RSS, BJP ಬೆದರಿಕೆಗಳಿಗೆ ಜಗ್ಗಲ್ಲ-ಬಗ್ಗಲ್ಲ, ನಾವು ಬ್ರೀಟಿಷರನ್ನೇ ಓಡಿಸಿದ್ದೇವೆ!: ಸಿಎಂ ಸಿದ್ದರಾಮಯ್ಯ

ಬೆಳಗಾವಿ, ಏಪ್ರಿಲ್ 28: ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಾ, ಭಾರತೀಯರ ಬದುಕನ್ನು ಬೆಲೆ ಏರಿಕೆಯಲ್ಲಿ ಬೇಯಿಸುತ್ತಾ, ಭಾರತೀಯ ಸಮಾಜವನ್ನು ಛಿದ್ರಗೊಳಿಸುತ್ತಾ, ಜನರ ನಡುವೆ ಬಿರುಕು ಮೂಡಿಸುತ್ತಾ ಜನದ್ರೋಹಿಯಾಗಿ ವರ್ತಿಸುತ್ತಿರುವುದು ಬಿಟ್ಟರೆ ಬೇರೆ ಏನು ಮಾಡಿದೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ಹೊರ ಹಾಕಿದರು.

ಬೆಳಗಾವಿಯಲ್ಲಿಸಿಪಿಇಡಿ ಮೈದಾನದಲ್ಲಿ ಇಂದು (ಏಪ್ರಿಲ್ 28) 'ಸಂವಿಧಾನ ರಕ್ಷಿಸಿ', 'ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರೋಧಿಸಿ' ಬೃಹತ್ ಪ್ರತಿಭಟನೆ ಉದ್ಘಾಟಿಸಿ ಅವರು ಮಾತನಾಡಿದರು. ಕಾಂಗ್ರೆಸ್‌ ಕಾರ್ಯಕ್ರಮಕ್ಕೆ ಬಂದು ಅಡ್ಡಿಪಡಿಸಿದ ಕರ್ನಾಟಕ ಬಿಜೆಪಿ ಕಾರ್ಯಕರ್ತರಿಗೆ, ಇವರ ಹಿಂದೆ ನಿಂತಿರುವ ಮುಖೇಡಿ ನಾಯಕರಿಗೆ ನೇರವಾಗಿ ಎಚ್ಚರಿಕೆ ಕೊಡುತ್ತಿದ್ದೇನೆ.

CM Siddaramaiah Congress Not Afraid of BJP-RSS Threats Slams Centre Over Price Hike

ನಾವು ಬಿಜೆಪಿ - ಆರ್.ಎಸ್.ಎಸ್ ನ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನೆಲ್ಲಾ ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ಕಾರ್ಯಕರ್ತರಿಗೂ ಇದೆ ಎಂದು ಅವರು ಎಚ್ಚರಿಸಿದರು.

ಭಾರತೀಯರು ಬ್ರಿಟೀಷರ ವಿರುದ್ಧ ಪ್ರಾಣತ್ಯಾಗ ಮಾಡಿ ಹೋರಾಡುತ್ತಿದ್ದಾಗ ನೀವು ಅಂದರೆ ಸಂಘ ಪರಿವಾರದವರು ಏನು ಕಡೆ ಕಟ್ಟೆ ಹಾಕ್ತಿದ್ರಿ? ಸ್ವಾತಂತ್ರ್ಯ ