ನಾಲ್ಕು ವರ್ಷ ಅಧಿಕಾರದಲ್ಲಿದ್ದು ಬಿಜೆಪಿ ಗುಂಡಿ ಮುಚ್ಚಲಾಗಲಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ
ಬೆಳಗಾವಿ, ಡಿಸೆಂಬರ್ 06 : ನಾವು ಅಧಿಕಾರಕ್ಕೆ ಬಂದು 6 ತಿಂಗಳಾಯಿತು. ಬಿಜೆಪಿ ಬ್ರಾಂಡ್ ಬೆಂಗಳೂರು ಮಾಡಿದ್ದಾರೆಯೇ. ಅವರಿಂದ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಈ ಕುರಿತು ಮಂಗಳವಾರ ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಬ್ರಾಂಡ್ ಬೆಂಗಳೂರು ಕುರಿತಂತೆ ಬಿಜೆಪಿ ಸರಿಯಾಗಿ ಕೆಲಸ ಆಗುತ್ತಿಲ್ಲ ಎಂದು ಆರೋಪಿಸಿರುವ ಬಗ್ಗೆ ಮಾತನಾಡಿ ಉಚ್ಚ ನ್ಯಾಯಾಲಯ ಅವರಿಗೆ ಛೀಮಾರಿ ಹಾಕಿದೆ. ಅವರಿಗೆ ಬೆಂಗಳೂರಿನ ಬಗ್ಗೆ ಮಾತನಾಡಲು ಯಾವ ನೈತಿಕ ಹಕ್ಕಿದೆ ಎಂದರು.

ಉತ್ತರ ಕರ್ನಾಟಕದಲ್ಲಿ ಸದನ ನಡೆಯುತ್ತಿದ್ದು ಸಚಿವರು ತೆಲಂಗಾಣದಲ್ಲಿದ್ದಾರೆ ಎಂಬ ಹೇಳಿಕೆಗೆ ಉತ್ತರಿಸಿ ಎಲ್ಲರೂ ಅಲ್ಲಿಲ್ಲ, ಒಂದಿಬ್ಬರು ಹೋಗಿದ್ದಾರೆ ರಾಜಕೀಯವನ್ನೂ ಮಾಡಬೇಕಲ್ಲ. ಜಮೀರ್ ಅಹ್ಮದ್ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರು ಬರಬೇಕಷ್ಟೇ, ಬಹುತೇಕ ಜನ ವಾಪಸ್ಸು ಬಂದಿದ್ದಾರೆ ಎಂದರು.
ಅಭಿವೃದ್ಧಿ ಭಾಷಣವಿಲ್ಲ ಸಿದ್ದರಾಮಯ್ಯ ಕೇವಲ ಓಲೈಕೆ ಭಾಷಣ ಮಾಡುತ್ತಾರೆ ಎಂಬ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅದೆಲ್ಲಾ ನಿಮ್ಮಿಂದಲೇ ಆಗಿದೆ. ಎಲ್ಲಾ ಸಮುದಾಯಗಳು ಒಳಗೊಂಡಂತೆ ಮುಸ್ಲಿಮರನ್ನು ರಕ್ಷಣೆ ಮಾಡಲಾಗುವುದು ಎಂದರು.

