ಪಾಕ್‌ ಮೇಲೆ ಯುದ್ಧ ಬೇಡ ಹೇಳಿಕೆ: ವಿವಾದದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಪಾಕಿಸ್ತಾನದ ಜೊತೆ ಯುದ್ಧ ಮಾಡುವ ಅಗತ್ಯವಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಪಾಕ್‌ ಮೇಲೆ ಯುದ್ಧದ ಕುರಿತು ನಾನು ನೀಡಿದ ಹೇಳಿಕೆಯ ಬಗ್ಗೆ ಪರ-ವಿರೋಧದ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇನೆ. ಯುದ್ಧ ಎನ್ನುವುದು ಯಾವುದೇ ದೇಶದ ಅಂತಿಮ‌ ಆಯ್ಕೆಯೇ ಹೊರತು, ಯುದ್ಧವೇ ಮೊದಲ ಇಲ್ಲವೇ ಏಕೈಕ ಆಯ್ಕೆಯಲ್ಲ. ಶತ್ರುವನ್ನು ಮಣಿಸುವ ಉಳಿದೆಲ್ಲ ಆಯ್ಕೆಗಳು ವಿಫಲವಾದಾಗ ಮಾತ್ರ ಯುದ್ಧಕ್ಕೆ ಹೊರಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪಾಕಿಸ್ತಾನ ಮುಂದೆಂದೂ ಇಂತಹ ದುಸ್ಸಾಹಸಕ್ಕೆ ಕೈಹಾಕದಂತೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಸಿದ್ದರಾಮಯ್ಯ ಯೂಟರ್ನ್‌ ಹೊಡೆದಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಪಾಕ್‍ ಪ್ರೇರಿತ ಉಗ್ರರ ದಾಳಿಗೆ ನಮ್ಮ ಗೂಢಚರ್ಯೆ ಮತ್ತು ಭದ್ರತಾ ವ್ಯವಸ್ಥೆಯ ವೈಫಲ್ಯ ಕಾರಣ ಎನ್ನುವುದು ದೇಶದ ಜನತೆಗೆ ಮತ್ತು ಕೇಂದ್ರ ಸರ್ಕಾರಕ್ಕೂ ಈಗ ಮನವರಿಕೆಯಾಗಿದೆ. ಮೊದಲು ಈ ಲೋಪವನ್ನು ಸರಿಪಡಿಸಿಕೊಂಡು ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಎಚ್ಚರಿಕೆ ವಹಿಸುವ ಹೊಣೆಗಾರಿಕೆ ಕೇಂದ್ರ ಸರ್ಕಾರದ ಮೇಲಿದೆ ಎಂದಿದ್ದಾರೆ.

CM Siddaramaiah Clarifies On No Need For War With Pakistan Remark

ಸಿಂಧೂ ನದಿ ಒಪ್ಪಂದದ ರದ್ದತಿಯೂ ಸೇರಿದಂತೆ ಕೇಂದ್ರ ಸರ್ಕಾರ ಕೆಲವು ರಾಜತಾಂತ್ರಿಕ ಕ್ರಮಗಳನ್ನು ಕೈಗೊಂಡಿದೆ. ಇದನ್ನು ನಾವು ಸ್ವಾಗತಿಸುತ್ತೇವೆ. ಕೇಂದ್ರ ಸರ್ಕಾರ ಮುಂದೆ ಇದಕ್ಕಿಂತಲೂ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎನ್ನುವ ಭರವಸೆ ನಮಗಿದೆ. ಅವುಗಳನ್ನೆಲ್ಲ ಬಹಿರಂಗ ಪಡಿಸುವ ಅಗತ್ಯವಿಲ್ಲ. ಅಂತಹ ಕ್ರಮಗಳಿಗೆ ನಮ್ಮ ಸಂಪೂರ್ಣ ಸಹಕಾರ ಇದೆ ಎಂದು ಬೆಂಬಲ ವ್ಯಕ್ತಪಡಿಸಿದ್ದಾರೆ.

Take a Poll

ಇದೇ ವೇಳೆ ಕೆಲವು ಕಿಡಿಗೇಡಿಗಳು ಯುದ್ಧೋನ್ಮಾದವನ್ನು ಸೃಷ್ಟಿಸಿ, ದೇಶದೊಳಗಿನ ಸೌಹಾರ್ದತೆಯನ್ನು ಕಲಕುವ ಪ್ರಯತ್ನ ಮಾಡುತ್ತಿದ್ದು ಇಂತಹವರ ವಿರುದ್ಧವೂ ಕೇಂದ್ರ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು. ಇಂದು ದೇಶ ಅತ್ಯಂತ ಸೂಕ್ಷ್ಮ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಬಾಹ್ಯ ಶತ್ರುವನ್ನು ಎದುರಿಸಬೇಕಾದರೆ ಆಂತರಿಕವಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಇರಬೇಕಾಗುತ್ತದೆ ಎಂದು ಸಂದೇಶ ಸಾರಿದ್ದಾರೆ.

