ರೈತರಿಗಾಗಿ ಕಾಂಗ್ರೆಸ್ ಸರ್ಕಾರ ಮಾಡಿರುವ ಕೆಲಸಗಳ ಪಟ್ಟಿ ನೀಡಿದ ಸಿಎಂ ಸಿದ್ದರಾಮಯ್ಯ

ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ರೈತರ ಬಗ್ಗೆ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಬಿಜೆಪಿ, ಜೆಡಿಎಸ್ ಸಚಿವ ಪಾಟೀಲ್ ವಿರುದ್ಧ ಕಿಡಿ ಕಾರಿದೆ. ಸಿಎಂ ಸಿದ್ದರಾಮಯ್ಯ ಸಚಿವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಅನ್ನದಾತರಾದ ರೈತರ ಬಗ್ಗೆ ನಾವು ಎಚ್ಚರಿಕೆಯಿಂದ ಮಾತ್ರವಲ್ಲ ಗೌರವದಿಂದ ಮಾತನಾಡಬೇಕು. ಹಗುರ ಮಾತುಗಳ ಮೂಲಕ ರೈತರಿಗೆ ಅವಮಾನವಾಗುವಂತೆ ಮಾಡಬಾರದು. ಇದು ಪ್ರತಿಯೊಬ್ಬರು ಕಡ್ಡಾಯವಾಗಿ ಅನುಸರಿಸಿಕೊಂಡು ಬರಬೇಕಾದ ನೀತಿ ಸಂಹಿತೆ ಎಂದಿದ್ದಾರೆ.

 CM Siddaramaiah Asserts: BJP Leaders Lack the Right to Speak About Farmers

ರೈತ ಕುಟುಂಬದಿಂದ ಬಂದಿರುವ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರಿಗೆ ರೈತರನ್ನು ಅವಮಾನಿಸಬೇಕೆಂಬ ದುರುದ್ದೇಶ ಖಂಡಿತ ಇರಲಾರದು. ತನ್ನ ಜೊತೆಗಿದ್ದ ರೈತರೊಂದಿಗಿನ ಸಲಿಗೆಯಿಂದ ಕೆಲವು ಮಾತುಗಳನ್ನು ಆಡಿದ್ದಾರೆ. ಆದರೆ ಇದು ಸಮಸ್ತ ರೈತ ಸಮುದಾಯಕ್ಕೆ ಅನ್ವಯಮಾಡುವಾಗ ವಿಪರೀತ ಅರ್ಥಕ್ಕೆ ಕಾರಣವಾಗುತ್ತದೆ ಎಂದಿದ್ದಾರೆ.

ರೈತರ ಕಲ್ಯಾಣಕ್ಕಾಗಿ ಕಿಂಚಿತ್ತೂ ಕೆಲಸ ಮಾಡದೆ ಇರುವ, ರೈತ ವಿರೋಧಿಯಾಗಿರುವ ಬಿಜೆಪಿಯ ನಾಯಕರು ಇಂತಹದ್ದೇ ಅವಕಾಶಕ್ಕಾಗಿ ಕಾದು ಕೂತವರಂತೆ ಶಿವಾನಂದ ಪಾಟೀಲರ ಮಾತುಗಳನ್ನು ವಿವಾದವನ್ನಾಗಿ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಗುಂಡಿಕ್ಕಿ ಸಾಯಿಸಿದ್ದು ನೀವಲ್ಲವೆ?

ಬೀಜ-ಗೊಬ್ಬರ ಕೊಡಿ ಎಂದು ಕೇಳಿದ ರೈತರನ್ನು ಗುಂಡಿಕ್ಕಿ ಸಾಯಿಸಿದ ಮತ್ತು ರೈತರ ಸಾಲ ಮನ್ನಾ ಮಾಡಿ ಎಂದು ಕೇಳಿದರೆ ನೋಟ್ ಪ್ರಿಂಟಿಂಗ್ ಮೆಷಿನ್ ಇದೆಯೇ ಎಂದು ಕೇಳಿದ ಬಿಜೆಪಿ ಪಕ್ಷದ ನಾಯಕರಿಗೆ ಕಾಂಗ್ರೆಸ್ ಪಕ್ಷದ ವಿರುದ್ಧ ಮಾತನಾಡುವ ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದ್ದಾರೆ.

ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಬಿಜೆಪಿ ನಾಯಕರು ರೈತರ ಕಲ್ಯಾಣಕ್ಕಾಗಿ ಏನು ಮಾಡಿದ್ದಾರೆ? ನಾವು ನಿಜವಾದ ರೈತ ಮಿತ್ರರು, ಬಿಜೆಪಿಯವರಂತೆ ನಕಲಿ ಮಿತ್ರರಲ್ಲ. ರೈತರ ಬಗೆಗಿನ ನಮ್ಮ ಪ್ರೀತಿ-ಅಭಿಮಾನಕ್ಕೆ ನಮ್ಮ ಸರ್ಕಾರದ ಕಳೆದ ಆರು ತಿಂಗಳುಗಳ ಅವಧಿಯಲ್ಲಿ ಜಾರಿಗೆ ತಂದಿರುವ ರೈತ ಪರ ಕಾರ್ಯಕ್ರಮಗಳೇ ಸಾಕ್ಷಿ ಎಂದಿದ್ದಾರೆ.

