ಭ್ರಷ್ಟಾಚಾರ ಆರೋಪ ಹೊತ್ತವರಿಗೆ ಪಟ್ಟ: ನಂಬಿಕೆಗೆ ಚ್ಯುತಿ ತಂದರೇ ಸಿಎಂ ಸಿದ್ದರಾಮಯ್ಯ?: ಆಕ್ರೋಶ
ಬೆಂಗಳೂರು, ನವೆಂಬರ್ 28: ಹಲವು ಭ್ರಷ್ಟಾಚಾರ ಆರೋಪಗಳನ್ನು ಹೊತ್ತಿರುವ ಟಿ. ಶ್ಯಾಮ್ ಭಟ್ ಅವರನ್ನು ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರನ್ನಾಗಿ ನೇಮಿಸಿರುವುದನ್ನು ಆಮ್ ಆದ್ಮಿ ಪಕ್ಷ ತೀವ್ರವಾಗಿ ಖಂಡಿಸಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.
ಭ್ರಷ್ಟ ಬಿಜೆಪಿ ಸರ್ಕಾರದಿಂದ ಬೇಸತ್ತ ರಾಜ್ಯದ ಜನತೆ ಮುಂದಿನ ದಿನಗಳಲ್ಲಾದರೂ ತಾವು ನೆಮ್ಮದಿಯಿಂದ ಜೀವನ ನಡೆಸುವ ಸಲುವಾಗಿ ಬದಲಾವಣೆ ಬಯಸಿದ್ದರು. ಆದರೆ ಹಲವು ಭ್ರಷ್ಟಾಚಾರ ಆರೋಪಗಳನ್ನು ಹೊತ್ತಿರುವ ಟಿ. ಶ್ಯಾಮ್ ಭಟ್ ಎಂಬ ವಿವಾದಾತ್ಮಕ ವ್ಯಕ್ತಿಯನ್ನು ಮಾನವ ಹಕ್ಕುಗಳ ಆಯೋಗದ ಸದಸ್ಯನನ್ನಾಗಿ ನೇಮಕ ಮಾಡಲಾಗಿದೆ.

ಈ ಮೂಲಕ ರಾಜ್ಯದ ಜನತೆಯ ನಂಬಿಕೆಗೆ ಚ್ಯುತಿ ತರುವಂತಹ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆರಂಭಿಸಿದೆ ಎಂದು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಮಂಗಳವಾರ ಬೆಂಗಳೂರಿನಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.
ಬಿಡಿಎ ನಲ್ಲಿ ನಕ್ಷೆ ತಿದ್ದುಪಡಿ: ಭ್ರಷ್ಟಾಚಾರ
ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು ಅವರು, ಈ ಹಿಂದೆ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ (ಬಿಡಿಎ) ಆಯುಕ್ತರಾಗಿದ್ದ ಶ್ಯಾಮ್ ಭಟ್ ವಿರುದ್ಧ, ನಿವೇಶನದ ಮೂಲ ಹಂಚಿಕೆದಾರರ ಒಪ್ಪಿಗೆಯನ್ನು ಪಡೆಯದೇ ಬಡಾವಣೆ ನಕ್ಷೆಯನ್ನೇ ತಿದ್ದುಪಡಿ ಮಾಡಿ ಅಧಿಕಾರ ದುರುಪಯೋಗಪಡಿಸಿಕೊಂಡ ಗಂಭೀರ ಆರೋಪ ಎದುರಿಸುತ್ತಿದ್ದಾರೆ.
ಬಿಡಿಎ ನಲ್ಲಿ ಸಾವಿರಾರು ಕೋಟಿಗಳ ಹಗರಣವನ್ನು ಮಾಡಿರುವ ಕುಖ್ಯಾತಿ ಇವರ ಮೇಲಿದೆ. ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿ (KIADB) ಯನ್ನು ಸಹ ತನ್ನ ಆಡುಂಬೋಲವನ್ನಾಗಿಸಿಕೊಂಡಿದ್ದರು. ಮನಸೋ ಇಚ್ಛೆ ಬ್ರಷ್ಟಾಚಾರವೆಸಗಿದ ಅನೇಕ ಪ್ರಕರಣಗಳನ್ನು ಆ ಸಂದರ್ಭದಲ್ಲಿ ಕಾಣಬಹುದಾಗಿತ್ತು. ಇಂತಹ ಅತಿ ಹೀನ ಕಳಂಕಿತ ಹಿನ್ನೆಲೆಯುಳ್ಳ ಅಧಿಕಾರಿಗೆ ಈಗ ಸರ್ಕಾರ ಹೊಸ ಜವಾಬ್ದಾರಿ ನೀಡಿರುವುದು ಸ್ವಾಗತಾರ್ಹವಲ್ಲ ಎಂದು ಸರ್ಕಾರ ನಡೆ, ನಿರ್ಧಾರವನ್ನು ಅವರ ಖಂಡಿಸಿದರು.

KPSC ಅಧ್ಯಕ್ಷರನ್ನಾಗಿ ನೇಮಕ:ಭಾರೀ ಭ್ರಷ್ಟಾಚಾರ
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿ ಶ್ಯಾಮ್ ಭಟ್ ಅವರನ್ನು ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ) ಕ್ಕೆ ಅಧ್ಯಕ್ಷರನ್ನಾಗಿ ನೇಮಿಸಿದ್ದರು. ಅವರ ಅಧಿಕಾರವಧಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ (KPSC) ಕೆಪಿಎಸ್‌ಸಿಯಲ್ಲಿ ಭಾರೀ ಭ್ರಷ್ಟಾಚಾರ ನಡೆದ ಆರೋಪಗಳು ಕೇಳಿ ಬಂದಿತ್ತು. ಇದೀಗ ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿರುವಾಗ ಕರ್ನಾಟಕ ಮಾನವ ಹಕ್ಕುಗಳ ಆಯೋಗಕ್ಕೆ ಶ್ಯಾಮ್ ಭಟ್ ಅವರನ್ನು ಸದಸ್ಯರನ್ನಾಗಿ ನೇಮಿಸಿದೆ ಎಂದು ವಿವರಿಸಿದರು.
ಇವರು ಮಾನವ ಹಕ್ಕು ರಕ್ಷಿಸುತ್ತಾರಾ?
ರಾಜ್ಯದ ಜನತೆ ಯಾವ ಮಾನವ ಹಕ್ಕುಗಳನ್ನು ಈ ವ್ಯಕ್ತಿ ರಕ್ಷಿಸುತ್ತಾನೆಂಬುದೇ ಯಕ್ಷ ಪ್ರಶ್ನೆ? ಆಗಿದೆ. ಈತ ಮಾನವ ಹಕ್ಕು ಆಯೋಗವನ್ನು ಸಹ ತನ್ನ ಭ್ರಷ್ಟಾಚಾರಗಳಿಗೆ ಉಪಯೋಗಿಸಿಕೊಳ್ಳಲು ಹೇಸದ ವ್ಯಕ್ತಿ ಎಂದು ಮುಖ್ಯಮಂತ್ರಿ ಚಂದ್ರು ಅವರು ಗಂಭೀರ ಆರೋಪ ಮಾಡಿದರು.
ಈ ಮೂಲಕ ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ಯಾವ ಸಂದೇಶವನ್ನು ನೀಡಲು ಹೊರಟಿದ್ದಾರೆ? ಸಿದ್ದರಾಮಯ್ಯನವರು ಭ್ರಷ್ಟಾಚಾರದ ಪರವಾಗಿದ್ದಾರೆಯೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ











Click it and Unblock the Notifications