ಸಂಪುಟ ಪುನಾರಚನೆಗೆ ಕಾದಿದ್ದ ಆಕಾಂಕ್ಷಿಗಳಿಗೆ ನಿರಾಸೆ

Posted By:
Subscribe to Oneindia Kannada

ಬೆಂಗಳೂರು, ಏಪ್ರಿಲ್ 14 : ರಾಜ್ಯದಲ್ಲಿನ ಬರ ಪರಿಸ್ಥಿತಿ ಮತ್ತು ಐದು ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಸಚಿವ ಸಂಪುಟ ಪುನಾರಚನೆ ಮುಂದಕ್ಕೆ ಹೋಗಿದೆ. ವಿಧಾನಸಭೆ ಚುನಾವಣೆ ಪ್ರಕ್ರಿಯೆಗಳು ಮುಕ್ತಾಯಗೊಂಡ ಬಳಿಕ ಈ ಬಗ್ಗೆ ಚರ್ಚಿಸೋಣ, ಈಗ ಬರಪರಿಹಾರದ ಕುರಿತು ಗಮನ ಹರಿಸಿ ಎಂದು ಕಾಂಗ್ರೆಸ್ ಹೈಕಮಾಂಡ್ ನಾಯಕರು ಸೂಚನೆ ನೀಡಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು ಬುಧವಾರ ಬೆಂಗಳೂರಿಗೆ ಬಂದಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರೊಂದಿಗೆ ಮಾತುಕತೆ ನಡೆಸಿರುವ ಸಿಂಗ್ ಚುನಾವಣಾ ಪ್ರಕ್ರಿಯೆಗಳು ಮುಗಿದ ಬಳಿಕ ಈ ಬಗ್ಗೆ ಚರ್ಚೆ ನಡೆಸೋಣ ಎಂದು ಹೇಳಿದ್ದಾರೆ. [ಬರಪೀಡಿತ ಜಿಲ್ಲೆಗಳ ಪ್ರವಾಸಕ್ಕೆ ಹೊರಟ ಸಿದ್ದರಾಮಯ್ಯ]

ಹೈಕಮಾಂಡ್ ನಾಯಕರು ಮೇ 19ರ ತನಕ ಚುನಾವಣಾ ಪ್ರಕ್ರಿಯೆಗಳಲ್ಲಿ ತೊಡಗಿಕೊಂಡಿರುತ್ತಾರೆ. ರಾಜ್ಯದಲ್ಲಿಯೂ ಭೀಕರ ಬರಗಾಲವಿದೆ. ಆ ಕಡೆ ಗಮನ ಕೊಡಿ, ಮೇ ತಿಂಗಳಿನಲ್ಲಿ ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಂಪುಟ ಪುನಾರಚನೆ ಬಗ್ಗೆ ಚರ್ಚಿಸೋಣ ಎಂದು ಸಿಂಗ್ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. [ಕೃಷ್ಣ ಮನೆಯಂಗಣದಲ್ಲಿ ಹಿರಿಯ ಕಾಂಗ್ರೆಸ್ಸಿಗರ ಅಪಸ್ವರ]

ವಿಧಾನಪರಿಷತ್ ಸದಸ್ಯರು, ಸಮಾನ ಮನಸ್ಕ ಶಾಸಕರ ಗುಂಪು ಕುಮಾರಕೃಪಾ ಅತಿಥಿಗೃಹದಲ್ಲಿ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿ ಮಾಡಿ, ಸಂಪುಟ ಪುನಾರಚನೆ ವೇಳೆ ಆದ್ಯತೆ ನೀಡಬೇಕು ಎಂದು ಮನವಿ ಸಲ್ಲಿಸಿದ್ದರು. ಈ ಬಗ್ಗೆಯೂ ಸಿಂಗ್ ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಸಿದ್ದಾರೆ...ವಿವರಗಳು ಚಿತ್ರಗಳಲ್ಲಿ ನೋಡಿ..['ಯುಗಾದಿ ಬಳಿಕ ಹೊಸ ಖುರ್ಚಿ, ಹೊಸ ಮಂತ್ರಿ ನೋಡೋಣ']

'ಬರ ಪರಿಹಾರಕ್ಕೆ ಆದ್ಯತೆ ನೀಡಿ'

'ಬರ ಪರಿಹಾರಕ್ಕೆ ಆದ್ಯತೆ ನೀಡಿ'

ಬೆಂಗಳೂರಿಗೆ ಬಂದಿದ್ದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಹಲವು ಶಾಸಕರು ಭೇಟಿ ಮಾಡಿ, ಸಂಪುಟ ಪುನಾರಚನೆ ಬಗ್ಗೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ. ಅದರ ಕಡೆ ಗಮನ ಕೊಡಿ, ಮೇ ತಿಂಗಳಿನಲ್ಲಿ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ನಡೆಸೋಣ ಎಂದು ಅವರು ಶಾಸಕರಿಗೆ ಸೂಚನೆ ಕೊಟ್ಟಿದ್ದಾರೆ.

