ಡಿಕೆಶಿ ಮೇಲಿನ ಮುನಿಸು; ಕಾಂಗ್ರೆಸ್ ಸರ್ಕಾರ ಪತನದ ಕುರಿತು ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
ಮೈಸೂರು, ಜೂನ್ 30: ರಾಜ್ಯ ಕಾಂಗ್ರೆಸ್‌ನಲ್ಲಿ ಬದಲಾವಣೆಯ ಗಾಳಿ ಬೀಸಲಿದೆ ಎಂದು ಕಾಂಗ್ರೆಸ್ ಪಕ್ಷದ ಹಲವು ನಾಯಕರೇ ಹೇಳಿಕೆ ನೀಡಿದ್ದರು. ಇತ್ತ ಬಿಜೆಪಿ ನಾಯಕರು ಸಹ ಸರ್ಕಾರ ಪತನದ ಕುರಿತು ಸಾಲು ಸಾಲು ಭವಿಷ್ಯವನ್ನ ನುಡಿಯುತ್ತಿದ್ದಾರೆ. ಅಲ್ಲದೆ ಬರುವ ಡಿಸೆಂಬರ್ ನಲ್ಲಿ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಆಗಲಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ.ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಒಗ್ಗಟ್ಟು ಪ್ರದರ್ಶನ ಮಾಡಿದ್ದು, ನಮ್ಮ ಸರ್ಕಾರ ಬಂಡೆ ರೀತಿಯಲ್ಲಿ ಭದ್ರವಾಗಿರುತ್ತದೆ ಎಂದು ಹೇಳಿಕೆ ನೀಡಿದ್ದಾರೆ.
ಇಂದು (ಸೋಮವಾರ) ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ಕೇಳುವುದಿಲ್ಲ. ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿ ಸುರ್ಜೆವಾಲಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಅಭಿಪ್ರಾಯ ಕೇಳಿ, ಅವರ ಕೆಲಸವನ್ನು ಮಾಡುತ್ತಾರೆ ಎಂದರು. ಸಿದ್ದರಾಮಯ್ಯ ಅವರು ಈ ಬಾರಿಯ ದಸರಾ ಉದ್ಘಾಟಿಸುವುದಿಲ್ಲ ಎಂದು ಬಿಜೆಪಿಯವರು ಹೇಳಿಕೆಯನ್ನ ಗಮನಿಸಿದ್ದೇನೆ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಶ್ರೀರಾಮುಲು ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಹೇಗೆ ಭವಿಷ್ಯ ನುಡಿಯುತ್ತಾರೆ ಎಂದು ಪ್ರಶ್ನಿಸಿದರು.












Click it and Unblock the Notifications