ರೈತರಿಗಾಗಿ ಕಾಂಗ್ರೆಸ್ ಸರ್ಕಾರ ಮಾಡಿರುವ ಕೆಲಸಗಳ ಪಟ್ಟಿ ನೀಡಿದ್ದಾರೆ. ರಾಜ್ಯದಲ್ಲಿ ಬರಗಾಲದಿಂದ ನೊಂದಿರುವ ರೈತರಿಗೆ ಕೇಂದ್ರ ಸರ್ಕಾರ ಚಿಕ್ಕಾಸಿನ ಪರಿಹಾರ ನೀಡದೆ ಇದ್ದರೂ ನಾವು ಪ್ರತಿ ರೈತ ಕುಟುಂಬಗಳಿಗೆ ಎರಡು ಸಾವಿರ ರೂಪಾಯಿಗಳನ್ನು ನೀಡಿದ್ದೇವೆ. ಸಹಕಾರಿ ಬ್ಯಾಂಕುಗಳಿಂದ ಪಡೆದಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳ ಬಡ್ಡಿ ಮನ್ನಾ ಮಾಡಲು ನಿರ್ಧರಿಸಿದ್ದೇವೆ ಎಂದು ಹೇಳಿದರು.

ಬಗರ್ ಹುಕುಂ ಭೂಮಿ ಸಕ್ರಮ

ರಾಜ್ಯದ 24 ಜಿಲ್ಲೆಗಳ 106 ತಾಲ್ಲೂಕುಗಳಲ್ಲಿ 100 ಕೋಟಿ ರೂ.ವೆಚ್ಚದಲ್ಲಿ ಕೃಷಿ ಭಾಗ್ಯ ಯೋಜನೆಗೆ ಚಾಲನೆ ನೀಡಿದ್ದೇವೆ. ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆಗಳ ಕಾಲ ಮೂರು ಫೇಸ್ ವಿದ್ಯುತ್ ನೀಡುತ್ತಿದ್ದೇವೆ. ಹದಿನೈದು ವರ್ಷ ಸಾಗುವಳಿ ಮಾಡಿದ ಬಗರ್ ಹುಕುಂ ಭೂಮಿಗಳ ಸಕ್ರಮ ಗೊಳಿಸಲು ತೀರ್ಮಾನಿಸಿದ್ದೇವೆ.

ಅಕ್ರಮ ವಿದ್ಯುತ್ ಸಂಪರ್ಕ ಹೊಂದಿರುವ 4 ಲಕ್ಷ ಕೃಷಿ ಪಂಪ್ ಸೆಟ್ ಗಳ ಸಕ್ರಮ ಮಾಡುವ ದಿಟ್ಟ ನಿರ್ಧಾರ ಕೈಗೊಂಡಿದ್ದೇವೆ. ಕೃಷಿಯಂತ್ರಧಾರೆ ಕೇಂದ್ರಗಳನ್ನು ಬಲಪಡಿಸಲು 100 ಕೋಟಿ ರೂ.ವೆಚ್ಚದಲ್ಲಿ ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಾಲ ಮನ್ನಾ ಮಾಡುವಂತೆ ದೇಶಾದ್ಯಂತ ರೈತರು ಒತ್ತಾಯಿಸುತ್ತಿದ್ದರೆ, ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರ ರೈತರ ಕತ್ತು ಹಿಸುಕಿ ಸಾಯಿಸುವ ಕರಾಳ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲು ಏನೆಲ್ಲ ಕಸರತ್ತು ನಡೆಸಿತ್ತು ಎನ್ನುವುದನ್ನು ಇಡೀ ದೇಶ ಕಂಡಿದೆ. ಕೃಷಿ ಕ್ಷೇತ್ರವನ್ನು ಕಾರ್ಪೋರೇಟ್ ಧಣಿಗಳಿಗೆ ಒತ್ತೆ ಇಡುವ ಬಿಜೆಪಿಯ ಹುನ್ನಾರವನ್ನು ದೇಶದ ರೈತರು ಅರ್ಥಮಾಡಿಕೊಂಡಿದ್ದಾರೆ. ತಮ್ಮ ರೈತ ವಿರೋಧಿ ಕೃತ್ಯಗಳನ್ನು ಮುಚ್ಚಿಹಾಕಲು ಬಿಜೆಪಿ ನಾಯಕರು ಆಗಾಗ ತಿರುಚಿದ ಹೇಳಿಕೆಗಳನ್ನು ಹಿಡ್ಕೊಂಡು ಎದೆ ಬಡಿದುಕೊಳ್ಳುತ್ತಾ ಇರುತ್ತಾರೆ ಎಂದು ಟೀಕಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+