ಭೋವಿ ಸಮುದಾಯದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡ್‌ನ್ಯೂಸ್

CM Siddaramaiah: ನಮ್ಮ ಸರ್ಕಾರ ಭೋವಿ ನಿಗಮವೂ ಸೇರಿದಂತೆ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳ ಸಾಲವನ್ನು ಮನ್ನಾ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಭೋವಿ ಸಮುದಾಯದವರು ಇಟ್ಟಿರುವ ಬೇಡಿಕೆಗಳ ಬಗ್ಗೆ ಸೂಕ್ತ ನಿರ್ಣಯ ಕೈಗೊಳ್ಳುತ್ತೇವೆ. ಸಮುದಾಯದವರಿಗೆ ಕುಲಪತಿ, ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವ ಬಗ್ಗೆ ಪರಿಶೀಲಿಸಲಾಗುವುದು. ಏಳು ಕೋಟಿ ಜನರಿಗೂ ನ್ಯಾಯ ಸಿಗಬೇಕು ಹಾಗೂ ಯಾರೂ ಅವಕಾಶಗಳಿಂದ ವಂಚಿತರಾಗಬಾರದು. ಎಲ್ಲಾ ಜಾತಿಗಳನ್ನು ಪ್ರೀತಿಸಿ, ಅವರೂ ನಮ್ಮನ್ನು ಪ್ರೀತಿಸುವಂತೆ ಮಾಡಬೇಕು ಹಾಗೂ ಸಹಿಷ್ಣುತೆಯನ್ನು ರೂಢಿಸಿಕೊಳ್ಳಬೇಕು. ಉತ್ಪಾದನೆಯಲ್ಲಿ ಎಲ್ಲರೂ ಭಾಗವಹಿಸಿ, ಉತ್ಪನ್ನವನ್ನು ಸಮಾನವಾಗಿ ಹಂಚಿಕೊಳ್ಳಬೇಕು ಎಂದು ಸಿದ್ಧರಾಮೇಶ್ವರರು ಬೋಧಿಸಿದ್ದರು. ಅವರು ನಡೆದ ಹಾದಿಯಲ್ಲಿಯೇ ನಮ್ಮ ಸರ್ಕಾರವೂ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

CM Siddaramaiah

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೈಸೂರಿನ ಕಲಾಮಂದಿರದಲ್ಲಿ ಆಯೋಜಿಸಿದ್ದ ಶ್ರೀ ಸಿದ್ದರಾಮೇಶ್ವರ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದ್ದಾರೆ. ಸಿದ್ದರಾಮೇಶ್ವರರೂ ಸೇರಿದಂತೆ ಸಂತಮಹಾಶಯರು, ಸಮಾಜದಲ್ಲಿ ಜಾತಿವರ್ಗಗಳ ವ್ಯವಸ್ಥೆ ತೊಲಗಬೇಕು ಎಂದು ಬಯಸಿದ್ದರು. ರಾಜ್ಯದಲ್ಲಿ ಸಮಸಮಾಜ ನಿರ್ಮಿಸುವ ಸಂಕಲ್ಪವನ್ನು ನಮ್ಮ ಸರ್ಕಾರ ಹೊಂದಿದೆ. ಉತ್ಪಾದಿಸಿದ ಸಂಪತ್ತು ಸಮಾನವಾಗಿ ಹಂಚಿಕೆಯಾಗಿಬೇಕು. ರಾಜ್ಯದ ಸರ್ವರಿಗೂ ಸಮಪಾಲು, ಸಮಬಾಳು ಸಿಗಬೇಕೆಂಬುದೇ ಸರ್ಕಾರದ ಉದ್ದೇಶ.

