ಸುಹಾಸ್ ಶೆಟ್ಟಿ ಹತ್ಯೆ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದ್ದು, ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸುವ ಸಂಬಂಧ ಗೃಹ ಸಚಿವ ಜಿ.ಪರಮೇಶ್ವರ್‌ ಅವರೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಾರೆ.

ಸುಹಾಸ್ ಶೆಟ್ಟಿ ಹತ್ಯೆಗೆ ಸುಪಾರಿ ನೀಡಿದ್ದು ಯಾವ ಹಣದಲ್ಲಿ? ಎನ್ನುವ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ನಿನ್ನೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಅವರು ಇಬ್ಬರೂ ಮಂಗಳೂರಿಗೆ ಭೇಟಿ ನೀಡಿದ್ದು, ಅವರೊಂದಿಗೆ ಮಾತನಾಡಿದ ನಂತರ ಈ ವಿಚಾರವಾಗಿ ಪ್ರತಿಕ್ರಿಯಿಸುತ್ತೇನೆ ಎಂದಿದ್ದಾರೆ.

CM Siddaramaiah Announces Special Force To Tackle Communal Violence In Coastal Karnataka

ಸರ್ಕಾರಕ್ಕೆ ಎರಡು ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಎರಡು ವರ್ಷಗಳ ಸಾಧನೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಾತಿಗಣತಿಯನ್ನು ಮಾಡಿಸುವ ಮೂಲಕ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಡುತ್ತಿದ್ದಾರೆ ಎಂದು ಟೀಕೆ ಮಾಡುತ್ತಿದ್ದವರೆಲ್ಲ ಕೇಂದ್ರ ಸರ್ಕಾರ ಜಾತಿಗಣತಿ ಮಾಡಿಸುವುದನ್ನು ಮುಕ್ತ ಮನಸ್ಸಿನಿಂದ ಸ್ವಾಗತ ಮಾಡುತ್ತಿದ್ದಾರೆ. ಶಂಖದಿಂದ ಬಂದರೆ ಮಾತ್ರ ತೀರ್ಥ ಎಂಬಂತಾಗಿದೆ. ಮೊದಲು ರಾಜಕೀಯವಾಗಿ ಹೇಳುತ್ತಿದ್ದರು, ವಾಸ್ತವಿಕತೆಯ ಆಧಾರದ ಮೇಲೆ ಮಾತನಾಡುತ್ತಿರಲಿಲ್ಲ ಎಂದು ಅರ್ಥವಾಗುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಪಾಕಿಸ್ತಾನದ ವಿಚಾರದಲ್ಲಿ ಕಾಂಗ್ರೆಸ್ ಬಗ್ಗೆ ಟೀಕಿಸಿರುವ ಹೆಚ್‌ಡಿ ದೇವೇಗೌಡರು ಬಿಜೆಪಿ ಸೇರುವ ಮುನ್ನ ನರೇಂದ್ರ ಮೋದಿಯವರ ಬಗ್ಗೆ ಏನು ಮಾತನಾಡುತ್ತಿದ್ದರು? ಈಗ ಏನು ಮಾತನಾಡುತ್ತಿದ್ದಾರೆ? ಇಬ್ಬಗೆಯ ನೀತಿ ದೇವೇಗೌಡರಿಗೆ ಇದೆ, ನಮಗಲ್ಲ ಎಂದು ದೇವೇಗೌಡರಿಗೆ ತಿರುಗೇಟು ನೀಡಿದ್ದಾರೆ.

CM Siddaramaiah Announces Special Force To Tackle Communal Violence In Coastal Karnataka

ಖಾದರ್‌ ವಿರುದ್ಧ ಬಿಜೆಪಿ ಕಿಡಿ

ಪೊಲೀಸರು ತನಿಖೆ ಆರಂಭಿಸುವ ಮುನ್ನವೆ ಫಾಜಿಲ್ ಕುಟುಂಬದವರಿಗೆ ಕ್ಲೀನ್ ಚಿಟ್ ಕೊಡಲು ಯು.ಟಿ.ಖಾದರ್ ಅವರು ಏನು ಗೃಹ ಸಚಿವರೇ? ಎಂದು ಬಿಜೆಪಿ ಕಿಡಿಕಾರಿದೆ. ಈ ಹಿಂದೆ ಫಾಜಿಲ್ ಮೃತನಾದ ಸಂದರ್ಭದಲ್ಲಿ ಇದೇ ಯು.ಟಿ.ಖಾದರ್ ಅವರು ಸಿದ್ದರಾಮಯ್ಯ ಅವರಿಂದ ಫಾಜಿಲ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ಕೊಡಿಸಿದ್ದರು.

