SC/ST ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ;‌ ತಿಂಗಳಿಗೆ 15 ಸಾವಿರ ರೂ.

ಬೆಂಗಳೂರು, ಜುಲೈ 05: IAS, IRS ಸೇರಿ ಮತ್ತಿತರೆ ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆಗಳಿಗಾಗಿ ದೆಹಲಿಯಲ್ಲಿ SC/ST ಮಕ್ಕಳಿಗೆ ಉತ್ತಮ ಹಾಸ್ಟೆಲ್ ಕಟ್ಟಿಸುವ ಜೊತೆಗೆ ತಿಂಗಳಿಗೆ 15 ಸಾವಿರ ರೂಪಾಯಿ ಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

SCSP/TSP ಪರಿಷತ್ ಸಭೆ ನಡೆಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಸದ್ಯ 10 ಸಾವಿರ ಕೊಡಲಾಗುತ್ತಿದ್ದು 5 ಸಾವಿರ ಹೆಚ್ಚಿಸಲಾಗುವುದು. ಈ ಸಂಬಂಧ ತಕ್ಷಣ ಆದೇಶ ಹೊರಡಿಸಲಾಗುವುದು. ದೆಹಲಿ ಹಾಸ್ಟೆಲ್ ನಲ್ಲಿ ಹೈಟೆಕ್ ಲೈಬ್ರೆರಿ ಮಾಡಲಾಗುವುದು. ಅಲ್ಲಿ ಎಲ್ಲಾ ರೀತಿಯ ಪುಸ್ತಕಗಳು ಸಿಗುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು.

CM Siddaramaiah Announces Rs 15000 Per Month For SC St Students

2024-25 ನೇ ಸಾಲಿಗೆ scsp/tsp ನಲ್ಲಿ ಲಭ್ಯ ಇರುವ ಹಣವನ್ನು ಖರ್ಚು ಮಾಡಲು action plan ಅನುಮೋದನೆ ಮಾಡಲಾಗಿದೆ. ರಾಜ್ಯದ ಅಭಿವೃದ್ಧಿ ಆಯವ್ಯಯ ಈ ಸಾಲಿನಲ್ಲಿ ಒಟ್ಟು 160000 ಕೋಟಿ. ಇದರಲ್ಲಿ scsp/tsp ಗೆ ಸುಮಾರು 39121.46 ಕೋಟಿ scsp/tsp ಅಡಿ 34 ಇಲಾಖೆಗಳಿಗೆ ಹಂಚಿಕೆ ಮಾಡಿರುವ ಹಣ action plan ನಲ್ಲಿದೆ. ಹಿಂದಿನ ವರ್ಷ 97.81 ಕೋಟಿ ಉಳಿತಾಯವಾಗಿದೆ. ಈ ಹಣವೂ ಸೇರಿದೆ ಎಂದು ತಿಳಿಸಿದರು.

ಕಳೆದ ವರ್ಷಕ್ಕಿಂತ ಈ ವರ್ಷ 3900 ಕೋಟಿ ಹೆಚ್ಚಾಗಿದೆ. 3900 ಕೋಟಿ ಹೆಚ್ಚುವರಿ ಹಣ ಈ ವರ್ಷ ನೀಡಿದ್ದೇವೆ. ಈ ಹಣ ಇಲಾಖೆಗಳಿಗೆ ಹಂಚಿಕೆಯಾಗಿದ್ದು ಇದರ ಸದುಪಯೋಗ ಆಗಬೇಕು. ಸಮಾಜ ಕಲ್ಯಾಣ ಇಲಾಖೆ, ನಿಗಮಗಳು ಕಾಯ್ದೆಯ ಉದ್ಸೇಶಕ್ಕೆ ಪೂರಕವಾಗಿ ಕೆಲಸ ಮಾಡಬೇಕು. ಶೇ100 ಸಾಧನೆ ಆಗಬೇಕು. ಇದರಲ್ಲಿ ನಿರ್ಲಕ್ಷ್ಯ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ.

ಕಾಯ್ದೆಯಲ್ಲಿದ್ದ 7D ರದ್ದು ಮಾಡಿದ ರೀತಿಯಲ್ಲೇ 7C ಕೂಡ ರದ್ದು ಮಾಡಬೇಕು ಎನ್ನುವ ಶಾಸಕ ನರೇಂದ್ರಸ್ವಾಮಿ ಅವರು ಸಲಹೆ ನೀಡಿದ್ದಾರೆ. ಈ ಸಲಹೆಯ ಸಾಧಕ ಬಾದಕಗಳನ್ನು ಪರಿಶೀಲಿಸಲಾಗುವುದು ಎಂದರು.

ಖಾಲಿ ಇರುವ ಹೋಬಳಿಗಳಲ್ಲೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಆರಂಭಿಸಲೇಬೇಕು. ಆಯಾ ಹೋಬಳಿಯ ವಿದ್ಯಾರ್ಥಿಗಳಿಗೆ ಶೇ75 ರಷ್ಟು ಸೀಟು, ಉಳಿದ ಶೇ25 ರಷ್ಟು ಸೀಟುಗಳನ್ನು ಇತರೆ ಪ್ರದೇಶದ ವಿಧ್ಯಾರ್ಥಿಗಳಿಗೆ ವಸತಿ ಶಾಲೆಗಳಲ್ಲಿ ನೀಡಬೇಕು.

