications