ದೇಶದ ಅತಿ ಕಿರಿಯ ಸಂಸದ ಸಾಗರ್ ಖಂಡ್ರೆ ಬೆನ್ನು ತಟ್ಟಿದ ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು, ಜೂನ್ 07: ಕರ್ನಾಟಕದಲ್ಲಿ ಬೀದರ್ ಕ್ಷೇತ್ರದ ಜನರು ಅಚ್ಚರಿಯ ಫಲಿತಾಂಶವನ್ನು ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಕಿರಿಯ ಅಭ್ಯರ್ಥಿ ಎಂದೇ ಖ್ಯಾತಿ ಪಡೆದಿದ್ದ ಸಾಗರ್ ಈಶ್ವರ್ ಖಂಡ್ರೆ ಬಹುಮತ ಪಡೆದು ಗೆಲುವು ಸಾಧಿಸಿದ್ದಾರೆ.
ಕಾವೇರಿ ಅಧಿಕೃತ ನಿವಾಸದಲ್ಲಿ ತಮ್ಮನ್ನು ಭೇಟಿಯಾಗಿದ್ದ ಸಾಗರ್ ಖಂಡ್ರೆ ಅವರಿಗೆ ಆಶೀರ್ವಾದ ಮಾಡಿದ ಮುಖ್ಯಮಂತ್ರಿಗಳು, ದೇಶದ ಅತಿ ಕಿರಿಯ ಸಂಸದರರು ಹಾಗೂ ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಕಂಡ ಸಾಗರ್ ಖಂಡ್ರೆ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಸಾಗರ್ ಖಂಡ್ರೆ ಅವರಿಗೆ ರಾಜಕೀಯದ ಕುರಿತು ಸಿದ್ದರಾಮಯ್ಯ ಪಾಠ ಮಾಡಿದ್ದಾರೆ.

ಸದನದಲ್ಲಿ ಸದಾ ಹಾಜರಿದ್ದು, ಎಲ್ಲ ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಶ್ರದ್ಧಯಿಂದ ಆಲಿಸಿ, ಸೂಕ್ತವಾಗಿ ಸ್ಪಂದಿಸುವವರು ಮಾತ್ರ ಉತ್ತಮ ಸಂಸದೀಯ ಪಟುವಾಗಿ ಬೆಳೆಯಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬೀದರ್ ನಿಂದ ಸಂಸದರಾಗಿ ನೂತನವಾಗಿ ಆಯ್ಕೆಯಾಗಿರುವ ಸಾಗರ್ ಈಶ್ವರ ಖಂಡ್ರೆಗೆ ಮು ಕಿವಿಮಾತು ಹೇಳಿದ್ದಾರೆ. ಕೇಂದ್ರ ಸಚಿವ ಖೂಬಾ ವಿರುದ್ಧ ಪ್ರಚಂಡ ಬಹುಮತದಿಂದ ಜಯ ಸಾಧಿಸಿರುವುದಕ್ಕಾಗಿ ಅಭಿನಂದನೆ ಸಲ್ಲಿಸಿದರು.
ಸದನದಲ್ಲಿ ಸಂಸದರಾಗಿ ಹೇಗೆ ರಾಜ್ಯದ ಹಿತ ಕಾಯಬೇಕು ಎಂಬ ಬಗ್ಗೆ ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗ್ರಂಥಾಲಯದ ಪ್ರಯೋಜನ ಪಡೆದು ಸದನದಲ್ಲಿ ಮುತ್ಸದ್ದಿ ರಾಜಕಾರಣಿಗಳು ಮಾಡಿರುವ ಭಾಷಣಗಳನ್ನು ಓದುವಂತೆಯೂ ಸಲಹೆ ಮಾಡಿದರು.
ಈ ಸಂದರ್ಭದಲ್ಲಿ ಸಾಗರ್ ಖಂಡ್ರೆ ಅವರ ತಂದೆ ಹಾಗೂ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಸಚಿವ ರಹೀಂಖಾನ್, ಮಾಜಿ ಸಚಿವ ರಾಜಶೇಖರ ಪಾಟೀಲ್, ಕೆ.ಎಂ.ಎಫ್. ಅಧ್ಯಕ್ಷ ಭೀಮಾ ನಾಯ್ಕ್, ಮಾಜಿ ಶಾಸಕ ಅಶೋಕ್ ಖೇಣಿ, ಚಿಂಚೋಳಿಯ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಸುಭಾಷ್ ವಿ ರಾಠೋಡ್, ಕಲ್ಬುರ್ಗಿ ಮಾಜಿ ಮೇಯರ್ ಶರಣು ಮೋದಿ ಮತ್ತಿತರರು ಉಪಸ್ಥಿತರಿದ್ದರು. ಕಲ್ಯಾಣ ಕರ್ನಾಟಕದಲ್ಲಿ ಐದಕ್ಕೆ ಐದೂ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜಯ ತಂದುಕೊಟ್ಟಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಲ್ಯಾಣ ಕರ್ನಾಟಕ ಭಾಗದ ಎಲ್ಲ ನಾಯಕರಿಗೆ ಅಭಿನಂದನೆ ಸಲ್ಲಿಸಿದರು.
ಭಾಲ್ಕಿ ರಾಜಕೀಯ ಪವರ್ ಸೆಂಟರ್
ಶತಾಯುಷಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ, ಮಾಜಿ ಶಾಸಕ ದಿವಂಗತ ವಿಜಯ ಕುಮಾರ್ ಖಂಡ್ರೆ, ಹಾಲಿ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಬೀದರ್ ಡಿಸಿಸಿ ಬ್ಯಾಂಕ್ ಮತ್ತು ಮಹಾತ್ಮಾಗಾಂಧಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಅಮರ ಖಂಡ್ರೆ ಹಾಗೂ ನೂತನ ಸಂಸದ ಸಾಗರ್ ಖಂಡ್ರೆ ಭಾಲ್ಕಿ ನೆಲದವರಾಗಿದ್ದಾರೆ. ಹೀಗಾಗಿ ಖಂಡ್ರೆ ಕುಟುಂಬ ಈಗ ಮತ್ತೆ ರಾಜಕೀಯವಾಗಿ ಪಾರಮ್ಯ ಮೆರೆದಿದ್ದು ಭಾಲ್ಕಿ ರಾಜಕೀಯ ಪವರ್ ಸೆಂಟರ್ ಆಗಿ ಬದಲಾಗಿದೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications