ವಿಧಾನಸಭಾ ಚುನಾವಣೆ: ಸಿದ್ದರಾಮಯ್ಯ 10 ದಿನಗಳ ಅಂತಿಮ ಪ್ರಚಾರ
ಬೆಂಗಳೂರು, ಏಪ್ರಿಲ್ 27: ಕರ್ನಾಟಕ ವಿಧಾನಸಭಾ ಚುನಾವಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಪ್ರಿಲ್ 28ರಿಂದ ಹತ್ತು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.
ಮೇ.12 ರಂದು ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮ ಪ್ರಚಾರವನ್ನು ಕೈಗೊಳ್ಳಲಿದ್ದಾರೆ. ನಿತ್ಯ ಆರು ಕ್ಷೇತ್ರಗಳಂತೆ ಹತ್ತು ದಿನಗಳಲ್ಲಿ ಅರವತ್ತಕ್ಕೂ ಹೆಚ್ಚು ವಿಧಾನಸಭೆ ಕ್ಷೇತ್ರಗಳಿಗೆ ಮುಖ್ಯಮಂತ್ರಿಯವರು ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಮುಖ್ಯಮಂತ್ರಿಯವರ ಪ್ರವಾಸ ಏ.28ರಂದು ಶನಿವಾರ ಬೆಳಗ್ಗೆ 11.30ಕ್ಕೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ವಿಧಾನಸಭಾ ಕ್ಷೇತ್ರದಿಂದ ಆರಂಭವಾಗಲಿದೆ. ಏಪ್ರಿಲ್ 28 ರಂದು ಬೆಳಗಾವಿ, 29- ಬಾಗಲಕೋಟ, ವಿಜಯಪುರ, 30- ಕಲಬುರಗಿ, ಬೀದರ್, ರಾಯಚೂರು, ಮೇ 1-ಗದಗ, ಧಾರವಾಡ, 2- ಹಾವೇರಿ, ಬಳ್ಳಾರಿ, 3- ಚಿತ್ರದುರ್ಗ, ದಾವಣಗೆರೆ, 4- ಶಿವಮೊಗ್ಗ, 5-ತುಮಕೂರು ಹಾಗೂ 6ರಂದು ಚಾಮರಾಜನಗರ ಜಿಲ್ಲೆಯಲ್ಲಿ ಮುಖ್ಯಮಂತ್ರಿಯವರು ಪ್ರವಾಸ ಕೈಗೊಳ್ಳಲಿದ್ದಾರೆ.












Click it and Unblock the Notifications