ಪಾಕಿಸ್ತಾನ ಇಂದು ಆರ್ಥಿಕವಾಗಿ ದಿವಾಳಿಯಾಗಿರುವ ರೋಗಗ್ರಸ್ತ ದೇಶವಾಗಿದೆ. ಅವರು ಕಳೆದುಕೊಳ್ಳುವುದೇನೂ ಇಲ್ಲ, ಈ ಕಾರಣದಿಂದಾಗಿಯೇ ಜಗತ್ತಿನ ಬಲಾಢ್ಯ ರಾಷ್ಟ್ರವಾಗಿ ಬೆಳೆಯುತ್ತಿರುವ ಭಾರತ ಎಚ್ಚರಿಕೆಯ ಹೆಜ್ಜೆಗಳನ್ನು ಇಡಬೇಕಾಗಿದೆ. ಈ ಸಂದರ್ಭದಲ್ಲಿ ವಿಶ್ವದ ಎಲ್ಲ ರಾಷ್ಟ್ರಗಳು ಪಾಕ್ ಪ್ರೇರಿತ ಭಯೋತ್ಪಾದನೆಯನ್ನು ಖಂಡಿಸಿ ಭಾರತದ ಪರವಾಗಿ ನಿಂತಿವೆ. ಈ ಬೆಳವಣಿಗೆಯನ್ನು ಭಾರತ ಸದುಪಯೋಗಪಡಿಸಿಕೊಂಡು ಪಾಕಿಸ್ತಾನ ಮುಂದೆಂದೂ ಇಂತಹ ದುಸ್ಸಾಹಸಕ್ಕೆ ಕೈಹಾಕದಂತೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

CM Siddaramaiah Clarifies On No Need For War With Pakistan Remark

ಪಾಕಿಸ್ತಾನದ ವಿರುದ್ಧ ಯುದ್ಧ ಮಾಡುವುದೇ ಬೇಡ ಎಂದು ನಾನು ಹೇಳಿಲ್ಲ. ಯುದ್ಧ ಅನಿವಾರ್ಯವಾದಾಗ ಮಾತ್ರವೇ ಮಾಡಬೇಕು. ಯುದ್ಧವೇ ಪರಿಹಾರ ಅಲ್ಲ, ಯುದ್ಧ ಬೇಡವೇ ಬೇಡ ಎಂದು ನಾನು ಹೇಳಿಲ್ಲ. ಅನಿವಾರ್ಯವಾದರೆ ಯುದ್ಧ ಮಾಡಬೇಕಾಗುತ್ತದೆ, ಆದರೆ ಈಗ ತಕ್ಷಣಕ್ಕೆ ಯುದ್ಧ ಬೇಡ ಎನ್ನುವುದು ನನ್ನ ಮಾತಿನ ಅರ್ಥ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಸಿದ್ದರಾಮಯ್ಯ ಅವರ ಹೇಳಿಕೆ ಪಾಕಿಸ್ತಾನ ಮಾಧ್ಯಮಗಳಲ್ಲೂ ಪ್ರಸಾರವಾಗಿರುವ ಬಗ್ಗೆ ಮಾತನಾಡಿ, ಪಾಕಿಸ್ತಾನದ ಜೊತೆ ಯುದ್ಧವೇ ಬೇಡ ಎಂದು ನಾನು ಹೇಳಿಲ್ಲ. ಯುದ್ಧ ಪರಿಹಾರ ಅಲ್ಲ. ಕಾಶ್ಮೀರಕ್ಕೆ ಸಾಕಷ್ಟು ಪ್ರವಾಸಿಗರು ಹೋಗುತ್ತಾರೆ. ಅವರಿಗೆ ಭದ್ರತೆ ನೀಡಬೇಕಿತ್ತು ಅಲ್ಲವೇ? ಭದ್ರತೆ ವಿಚಾರದಲ್ಲಿ ಕೇಂದ್ರ ಗೃಹ ಇಲಾಖೆಯ ವೈಫಲ್ಯ ಎಂದಿದ್ದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+