ಬ್ರ್ಯಾಂಡ್ ಬೆಂಗಳೂರು" ಪರಿಕಲ್ಪನೆಯಲ್ಲಿ ಯೋಜನೆ
ನಿರಂತರವಾಗಿ ಬೆಳೆಯುತ್ತಿರುವ ಬೆಂಗಳೂರಿಗೆ ಯೋಜನಾಬದ್ಧವಾಗಿ ಹೊಸರೂಪ ನೀಡಲು "ಬ್ರ್ಯಾಂಡ್ ಬೆಂಗಳೂರು" ಪರಿಕಲ್ಪನೆಯಲ್ಲಿ ಯೋಜನೆ ರೂಪಿಸಲಾಗುತ್ತಿದೆ" ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ತಿಳಿಸಿದರು.
ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್ ಅವರು ಬ್ರ್ಯಾಂಡ್ ಬೆಂಗಳೂರು ಹಾಗೂ ಅದರ ಅಧ್ಯಯನ ವರದಿ ಸ್ವೀಕೃತಿ ಹಾಗೂ ಮುಂದಿನ ಕ್ರಮಗಳ ವಿಚಾರವಾಗಿ ಪ್ರಶ್ನೆ ಕೇಳಿದರು. ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರ ಪರವಾಗಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಉತ್ತರಿಸಿದರು.
"ಬೆಂಗಳೂರು ನಗರ ಈ ಹಿಂದೆ ಗಾರ್ಡನ್ ಸಿಟಿ, ಪ್ಯಾರಡೈಸ್ ಆಫ್ ಪೆನ್ಷನರ್ಸ್, ಹಾಸ್ಪಿಟಲ್ ಹಬ್, ಐಟಿ ಹಬ್, ಎಜುಕೇಶನ್ ಹಬ್ ಆಗಿ ಹೆಸರು ಮಾಡಿತ್ತು. ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿಂದೆ ವಿಶ್ವ ನಾಯಕರು ಬೆಂಗಳೂರಿಗೆ ಬಂದು ನಂತರ ದೇಶದ ಇತರೆ ನಗರಗಳಿಗೆ ತೆರಳುತ್ತಿದ್ದರು.
ಬೆಂಗಳೂರಿನ ಸ್ವರೂಪವನ್ನು ಬದಲಿಸಲು ನಮ್ಮ ಉಪಮುಖ್ಯಮಂತ್ರಿಗಳು ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆ ಮೂಲಕ ಕೆಲಸ ಮಾಡಲು ಮುಂದಾಗಿದ್ದಾರೆ. ಇದಕ್ಕಾಗಿ ಬೆಂಗಳೂರಿನ ಸಂಘ ಸಂಸ್ಥೆಗಳು, ಎಲ್ಲಾ ವರ್ಗದ ಜನರ ಅಭಿಪ್ರಾಯವನ್ನು ಸಂಗ್ರಹಿಸಿದ್ದಾರೆ. ಸುಗಮ ಸಂಚಾರ ಬೆಂಗಳೂರು, ಹಸಿರು ಬೆಂಗಳೂರು, ಆರೋಗ್ಯ ಬೆಂಗಳೂರು, ಜನಹಿತ ಬೆಂಗಳೂರು, ಶೈಕ್ಷಣಿಕ ಬೆಂಗಳೂರು, ತಂತ್ರಜ್ಞಾನ ಮತ್ತು ಮಾಹಿತಿ ಬೆಂಗಳೂರು, ಹಸಿರು ಬೆಂಗಳೂರು, ಜಲ ಸುರಕ್ಷ ಬೆಂಗಳೂರು ಬಗ್ಗೆ 70 ಸಾವಿರ ಸಲಹೆಗಳನ್ನು ಸಂಗ್ರಹಿಸಲಾಗಿದೆ. ಈ ಪ್ರತಿ ವಿಭಾಗಕ್ಕೆ ಸಂಬಂಧಿಸಿದ ಸಲಹೆಗಳನ್ನು ವಿವಿಧ ಸಂಸ್ಥೆಗಳಿಗೆ ಅಧ್ಯಯನಕ್ಕೆ ನೀಡಲಾಗಿದೆ. ಈ ಸಂಸ್ಥೆಗಳು ವರದಿ ನೀಡಿದ ನಂತರ ಈ ಕುರಿತ ಸಲಹೆಗಳನ್ನು ಜಾರಿಗೊಳಿಸಲಾಗುವುದು" ಎಂದರು.
"ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಬೃಹತ್ ಬೆಂಗಳೂರು ಸಮನ್ವಯ ಸಮಿತಿ ರಚನೆ ಮಾಡಲಾಗುವುದು. ಸರ್ಕಾರದ ಮುಖ್ಯಕಾರ್ಯದರ್ಶಿಗಳ ಮಟ್ಟದಲ್ಲಿ ಬೃಹತ್ ಬೆಂಗಳೂರು ಕಾರ್ಯಕಾರಿ ಸಮಿತಿ ಮಾಡಿ ಬೆಂಗಳೂರನ್ನು ಹೊಸ ದಿಕ್ಕಿನಲ್ಲಿ ತೆಗೆದುಕೊಂಡು ಹೋಗಲು ನಮ್ಮ ಉಪಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ನಾವು ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಮುಂದೆ ಕೆಲಸ ಮಾಡುತ್ತೇವೆ ಎಂದು ಹೇಳುತ್ತಿದ್ದು, ಇದು ವಿರೋಧ ಪಕ್ಷದ ನಾಯಕರಿಗೆ ಅರ್ಥವಾಗುತ್ತಿಲ್ಲ.












Click it and Unblock the Notifications