ಸಮಾನ ಮನಸ್ಕ ಶಾಸಕರ ಭೇಟಿ

ಸಮಾನ ಮನಸ್ಕ ಶಾಸಕರ ಭೇಟಿ

ಯಶವಂತಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಟಿ.ಸೋಮಶೇಖರ್ ಅವರ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಸಮಾನ ಮನಸ್ಕ ಶಾಸಕರು ದಿಗ್ವಿಜಯ್ ಸಿಂಗ್ ಅವರನ್ನು ಭೇಟಿ ಮಾಡಿ ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆಸಿದ್ದಾರೆ. ಕ್ಷೇತ್ರದ ಸಮಸ್ಯೆ ಬಗ್ಗೆ ಗಮನ ಹರಿಸಿ, ವರಿಷ್ಠರು ಕರೆ ಕಳುಹಿಸಿದಾಗ ದೆಹಲಿಗೆ ಬನ್ನಿ ಎಂದು ಸಿಂಗ್ ಶಾಸಕರಿಗೆ ನಿರ್ದೇಶನ ನೀಡಿದ್ದಾರೆ.

ವಿಧಾನಪರಿಷತ್ ಸದಸ್ಯರಿಗೆ ಆದ್ಯತೆ ನೀಡಿ

ವಿಧಾನಪರಿಷತ್ ಸದಸ್ಯರಿಗೆ ಆದ್ಯತೆ ನೀಡಿ

ಸಂಪುಟ ಪುನಾರಚನೆ ವೇಳೆ ವಿಧಾನಪರಿಷತ್ ಸದಸ್ಯರಿಗೂ ಆದ್ಯತೆ ನೀಡಿ ಎಂದು ನಿಯೋಗವೊಂದು ದಿಗ್ವಿಜಯ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದೆ. ಪರಿಷತ್ ಸದಸ್ಯರಾದ ವಿ.ಎಸ್.ಉಗ್ರಪ್ಪ, ಆರ್.ವಿ.ವೆಂಕಟೇಶ್, ಮೋಟಮ್ಮ, ವೀರಣ್ಣ ಮತ್ತೀಕಟ್ಟಿ ಮುಂತಾದ ನಾಯಕರ ನಿಯೋಗ ಪರಿಷತ್ತಿನ ಇಬ್ಬರು ಸದಸ್ಯರು ಮಾತ್ರ ಸಚಿವರಾಗಿದ್ದಾರೆ. ಇನ್ನೂ ಕನಿಷ್ಠ 4 ಜನರಿಗೆ ಸಂಪುಟ ಸೇರಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಎಐಸಿಸಿ ನಿರ್ಧಾರ ತೆಗೆದುಕೊಳ್ಳಲಿದೆ

ಎಐಸಿಸಿ ನಿರ್ಧಾರ ತೆಗೆದುಕೊಳ್ಳಲಿದೆ

'ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಯನ್ನು ಬದಲಾವಣೆ ಮಾಡಬೇಕು' ಎಂದು ಹಿರಿಯ ಕಾಂಗ್ರೆಸ್ ನಾಯಕ ಎಚ್.ವಿಶ್ವನಾಥ್ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿರುವ ದಿಗ್ವಿಜಯ್ ಸಿಂಗ್ ಅವರು, 'ಈ ಬಗ್ಗೆ ಎಐಸಿಸಿ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಿದೆ' ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಹೇಳುವುದೇನು?

ಸಿದ್ದರಾಮಯ್ಯ ಹೇಳುವುದೇನು?

ದಿಗ್ವಿಜಯ್ ಸಿಂಗ್ ಭೇಟಿ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಬರ ಅಧ್ಯಯನಕ್ಕೆ ಏ.15ರಿಂದ ರಾಜ್ಯ ಪ್ರವಾಸ ಮಾಡುತ್ತೇನೆ. ನಂತರ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿ ಮಾಡುತ್ತೇನೆ' ಎಂದು ಹೇಳಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The much awaited cabinet reshuffle may delayed. Karnataka Congress in-charge Digvijaya Singh has directed Chief Minister Siddaramaiah to take up the issue only after 5 state assembly election.
Please Wait while comments are loading...