ಸರ್ಕಾರಿ ಶಾಲೆಗಿಂತ ಕ್ರೈಸ್ ನಲ್ಲಿ ಓದಿರುವ ಬಡ ವಿಧ್ಯಾರ್ಥಿನಿ ಕ್ರೈಸ್ ಶಾಲೆಯಲ್ಲಿ ಓದಿ ಮೊದಲ ರ್ಯಾಂಕ್ ಪಡೆದಿದ್ದಾರೆ. ಇದನ್ನು ಪ್ರೋತ್ಸಾಹಿಸುತ್ತಲೇ ಇತರೆ ನ್ಯೂನ್ಯತೆಗಳನ್ನು ಸರಿಪಡಿಸಲು ಅಧಿಕಾರಿಗಳು ಶ್ರಮಿಸಬೇಕು.

ಬಜೆಟ್ ನಲ್ಲಿ ನಾವು ಘೋಷಿಸಿರುವ ಎಲ್ಲಾ ಕಾರ್ಯಕ್ರಮಗಳನ್ನೂ ನೀವು ಜಾರಿ ಮಾಡಲೇಬೇಕು. ಹಿಂದಿನ ಬಿಜೆಪಿ ಸರ್ಕಾರ ಮೂರು ವರ್ಷ ಕ್ರೈಸ್ ಮಕ್ಕಳಿಗೆ ಬಾತ್ ರೂಮ್ ಕಿಟ್ ಕೊಡ್ಲೇ ಇಲ್ಲ. ಈಗ ನಾವು ಸರಿಯಾಗಿ ವಿತರಿಸುತ್ತಿದ್ದೇವೆ.

ಆಶ್ರಮ ಶಾಲೆಗಳಲ್ಲಿ ರಾತ್ರಿ ವೇಳೆ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಾರೆ ಎನ್ನುವುದು ಕಂಡುಬಂದಿದೆ. ಇದಕ್ಕೆ ಅವಕಾಶ ಆಗಬಾರದು. ಮನೆಗೆ ಕರೆದೊಯ್ಯದಂತೆ ಪೋಷಕರಿಗೆ ಒಪ್ಪಿಸಬೇಕು. ಹಳ್ಳಿಗಾಡು, ಬಡ ಕುಟುಂಬಗಳಿಗೆ ಸರ್ಕಾರದಿಂದ ಬರುವ ಸವಲತ್ತುಗಳನ್ನು ಸರಿಯಾಗಿ ತಲುಪಿಸಬೇಕು. ಇದರಲ್ಲಿ ವಿಫಲರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನಾವು ಕೊಟ್ಟ ಅನುದಾನ ಆಯಾ ಉದ್ದೇಶಗಳಿಗೇ ಬಳಕೆಯಾಗಬೇಕು.

ಇದರಲ್ಲಿ ಯಾವುದೇ ರಾಜಿ ಇಲ್ಲದಂತೆ ಆಯಾ ಸಮುದಾಯಗಳಿಗೆ ಸವಲತ್ತು ತಲುಪಿಸಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಾಸ್ಟೆಲ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸದಿದ್ದರೆ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗುವುದು. 10 ವರ್ಷದಲ್ಲಿ ಈ ಯೋಜನೆಯಿಂದ ಸಮುದಾಯದ ಮೇಲೆ ಬೀರಿರುವ ಪರಿಣಾಮ, ಸಮುದಾಯಕ್ಕೆ ಯೋಜನೆ ತಲುಪಿರುವ ಪ್ರಮಾಣದ ಬಗ್ಗೆ, ಹಾಗೂ ಅವರ ಆರ್ಥಿಕ‌ ಸ್ಥಿತಿ ಪ್ರಗತಿ ಆಗಿರುವ ಬಗ್ಗೆ ಮೌಲ್ಯಮಾಪನ ಮಾಡಲಾಗುವುದು.3 ತಿಂಗಳ ಬಳಿಕ ಮತ್ತೊಮ್ಮೆ ಪರಿಷತ್ ಸಭೆ ಕರೆಯುತ್ತೇವೆ. ಯಾರಿಂದ ಲೋಪ ಆಗಿದೆ ಎಂದು ಗೊತ್ತಾದರೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಈ ವರ್ಷದ action plan ಅನ್ನು ಈ ಸಭೆಯಲ್ಲಿ ಶಾಸಕರು/ಸಚಿವರು/ ಅಧಿಕಾರಿಗಳು ನೀಡಿದ ಸಲಹೆಗಳ ಸಮೇತ ಜಾರಿ ಆಗಬೇಕು ಎನ್ನುವ ಸೂಚನೆಯನ್ನು ಮುಖ್ಯಮಂತ್ರಿಗಳು ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+