Siddaramaiah Vs HDK : ಕಾಮಾಲೆ ಕಣ್ಣಿಗೆ ಕಾಣುವುದೆಲ್ಲಾ..! ಯತೀಂದ್ರ ವಿಡಿಯೋ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ

ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ವಿಡಿಯೋ ಈಗ ರಾಜಕೀಯ ಮೇಲಾಟಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ ಯತೀಂದ್ರ ಮಾತನಾಡಿದ್ದನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ಕಮಿಷನ್, ಲಂಚದ ಆರೋಪ ಮಾಡಿವೆ.

ಅಲ್ಲದೆ ಯತೀಂದ್ರ ಅವರನ್ನು ಶಾಡೋ ಸಿಎಂ ಎಂದು ಕರೆದು ವಾಗ್ದಾಳಿ ನಡೆಸಿವೆ. ವಿಪಕ್ಷಗಳ ಆರೋಪಕ್ಕೆ ಉತ್ತರ ನೀಡಿರುವ ಸಿಎಂ ಸಿದ್ದರಾಮಯ್ಯ ಇದೆಲ್ಲಾ ಕಟ್ಟು ಕತೆ, ಯಾವ ಲಂಚ, ಅವ್ಯಹಾರ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

CM Siddaramaiah Clarifies on Yathindras Video, Counters Kumaraswamys Allegations

ಅಲ್ಲದೆ ಯತೀಂದ್ರ ವಿರುದ್ಧ ಆರೋಪ ಮಾಡಿದ್ದ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ವಿರುದ್ಧ ಕಿಡಿ ಕಾರಿರುವ ಸಿದ್ದರಾಮಯ್ಯ, ಅಧಿಕಾರ ಇದ್ದಾಗ ಅವ್ಯವಹಾರ ಲಂಚ, ಅವ್ಯವಹಾರದಲ್ಲೇ ಮುಳುಗಿದ್ದ ಹೆಚ್‌ಡಿಕೆ ಕಾಮಾಲೆ ಕಣ್ಣಿಗೆ ಎಲ್ಲವೂ ಅದೇ ರೀತಿ ಕಾಣುತ್ತದೆ ಎಂದಿದ್ದಾರೆ.

ಸಿದ್ದರಾಮಯ್ಯ ಸರಣಿ ಟ್ವೀಟ್

ಅಧಿಕಾರ ಇದ್ದಾಗ ಲಂಚ-ಕಮಿಷನ್ ವ್ಯವಹಾರದಲ್ಲಿ ಮೂರುಹೊತ್ತು ಮುಳುಗೇಳುತ್ತಿದ್ದ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ, ಅವರ ಕಾಮಾಲೆ ಕಣ್ಣಿಗೆ ನೋಡಿದ್ದು, ಕೇಳಿದ್ದೆಲ್ಲದರಲ್ಲಿಯೂ ಲಂಚದ ವ್ಯವಹಾರಗಳೇ ಕಾಣಿಸುತ್ತಿದೆ.

ವರುಣ ಕ್ಷೇತ್ರದ ಶಾಲೆಗಳ ಅಭಿವೃದ್ದಿಗೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ನಡೆದಿರುವ ನನ್ನ ಮತ್ತು ನನ್ನಮಗನ ನಡುವಿನ ಪೋನ್ ಸಂಭಾಷಣೆಗೆ ವರ್ಗವಾವಣೆಯಲ್ಲಿ ವಸೂಲಿಯ ಕತೆ ಕಟ್ಟಿ ಕುಮಾರಸ್ವಾಮಿ ಕುಣಿದಾಡುತ್ತಿದ್ದಾರೆ. ಕುಮಾರಸ್ವಾಮಿಯವರ ಈ ಕ್ಷುಲಕ ನಡವಳಿಕೆ ಬಗ್ಗೆ ನಾನು ಕನಿಕರವನ್ನಷ್ಟೇ ವ್ಯಕ್ತಪಡಿಸಬಲ್ಲೆ, ಇದು ಕುತಂತ್ರ ರಾಜಕೀಯ ಎಂದು ಹೇಳಿದ್ದಾರೆ.

ವಿಡಿಯೋ ಸಂಭಾಷಣೆ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ

ಇನ್ನು ವೈರಲ್ ಆಗಿರುವ ವಿಡಿಯೋದಲ್ಲಿ ಯತೀಂದ್ರ ಸಂಭಾಷಣೆ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ ಅದು ಶಾಲೆಗಳ ಸುಧಾರಣೆ ಬಗ್ಗೆ ಮಾತನಾಡಿದ್ದು ಎಂದು ಹೇಳಿದ್ದಾರೆ.