ಬಹುಶಃ ಆ ಹಣದಿಂದಲೇ ಫಾಜಿಲ್ ಕುಟುಂಬ ಸುಹಾಸ್ ಶೆಟ್ಟಿ ಹತ್ಯೆಗೆ ₹5 ಲಕ್ಷ ಸುಪಾರಿ ಕೊಟ್ಟಿದೆ ಎಂಬ ಅನುಮಾನದಿಂದ ಖಾದರ್ ಅವರು ಕ್ಲೀನ್ ಚಿಟ್ ಕೊಡುವ ಕೆಲಸ ಆರಂಭಿಸಿರುವ ಸಾಧ್ಯತೆ ಇದೆ ಎಂದು ಅನುಮಾನ ವ್ಯಕ್ತಪಡಿಸಿದೆ. ಮತಾಂಧ ಜಿಹಾದಿಗಳನ್ನು ರಕ್ಷಿಸಲು ಮುಂದಾಗಿರುವ ಖಾದರ್ ಸಭಾಧ್ಯಕ್ಷ ಸ್ಥಾನಕ್ಕೆ ತತಕ್ಷಣ ರಾಜೀನಾಮೆ ನೀಡಿ, ಆ ಪೀಠದ ಘನತೆಯನ್ನು ಉಳಿಸಿ ಎಂದು ಆಗ್ರಹಿಸಿದೆ.

ಸ್ಪೀಕರ್ ಖಾದರ್ ಸಾಹೇಬರು ಯಾವಾಗ ನ್ಯಾಯಾಧೀಶರಾದರು? ಕೊಲೆ ಆರೋಪಿಯ ಕುಟುಂಬಸ್ಥರ ಹೇಳಿಕೆಯನ್ನೇ ಸಾಕ್ಷಿಯಾಗಿ ಪರಿಗಣಿಸಿ ಖುಲಾಸೆ ಮಾಡುವ ಕಾನೂನು ಯಾವಾಗ ಜಾರಿಯಾಯ್ತು? ಅಥವಾ ರಾಹುಲ್ ಗಾಂಧಿ ಅವರು ಇತ್ತೀಚೆಗೆ ಹಾದಿಬೀದಿಯಲ್ಲಿ ಪ್ರದರ್ಶನ ಮಾಡುವ ಕೆಂಪು ಸಂವಿಧಾನ ಪುಸ್ತಕದಲ್ಲಿ ಹೀಗೆ ಇದೆಯಾ? ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಗುಡುಗಿದ್ದಾರೆ.

ಸ್ಪೀಕರ್ ಹುದ್ದೆಯಂತಹ ಪ್ರಭಾವಿ ಸ್ಥಾನದಲ್ಲಿರುವವರು ಹೀಗೆ ತನಿಖೆಗೆ ಮುಂಚೆಯೇ ಆರೋಪಿಗಳಿಗೆ ಕ್ಲೀನ್ ಚಿಟ್ ಕೊಟ್ಟುಬಿಟ್ಟರೆ ಪೊಲೀಸರಿಗೆ ಏನು ಸಂದೇಶ ಹೋಗುತ್ತದೆ? ರಾಜ್ಯ ಸರ್ಕಾರದ ಈ ಧೋರಣೆ ನೋಡುತ್ತಿದ್ದರೆ, ಸಹೋದರ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನ ಮುಚ್ಚಿಹಾಕಲು ಸಿಎಂ ಸಿದ್ದರಾಮಯ್ಯ ಅವರು ನಿರ್ಧರಿಸಿದಂತಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+