ಬಸವಾದಿ ಶರಣರು 12 ನೇ ಶತಮಾನದಲ್ಲಿ ಸಮಾನತೆಯ ಸಿದ್ಧಾಂತವನ್ನು ಬೋಧಿಸಿದ್ದರು. ಶೋಷಣೆಗೊಳಗಾದ ಹಾಗೂ ಅವಕಾಶವಂಚಿತ ಸಮುದಾಯಗಳು ಸಂಘಟಿತರಾಗುವ ಸಮ್ಮೇಳನಗಳು ಉತ್ತಮ ಕಾರ್ಯಗಳಾಗಿವೆ. 2013 ಮೇ 13ರ ಬಸವ ಜಯಂತಿಯಂದು ನಾನು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದೆ. ಬಸವಣ್ಣನವರು ಬೋಧಿಸಿದಂತೆ ನಾನು ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿರಿಸಿದ್ದೇನೆ. ರಾಜಕೀಯ ಸ್ವಾತಂತ್ರ್ಯವು, ಆರ್ಥಿಕ ಹಾಗೂ ಸಾಮಾಜಿಕ ಸ್ವಾತಂತ್ರ್ಯದ ತಳಹದಿಯ ಮೇಲೆ ನಿಂತಿದೆ. ಶಿಕ್ಷಣ ಪಡೆದಾಗ ಮಾತ್ರ ಸಾಮಾಜಿಕ ಆರ್ಥಿಕ ಶಕ್ತಿ ದೊರಕಲು ಸಾಧ್ಯ.

ನಮ್ಮ ಸರ್ಕಾರ ಭೋವಿ ನಿಗಮವೂ ಸೇರಿದಂತೆ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳ ಸಾಲವನ್ನು ಮನ್ನಾ ಮಾಡಿದೆ. ಪರಿಶಿಷ್ಟ ಜಾತಿಯ ಸಮುದಾಯಗಳಲ್ಲಿನ ಅಸಮಾನತೆ ಹೋಗಲಾಡಿಸಲು ಐತಿಹಾಸಿಕ ಒಳ ಮೀಸಲಾತಿಯನ್ನು ಜಾರಿಗೊಳಿಸಿದೆ. ಎಡಗೈಗೆ 5.25%, ಬಲಗೈಗೆ 5.25%, ಹಾಗೂ ಇತರ ಉಪಜಾತಿಗಳಿಗೆ 4.5% ಹಂಚಿಕೆ ಮಾಡಲಾಗಿದೆ. ಭೋವಿ ಸಮುದಾಯದವರು ಇಟ್ಟಿರುವ ಬೇಡಿಕೆಗಳ ಬಗ್ಗೆ ಸೂಕ್ತ ನಿರ್ಣಯ ಕೈಗೊಳ್ಳುತ್ತೇವೆ. ಸಮುದಾಯದವರಿಗೆ ಕುಲಪತಿ, ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವ ಬಗ್ಗೆ ಪರಿಶೀಲಿಸಲಾಗುವುದು. ಏಳು ಕೋಟಿ ಜನರಿಗೂ ನ್ಯಾಯ ಸಿಗಬೇಕು ಹಾಗೂ ಯಾರೂ ಅವಕಾಶಗಳಿಂದ ವಂಚಿತರಾಗಬಾರದು. ಸಂವಿಧಾನ ರಚನೆಯಾದ ನಂತರ ಸಮಾನತೆಯನ್ನು ಸಾಧಿಸುವತ್ತ ದೇಶ ಸಾಗಿದ್ದು, ಸಂವಿಧಾನ ಹೇಳುವಂತೆಯೇ ನಡೆದುಕೊಳ್ಳುತ್ತೇವೆ.

ಎಲ್ಲಾ ಜಾತಿಗಳನ್ನು ಪ್ರೀತಿಸಿ, ಅವರೂ ನಮ್ಮನ್ನು ಪ್ರೀತಿಸುವಂತೆ ಮಾಡಬೇಕು ಹಾಗೂ ಸಹಿಷ್ಣುತೆಯನ್ನು ರೂಢಿಸಿಕೊಳ್ಳಬೇಕು. ಉತ್ಪಾದನೆಯಲ್ಲಿ ಎಲ್ಲರೂ ಭಾಗವಹಿಸಿ, ಉತ್ಪನ್ನವನ್ನು ಸಮಾನವಾಗಿ ಹಂಚಿಕೊಳ್ಳಬೇಕು ಎಂದು ಸಿದ್ಧರಾಮೇಶ್ವರರು ಬೋಧಿಸಿದ್ದರು. ಅವರು ನಡೆದ ಹಾದಿಯಲ್ಲಿಯೇ ನಮ್ಮ ಸರ್ಕಾರವೂ ನಡೆಯುತ್ತಿದೆ ಎಂದೂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+