ವರುಣ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರು ಮತ್ತು ಕೆಡಿಪಿ ಸದಸ್ಯರಾಗಿರುವ ಮಾಜಿ ಶಾಸಕ ಡಾ.ಯತೀಂದ್ರ ಅವರು ಆ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ. ಸಿಎಸ್ಆರ್ ಹಣವನ್ನು ಬಳಸಿಕೊಂಡು ಕ್ಷೇತ್ರದಲ್ಲಿರುವ ಸರ್ಕಾರಿ ಶಾಲೆಗಳ ಸುಧಾರಣೆಗೆ ತೊಡಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅವರು ಫಲಾನುಭವಿ ಶಾಲೆಗಳ ಪಟ್ಟಿ ಬಗ್ಗೆ ನನ್ನ ಜೊತೆ ಮಾತನಾಡಿದ್ದರು. ಕ್ಷೇತ್ರದ ಜನರ ಎದುರಿನಲ್ಲಿಯೇ ನಡೆದಿರುವ ಈ ಸಂಭಾಷಣೆಯನ್ನು ವರ್ಗಾವಣೆಗಾಗಿ ವಸೂಲಿ ಎಂಬ ಅರ್ಥ ಬರುವ ಹಾಗೆ ತಿರುಚಿರುವ ಹೆಚ್‌ಡಿ ಕುಮಾರಸ್ವಾಮಿ ತಮ್ಮ ವಿಕೃತ ಮನಸ್ಥಿತಿಯನ್ನು ಪ್ರದರ್ಶಿಸಿದ್ದಾರೆ ಎಂದು ಟೀಕಿಸಿದರು.

ನೋವು ನೀಡಲು ಟಾರ್ಗೆಟ್

ನಿರಂತರವಾಗಿ ಕಪೋಲ ಕಲ್ಪಿತ ಆರೋಪಗಳ ಮೂಲಕ ನನ್ನ ವಿರುದ್ಧ ಸೇಡು ತೀರಿಸಿಕೊಳ್ಳುವಂತೆ ಬಾಯಿಗೆ ಬಂದಂತೆ ಮಾತನಾಡುತ್ತಾ ಬರುತ್ತಿದ್ದುದನ್ನು ರಾಜ್ಯದ ಜನ ಕಂಡಿದ್ದಾರೆ. ನನಗೆ ನೋವು ಕೊಡಬೇಕೆಂಬ ಏಕೈಕ ದುರುದ್ದೇಶದಿಂದ ಡಾ.ಯತೀಂದ್ರ ಅವರನ್ನು ಗುರಿಯಾಗಿಸಿಕೊಂಡು ಪ್ರತಿನಿತ್ಯ ಸುಳ್ಳು ಆರೋಪಗಳನ್ನು ಹರಿಬಿಡುತ್ತಿರುವುದು ಹೆಚ್‌ಡಿಕೆ ಅವರ ವಿಕೃತ ಮನಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ ಎಂದು ಹೇಳಿದ್ದಾರೆ.

ಶಾಸಕ ಸ್ಥಾನವನ್ನೇ ತ್ಯಾಗ ಮಾಡಿದರೂ ಜನಸೇವೆಯಿಂದ ಹಿಂದೆ ಸರಿಯದ ಡಾ.ಯತೀಂದ್ರ ಅವರು ವರುಣ ಕ್ಷೇತ್ರದ ಅಭಿವೃದ್ದಿಯಲ್ಲಿ ಪೂರ್ಣವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರನ್ನು ನೈತಿಕವಾಗಿ ಕುಗ್ಗಿಸುವ ದುರುದ್ದೇಶದಿಂದ ಪ್ರತಿನಿತ್ಯ ಅವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ.

ಕುಮಾರಸ್ವಾಮಿ ಅವರ ಪತ್ನಿ ಮತ್ತು ಮಗ ಕೂಡಾ ರಾಜಕೀಯ ಕ್ಷೇತ್ರದಲ್ಲಿದ್ದಾರೆ ಎನ್ನುವುದನ್ನು ಹೆಚ್.ಡಿ.ಕುಮಾರಸ್ವಾಮಿ ಮರೆತಂತಿದೆ. ನಾನು ಕುಮಾರಸ್ವಾಮಿಯವರ ಮಟ್ಟಕ್ಕೆ ಇಳಿದು ಅವರ ರೀತಿ ಅವರ ಪತ್ನಿ ಮತ್ತು ಮಗನ ಬಗ್ಗೆ ಮಾತನಾಡಲಾರೆ. ಕನಿಷ್ಠ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಾದರೂ ಮಗನಿಗೆ ಬುದ್ದಿ ಹೇಳಿ ರಾಜ್ಯದ ಜನರಿಂದ ಮಗ ಛೀಮಾರಿಗೆ ಈಡಾಗುತ್ತಿರುವುದನ್ನು ತಪ್ಪಿಸಬೇಕೆಂದು ಕೋರುತ್ತೇನೆ ಎಂದು ದೇವೇಗೌಡರಿಗೆ ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+