ಸರ್ವಧರ್ಮ ಸಾಮೂಹಿಕ ವಿವಾಹ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಅವರು ಇಂದು ವಿಜಯನಗರ ಜಿಲ್ಲೆಯ ಬಂಡಿಹಳ್ಳಿಯ ಎಸ್.ಎಸ್ ಫಾರಂ ಹೌಸ್‌ನಲ್ಲಿ ಆಯೋಜಿಸಿದ್ದ ಸರ್ವಧರ್ಮಗಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಭಾಗಿಯಾದರು. ಸಾಮೂಹಿಕ ವಿವಾಹದಲ್ಲಿ ಭಾಗಿಯಾಗಿದ್ದ ವಧು-ವರರಿಗೆ ಅಕ್ಷತೆ ಕಾಳು ಹಾಕುವ ಮೂಲಕ ಆಶೀರ್ವದಿಸಿದರು. ಬಸವಣ್ಣನವರ ಕಾಲದಲ್ಲಿಯೇ ಅಂತರ್ಜಾತಿ ವಿವಾಹ ಪದ್ಧತಿ ಪ್ರಚಲಿತದಲ್ಲಿತ್ತು. ಅಂತರ್ಜಾತಿ ವಿವಾಹಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು. ಇದರಿಂದಾಗಿ ಸಮಾಜದಲ್ಲಿನ ಜಾತಿ ವ್ಯವಸ್ಥೆ ಅಳಿದು ಸಮಸಮಾಜ ನಿರ್ಮಾಣ ಸಾಧ್ಯವಾಗಲಿದೆ ಎಂದು ಸಿದ್ದರಾಮಯ್ಯ ಕರೆ ನೀಡಿದರು.

ಸರ್ವಧರ್ಮಗಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಹೊಸ ಜೀವನಕ್ಕೆ ಕಾಲಿಟ್ಟಿರುವ ವಧು-ವರರಿಗೆ ಶುಭ ಹಾರೈಕೆಗಳು. ವಿವಾಹದ ಖರ್ಚು ವೆಚ್ಚಗಳನ್ನು ಭರಿಸಲಾಗದ ಬಡಕುಟುಂಬಗಳಿಗೆ ಸಾಮೂಹಿಕ ವಿವಾಹ ವರದಾನವಾಗಿದೆ. ಸರಳ ಶೈಲಿಯಲ್ಲಿ ವಿವಾಹವಾಗುವ ಪದ್ದತಿಯನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

CM Siddaramaiah Attends Multi-faith Mass Wedding Ceremony In Vijayanagara District

ಜಾತ್ಯತೀತ ತತ್ವವನ್ನು ನಮ್ಮ ಸಂವಿಧಾನ ಬೋಧಿಸಿದೆ. ಇದೇ ಆಶಯವನ್ನು ವ್ಯಕ್ತಪಡಿಸಿದ ಬಸವಣ್ಣವರು, ಜಾತಿ ಆಧಾರಿತ ಸಮಾಜ ವ್ಯವಸ್ಥೆ ಸಾಧುವಲ್ಲ ಎಂದು ಪ್ರತಿಪಾದಿಸಿದ್ದರು. 'ದಯವೇ ಧರ್ಮದ ಮೂಲವಯ್ಯ' ಎಂದು ನುಡಿದು ಹಲವು ಉದಾತ್ತ ತತ್ವವನ್ನು ಬೋಧಿಸಿದ ಬಸವೇಶ್ವರರನ್ನು ಸರ್ಕಾರ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಮನುಷ್ಯ ಹುಟ್ಟುವಾಗ ವಿಶ್ವಮಾನವನಾಗಿದ್ದು, ಜಾತಿಧರ್ಮಗಳ ಬಂಧನದದಲ್ಲಿ ಸಿಲುಕಿ ಅಲ್ಪಮಾನವನಾಗುತ್ತಾನೆ. ಆದ್ದರಿಂದ ವಿಶ್ವಮಾನವರಾಗುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕಾಗಿದೆ. ಹೆಣ್ಣುಮಕ್ಕಳಿಗೆ ಶಕ್ತಿತುಂಬುವ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸಿದೆ. ಇಂದು ವಿವಾಹ ಬಂಧನಕ್ಕೊಳಗಾದ ಮಹಿಳೆಯರಿಗೂ ಸರ್ಕಾರದ ಗ್ಯಾರಂಟಿಗಳು ತಲುಪವಂತಾಗಬೇಕು ಎಂದರು.

