ಹಜ್ ಯಾತ್ರೆ ಸುಗಮಕ್ಕೆ ಕ್ರಮ: ಸಿದ್ದರಾಮಯ್ಯ ಭರವಸೆ
ಬೆಂಗಳೂರು, ಆಗಸ್ಟ್ 9: ಹಜ್ ಯಾತ್ರೆ ವೇಳೆ ಕಸ್ಟಮ್ಸ್, ಇಮಿಗ್ರೇಷನ್ ವಿಷಯದಲ್ಲಿ ಆಗುತ್ತಿರುವ ತೊಂದರೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಂ ಸಮುದಾಯದ ಮುಖಂಡರಿಗೆ ಅಭಯ ನೀಡಿದರು.
ಈ ಸಂಬಂಧ ಕೇಂದ್ರ ಗೃಹ ಸಚಿವರು, ಹಣಕಾಸು ಸಚಿವರಿಗೆ ಪತ್ರ ಬರೆಯಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇದರ ಜತೆಗೆ ವಕ್ಫ್ ಮಂಡಳಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುವಂತೆ ಅಗತ್ಯ ಕ್ರಮಕ್ಕೆ ಸೂಚಿಸಲಾಗುವುದೆಂದೂ ಮುಖ್ಯಮಂತ್ರಿಗಳು ಹೇಳಿದರು.

ಇಂದು ಸಚಿವ ರೋಷನ್ ಬೇಗ್ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಮುಸ್ಲಿಂ ಸಮುದಾಯದ ಧರ್ಮ ಗುರುಗಳು ಭೇಟಿಯಾಗಿದ್ದರು. ಈ ಸಂದರ್ಭ ಅವರು ನಿಯೋಗಕ್ಕೆ ಈ ಭರವಸೆಗಳನ್ನು ನೀಡಿದರು.












Click it and Unblock the Notifications