ಸಿದ್ದರಾಮಯ್ಯಗೆ ಶುಭಾಶಯ ಹೇಳಿದ ಗಣ್ಯರು
ಬೆಂಗಳೂರು, ಆ.12 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ತಮ್ಮ 67ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಹುಟ್ಟುಹಬ್ಬದ ಆಚರಣೆಯ ಕಾರ್ಯಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳದ ಸಿಎಂ ಉಪ ಚುನಾವಣೆ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ.
ಆ.12ರ ಮಂಗಳವಾರ ಸಿದ್ದರಾಮಯ್ಯ ಅವರ 67ನೇ ಜನ್ಮದಿನ. ಈ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದ ಮುಖ್ಯಮಂತ್ರಿಗಳ ಗೃಹ ಕಚೇರಿ ಮುಂದೆ ನೂರಾರು ಕಾರ್ಯಕರ್ತರು ಅವರಿಗೆ ಹುಟ್ಟು ಹಬ್ಬದ ಶುಭಾಶಯ ಹೇಳಲು ಕಾದು ನಿಂತಿದ್ದರು. ಸುಮಾರು ಒಂದೂವರೆ ಗಂಟೆ ಮನೆಯಲ್ಲಿ ಜನರು ಭೇಟಿ ಮಾಡಿದ ಸಿಎಂ ನಂತರ ಶಿಕಾರಿಪುರಕ್ಕೆ ತೆರಳಿದರು. [ಹುಟ್ಟುಹಬ್ಬದಂದು ಸಿಎಂ ಪ್ರಚಾರದಲ್ಲಿ ಬ್ಯುಸಿ]
ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಬೆಂಗಳೂರು ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ, ವಸತಿ ಸಚಿವ ಅಂಬರೀಶ್ ಸೇರಿದಂತೆ ಹಲವು ನಾಯಕರು ಬೆಳಗ್ಗೆ ಮುಖ್ಯಮಂತ್ರಿಗಳ ಮನೆಗೆ ತೆರಳಿ ಹುಟ್ಟುಹಬ್ಬದ ಶುಭಾಶಯ ಸಲ್ಲಿಸಿದರು. ಚಿತ್ರಗಳಲ್ಲಿ ನೋಡಿ ಸಿದ್ದರಾಮಯ್ಯ ಹುಟ್ಟುಹಬ್ಬದ ಸಂಭ್ರಮ

ಶುಭಾಶಯ ಹೇಳಿದ ಪರಮೇಶ್ವರ್
ಕೆಪಿಸಿಸಿ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಡಾ.ಜಿ.ಪರಮೇಶ್ವರ್ ಸಿಎಂ ಸಿದ್ದರಾಮಯ್ಯ ಅವರಿಗೆ 67ನೇ ಹುಟ್ಟುಹಬ್ಬದ ಶುಭಾಶಯ ಕೋರಿದರು.

ಶುಭಾಶಯ ಕೋರಿದ ಪೊಲೀಸ್ ಆಯುಕ್ತರು
ಬೆಂಗಳೂರು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹುಟ್ಟುಹಬ್ಬದ ಶುಭಾಶಯ ಸಲ್ಲಿಸಿದರು.

ವಸತಿ ಸಚಿವರಿಂದ ಶುಭಾಶಯ
ವಸತಿ ಸಚಿವ ಅಂಬರೀಶ್ ಮಂಗಳವಾರ ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹುಟ್ಟುಹಬ್ಬದ ಶುಭಾಶಯ ಕೋರಿದರು.

ಅಭಿಮಾನಿಗಳಿಂದ ಉಡುಗೊರೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 67ನೇ ಹುಟ್ಟುಹಬ್ಬದ ಪ್ರಯುಕ್ತ ಅವರ ಅಭಿಮಾನಿಗಳು ಕಂಬಳಿಯನ್ನು ಉಡುಗೊರೆಯಾಗಿ ನೀಡಿದರು.

ಅಭಿನಂದನೆಗಳ ಮಹಾಪೂರ
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ಮುಂದೆ ಸಿದ್ದರಾಮಯ್ಯನವರ ನೂರಾರು ಅಭಿಮಾನಿಗಳು ಅವರಿಗೆ ಹುಟ್ಟುಹಬ್ಬದ ಶುಭಾಶಯ ಸಲ್ಲಿಸಿದರು.

ಕಾರ್ಯಕರ್ತರಿಂದ ಶುಭ ಹಾರೈಕೆ
ಸಿಎಂ ಸಿದ್ದರಾಮಯ್ಯ ಅವರ 67ನೇ ಜನ್ಮದಿನದ ಪ್ರಯುಕ್ತ ನೂರಾರು ಕಾರ್ಯಕರ್ತರು ಅವರಿಗೆ ಶುಭ ಹಾರೈಸಿದರು.












Click it and Unblock the Notifications