Uttarakhand Trekking Tragedy: ಉತ್ತರಾಖಂಡದಿಂದ ರಾಜ್ಯದ ಚಾರಣಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ: ಸಿದ್ದರಾಮಯ್ಯ
ಬೆಂಗಳೂರು ಜೂನ್ 5: ಉತ್ತರಾಖಂಡದ ಶಾಸ್ತ್ರತಾಳ್ ಗೆ ಚಾರಣಕ್ಕೆಂದು ತೆರಳಿ ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟಿರುವವರ ಮೃತದೇಹಗಳನ್ನು ಕುಟುಂಬದವರಿಗೆ ತಲುಪಿಸುವ ಮತ್ತು ರಕ್ಷಿಸಲ್ಪಟ್ಟಿರುವ ಉಳಿದ ಚಾರಣಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡೆಹ್ರಾಡೋನ್ ನಲ್ಲಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ ಮತ್ತು ರಕ್ಷಿಸಲ್ಪಟ್ಟ ಚಾರಣಿಗರ ಜೊತೆ ದೂರವಾಣಿ ಮೂಲಕ ಮಾತನಾಡಿದರು. ಮೃತರ ಸಂಖ್ಯೆ 9 ಕ್ಕೆ ಏರಿದ ಸಂಗತಿ ತಿಳಿದು ಬಹಳ ನೋವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ರಕ್ಷಿಸಲ್ಪಟ್ಟಿರುವ ಎಲ್ಲರನ್ನೂ ಯಾವುದೇ ಅಡಚಣೆ ಆಗದಂತೆ ಸುರಕ್ಷಿತವಾಗಿ ಮನೆಗಳಿಗೆ ಸೇರಿಸಬೇಕು. ಮೃತ ದೇಹಗಳನ್ನು ಕುಟುಂಬದವರಿಗೆ ತಲುಪಿಸುವ ನಿಟ್ಟಿನಲ್ಲೂ ಅಗತ್ಯವಾದ ಎಲ್ಲಾ ಪ್ರಕ್ರಿಯೆಗಳನ್ನು ತುರ್ತಾಗಿ ನಿರ್ವಹಿಸಬೇಕು ಎನ್ನುವ ಸೂಚನೆಗಳನ್ನು ಸಚಿವ ಕೃಷ್ಣಬೈರೇಗೌಡರಿಗೆ ನೀಡಿದ್ದಾರೆ.

ರಕ್ಷಿಸಲ್ಪಟ್ಟು ಸುರಕ್ಷಿತ ನೆಲೆಗೆ ಕರೆತರಲಾಗಿರುವ ಚಾರಣಿಗರ ಜೊತೆಗೂ ಮಾತನಾಡಿದ ಮುಖ್ಯಮಂತ್ರಿಗಳು, ಬಾಕಿ ಉಳಿದಿರುವ ಪ್ರತಿಯೊಬ್ಬರನ್ನೂ ಸುರಕ್ಷಿತವಾಗಿ ಕಾಪಾಡಿ ಕರೆತರುವ ಬಗ್ಗೆ ಸರ್ಕಾರಗಳ ಮಟ್ಟದಲ್ಲಿ ಸಕಲ ಪ್ರಯತ್ನಗಳೂ ನಡೆಯುತ್ತಿವೆ ಎಂದು ಭರವಸೆ ನೀಡಿದ್ದಾರೆ.
ಉತ್ತರಾಖಂಡದ ಶಾಸ್ತ್ರತಾಳ್ ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿದ್ದ ರಾಜ್ಯದ ಐವರು ಚಾರಣಿಗರು ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
— Siddaramaiah (@siddaramaiah) June 5, 2024
ಈಗಾಗಲೇ ರಕ್ಷಣಾ ಕಾರ್ಯಾಚರಣೆಯ ಮೂಲಕ 11 ಜನರನ್ನು ಸುರಕ್ಷಿತ ಪ್ರದೇಶಕ್ಕೆ ವಾಪಸು ಕರೆತರಲಾಗಿದ್ದು, ಇನ್ನೂ ಕೆಲವು ಚಾರಣಿಗರ… pic.twitter.com/IdfJpqKLpv
ಈಗಾಗಲೇ ರಕ್ಷಣಾ ಕಾರ್ಯಾಚರಣೆ ಮೂಲಕ ರಕ್ಷಿಸಲ್ಪಟ್ಟವರನ್ನು ಸುರಕ್ಷಿತ ಪ್ರದೇಶಕ್ಕೆ ವಾಪಸು ಕರೆತರಲಾಗಿದ್ದು, ಇನ್ನೂ ಕೆಲವು ಚಾರಣಿಗರ ರಕ್ಷಣೆ ಆಗಬೇಕಿದೆ. ಪ್ರತಿಕೂಲ ಹವಾಮಾನವು ರಕ್ಷಣಾ ಕಾರ್ಯಕ್ಕೆ ತೀವ್ರ ಅಡಚಣೆ ಉಂಟುಮಾಡುತ್ತಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲು ನಮ್ಮ ಸರ್ಕಾರವು ಶಕ್ತಿಮೀರಿ ಪ್ರಯತ್ನಿಸುತ್ತಿದೆ ಎಂದು ತಿಳಿಸಿದ್ದಾರೆ.
