ಮಣಿಪಾಲ್ ಆಸ್ಪತ್ರೆಯಲ್ಲಿ ಕುರುಬೂರು ಶಾಂತಕುಮಾರ್‌ಗೆ ಚಿಕಿತ್ಸೆ ವ್ಯವಸ್ಥೆ
ಪಂಜಾಬ್‌ನ ಪಟಿಯಾಲ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕರ್ನಾಟಕದ ರೈತ ನಾಯಕ ಕುರುಬೂರು ಶಾಂತಕುಮಾರ್ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಸದ್ಯ ಅವರು ಪಟಿಯಾಲದಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ರಾಜ್ಯ ಸರ್ಕಾರ ಇವರ ನೆರವಿಗೆ ಧಾವಿಸಿದೆ. ಕುರುಬೂರು ಶಾಂತಕುಮಾರ್ ಅವರನ್ನು ಪಂಬಾಜ್‌ನಿಂದ ಬೆಂಗಳೂರಿಗೆ ಕರೆತರಲು ಸೂಕ್ತ ವ್ಯವಸ್ಥೆ ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರಲು ನಮ್ಮ ಸರ್ಕಾರ ವ್ಯವಸ್ಥೆ ಮಾಡಿದೆ. ಏರ್ ಆಂಬುಲೆನ್ಸ್ ಮೂಲಕ ಶಾಂತಕುಮಾರ್ ಅವರನ್ನು ಚಂಡೀಗಡದಿಂದ ಬೆಂಗಳೂರಿಗೆ ಕರೆತಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಸ್ತೆ ಅಪಘಾತದಲ್ಲಿ ಶಾಂತಕುಮಾರ್ ಅವರ ಬೆನ್ನುಮೂಳೆಗೆ ಗಂಭೀರ ಗಾಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪ್ರಸ್ತುತ ಶಾಂತಕುಮಾರ್ ಅವರಿಗೆ ಪಟಿಯಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗಾಗಿ ಅವರನ್ನು ತಕ್ಷಣವೇ ಬೆಂಗಳೂರಿಗೆ ಕರೆತರಲು ಸಿಎಂ ನಿರ್ದೇಶಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಅಧಿಕಾರಿಗಳು ಏರ್ ಆಂಬುಲೆನ್ಸ್ ವ್ಯವಸ್ಥೆ ಮಾಡಿದ್ದಾರೆ. ಶೀಘ್ರದಲ್ಲೇ ಅವರನ್ನು ಬೆಂಗಳೂರಿಗೆ ಕರೆತಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಿದ್ದಾರೆ. ಸದ್ಯ ರಸ್ತೆ ಅಪಘಾತದಲ್ಲಿ ಶಾಂತಕುಮಾರ್ ಅವರ ಬೆನ್ನು ಮೂಳೆಗೆ ಗಂಭೀರ ಗಾಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿತ್ತು. ರೈತರ ಸಭೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಪಂಜಾಬ್‌ನಲ್ಲಿ ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಪಂಜಾಬ್‌ನ ಪಟಿಯಾಲ ರಸ್ತೆಯಲ್ಲಿ ಇವರ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿತ್ತು. ದೆಹಲಿಯ ಗಡಿ ಭಾಗದಲ್ಲಿ ನಡೆಯುತ್ತಿದ್ದ ರೈತರ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಲು ಅವರು ಕುರುಬೂರು ಶಾಂತಕುಮಾರ್ ಕಾರಿನಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿತ್ತು. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಳೆದ ಒಂದು ವರ್ಷದಿಂದ ಅಲ್ಲಿ ಪ್ರತಿಭಟನೆ ನಡೆಯುತ್ತಿದೆ.
ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರು ಒಂದು ವರ್ಷದಿಂದಲೂ ದೆಹಲಿಯ ಕನೋಲಿ ಬಾರ್ಡರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಾಂತಕುಮಾರ್ ಅವರು ಸಭೆಗೆ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ಈ ಅಪಘಾತ ಸಂಭವಿಸಿತ್ತು.












Click it and Unblock the Notifications