Siddaramaiah: ಸಚಿವ ಸಂಪುಟ ವಿಸ್ತರಣೆ: ನಾಗೇಂದ್ರ ಸಂಪುಟಕ್ಕೆ ಸೇರ್ಪಡೆ: ಸಿದ್ದರಾಮಯ್ಯ
ಬೆಂಗಳೂರು, ನವೆಂಬರ್ 30: ಸಂಪುಟ ಪುನಾರಚನೆ, ವಿಸ್ತರಣೆ ಕುರಿತಂತೆ ರಾಹುಲ್ ಗಾಂಧಿ ಅಥವಾ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ಮಾಡಿಲ್ಲ. ನಾಗೇಂದ್ರ ಅವರು ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಸಂಜೆ ನವದೆಹಲಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರನ್ನ ಭೇಟಿ ಮಾಡಿದ್ದು, ಸಂಪುಟ ಪುನಾರಚನೆ ಸಾಧ್ಯತೆಯ ಬಗ್ಗೆ ಊಹಾಪೋಹಗಳು ಹರಡಿವೆ. ಮಾಜಿ ಬುಡಕಟ್ಟು ಕಲ್ಯಾಣ ಸಚಿವ ಬಿ ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಕುರಿತು ಸಿಎಂ ಪಕ್ಷದ ವರಿಷ್ಠರೊಂದಿಗೆ ಚರ್ಚಿಸುವ ಸಾಧ್ಯತೆಯಿದೆ.

ಇನ್ನೂ ಸರ್ಕಾರಿ ಸ್ವಾಮ್ಯದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ಎಲ್‌ಪಿ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಉನ್ನತ ಮಟ್ಟದ ನಾಯಕರೊಂದಿಗೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಗರಣದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ನಾಗೇಂದ್ರ ಅವರಿಗೆ ಕ್ಲೀನ್ ಚಿಟ್ ನೀಡಿರುವುದರಿಂದ, ಮಾಜಿ ಸಚಿವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಸಿದ್ದರಾಮಯ್ಯನವರಿಗೆ ಸಂಪುಟ ಪುನಾರಚನೆಯ ಸದ್ಯಕ್ಕೆ ತುರ್ತು ಇಲ್ಲ ಹಾಗೂ ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ಯಾವುದೇ ಚುನಾವಣೆಗಳು ನಡೆಯುವುದಿಲ್ಲವಾದ್ದರಿಂದ ಕೆಪಿಸಿಸಿ ಅಧ್ಯಕ್ಷರನ್ನು ಬದಲಾಯಿಸಲು ಹೈಕಮಾಂಡ್‌ಗೆ ಯಾವುದೇ ತುರ್ತು ಇಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದ್ದಾರೆ.
ಇನ್ನೂ ಉಪಚುನಾವಣೆಯ ಬಳಿಕ ಸಚಿವ ಸಂಪುಟ ಪುನಾರಚನೆಯಾಗಲಿದೆ ಎಂದು ರಾಜಕೀಯ ವಲಯದಲ್ಲಿ ಕೇಳಿ ಬಂದಿತ್ತು. ಆದರೆ, ಸಿದ್ದರಾಮಯ್ಯನವರು ವಿಧಾನಸಭೆ ಅಧಿವೇಶನಕ್ಕೆ ಮುನ್ನ ಪುನರ್ ರಚನೆ ಮಾಡಿದರೆ, ಒಡೆದ ಮನೆಯಾಗಿರುವ ಬಿಜೆಪಿಗೆ ಪ್ರಬಲ ಅಸ್ತ್ರ ನೀಡಿದಂತಾಗುತ್ತದೆ. ಮಂತ್ರಿಗಳು ಭ್ರಷ್ಟರು ಮತ್ತು ಅಸಮರ್ಥರಾಗಿದ್ದರಿಂದ ಪುನಾರಚನೆ ಅಗತ್ಯವಾಗಿದೆ ಎಂದು ಬಿಜೆಪಿ ಪ್ರತಿಪಾದಿಸುತ್ತದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಿದ್ದರಾಮಯ್ಯನವರ ಆಪ್ತರಾದ ಸಚಿವ ಸತೀಶ್ ಜಾರಕಿಹೊಳಿ, ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ-ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮುಂಚೂಣಿಯಲ್ಲಿದ್ದಾರೆ. ಇನ್ನೂ ಸಹಕಾರ ಸಚಿವರಾ ಕೆ ಎನ್ ರಾಜಣ್ಣ ಅವರು ರಾಜ್ಯದಲ್ಲಿ ಪಕ್ಷವನ್ನು ಮುನ್ನಡೆಸಲು ನನಗೂ ಅರ್ಹತೆ ಇದೆ. ಪಕ್ಷದಲ್ಲಿ ಡಿಕೆ ಶಿವಕುಮಾರ್ ಅವರ ಸ್ಥಾನಮಾನಕ್ಕೆ ಸರಿಸಾಟಿಯಾಗಬಲ್ಲ ನಾಯಕರೊಬ್ಬರಿದ್ದಾರೆ, ಅವರನ್ನು ಆ ಸ್ಥಾನಕ್ಕೆ ತಂದು ಕೂರಿಸಬಹುದು ಎಂದು ಕಾಂಗ್ರೆಸ್ ಹೈಕಮಾಂಡ್ ಗೆ ಮನವರಿಕೆಯಾಗುವವರೆಗೂ ಹೊಸ ಕೆಪಿಸಿಸಿ ಅಧ್ಯಕ್ಷರನ್ನು ಆತುರದಿಂದ ನೇಮಿಸುವ ನಿರೀಕ್ಷೆಯಿಲ್ಲ. ಪಕ್ಷ ಹದಗೆಟ್ಟಾಗ ಶಿವಕುಮಾರ್ ಕಷ್ಟಪಟ್ಟು ಪಕ್ಷ ಸಂಘಟಿಸಿದ್ದಾರೆ ಎಂದು ಹೇಳಿದ್ದಾರೆ.












Click it and Unblock the Notifications