ಉತ್ತರಾಖಂಡದ ಶಾಸ್ತ್ರತಾಳ್ ಗೆ ಚಾರಣಕ್ಕೆಂದು ತೆರಳಿ ಹವಾಮಾನ ವೈಪರೀತ್ಯದಿಂದಾಗಿ ಸಾವಿಗೀಡಾದವರ ಮೃತದೇಹಗಳನ್ನು ಆದಷ್ಟು ಶೀಘ್ರ ಕುಟುಂಬದವರಿಗೆ ತಲುಪಿಸಲಾಗುವುದು ಮತ್ತು ರಕ್ಷಿಸಲ್ಪಟ್ಟಿರುವ ಚಾರಣಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲಾಗುವುದು. ಇದಕ್ಕಾಗಿ ನಮ್ಮ ಸರ್ಕಾರ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದೆ. ಮೃತರ ಸಂಖ್ಯೆ 9ಕ್ಕೆ ಏರಿದ ಸಂಗತಿ ತಿಳಿದು ಬಹಳ ನೋವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ನನ್ನ ಸಾಂತ್ವನಗಳು.
ಡೆಹ್ರಾಡೋನ್ ನಲ್ಲಿ ರಕ್ಷಣಾ ಕಾರ್ಯದ ಉಸ್ತುವಾರಿ ನಿರ್ವಹಿಸುತ್ತಿರುವ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಮತ್ತು ರಕ್ಷಿಸಲ್ಪಟ್ಟ ಚಾರಣಿಗರ ಜೊತೆ ದೂರವಾಣಿ ಮೂಲಕ ಮಾತನಾಡಿ, ಧೈರ್ಯ ತುಂಬಿದ್ದೇನೆ.
ರಕ್ಷಿಸಲ್ಪಟ್ಟಿರುವ ಎಲ್ಲರನ್ನೂ ಯಾವುದೇ ಅಡಚಣೆ ಆಗದಂತೆ ಸುರಕ್ಷಿತವಾಗಿ ಮನೆಗಳಿಗೆ ಸೇರಿಸಬೇಕು. ಮೃತ ದೇಹಗಳನ್ನು ಕುಟುಂಬದವರಿಗೆ ತಲುಪಿಸುವ ನಿಟ್ಟಿನಲ್ಲಿ ಎಲ್ಲಾ ಅಗತ್ಯ ಪ್ರಕ್ರಿಯೆಗಳನ್ನು ತುರ್ತಾಗಿ ನಿರ್ವಹಿಸಬೇಕು ಎಂಬ ಸೂಚನೆಯನ್ನು ಕೃಷ್ಣಬೈರೇಗೌಡರಿಗೆ ನೀಡಿದ್ದೇನೆ.
ಬಾಕಿ ಉಳಿದಿರುವ ಪ್ರತಿಯೊಬ್ಬರನ್ನೂ ಸುರಕ್ಷಿತವಾಗಿ ಕಾಪಾಡಿ ಕರೆತರುವ ಬಗ್ಗೆ ಸರ್ಕಾರಗಳ ಮಟ್ಟದಲ್ಲಿ ಸಕಲ ಪ್ರಯತ್ನಗಳೂ ನಡೆಯುತ್ತಿವೆ. ಈ ಬಗ್ಗೆ ಯಾರೊಬ್ಬರೂ ಆತಂಕಕ್ಕೆ ಒಳಗಾಗುವುದು ಬೇಡ. ಪ್ರತಿ ಕನ್ನಡಿಗನ ಪ್ರಾಣ ರಕ್ಷಣೆಯೇ ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.












Click it and Unblock the Notifications