CM Siddaramaiah Attends Multi-faith Mass Wedding Ceremony In Vijayanagara District

ಆರ್ಥಿಕವಾಗಿ ದುರ್ಬಲರಾಗಿರುವ ಜನರ ಕೊಂಡುಕೊಳ್ಳುವ ಶಕ್ತಿ ಹೆಚ್ಚಬೇಕು. ಅಂತೆಯೇ ಶ್ರೀಮಂತವರ್ಗದವರೂ ಕೂಡ ಬಡವರ ಸಹಾಯಕ್ಕೆ ಮುಂದಾಗಬೇಕು, ಈ ಮೂಲಕ ಸಮಾಜದ ಋಣ ತೀರಿಸಲು ಪ್ರಯತ್ನಿಸಬೇಕು. ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿರುವ ಸಂವಿಧಾನ ಎಲ್ಲರಿಗೂ ಸಮಾನ ಹಕ್ಕು ಹಾಗೂ ಸಮಾನ ಅವಕಾಶಗಳನ್ನು ನೀಡಿದೆ. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ಅರಿತಿರಬೇಕು. ಸಂವಿಧಾನ ನೀಡಿರುವ ಹಕ್ಕು ಬಾಧ್ಯತೆಗಳ ಬಗ್ಗೆ ಅರಿವು ಪಡೆದು, ಜವಾಬ್ದಾರಿಯುತ ನಾಗರಿಕನಾಗುವುದು ಅವಶ್ಯಕ ಎಂದು ಸಿದ್ದರಾಮಯ್ಯ ಹೇಳಿದರು.

ಇದೇ ವೇಳೆ ಮಾತನಾಡಿದ ಅವರು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯ ಬಗ್ಗೆ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುವುದು ಸಹಜ. 160 ಕೋಟಿ ರೂಪಾಯಿ ವೆಚ್ಚದಲ್ಲಿ ಸಿದ್ಧಪಡಿಸಲಾದ ವರದಿಯನ್ನು ಸ್ವೀಕರಿಸಲಾಗಿದ್ದು ವರದಿಯ ಜಾರಿಯ ಬಗ್ಗೆ ತೀರ್ಮಾನ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದು ಹೇಳಿದರು.

CM Siddaramaiah Attends Multi-faith Mass Wedding Ceremony In Vijayanagara District

ಇನ್ನು ಚಾಮರಾಜಪೇಟೆಯಲ್ಲಿ ದನಗಳಿಗೆ ಹಿಂಸೆ ನೀಡಿರುವ ಘಟನೆ ಬಗ್ಗೆಯೂ ಅವರು ಮಾತನಾಡಿದರು. ಇದು ಅತ್ಯಂತ ಅಮಾನವೀಯ, ಪ್ರಾಣಿ ಹಿಂಸೆ ಮಾಡುವುದು ಅಪರಾಧ, ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಲಾಗುವುದು.

ಈವರೆಗೆ ಕೃತ್ಯ ಎಸಗಿದವರ ಮಾಹಿತಿ ಸಿಕ್ಕಿಲ್ಲ. ಪೊಲೀಸ್ ಆಯುಕ್ತರಿಗೆ ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಕಾನೂನು ತನ್ನ ಕಾರ್ಯ ಮಾಡುತ್ತಿರುವ ಹೊರತಾಗಿಯೂ ಹಿಂದೂ ಸಂಘಟನೆಗಳ ಪ್ರತಿಭಟನೆ ಮಾಡುತ್ತಿರುವುದು ರಾಜಕೀಯ ಪ್ರೇರಿತ ಎಂದು ಪ್ರತಿಕ್ರಿಯಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+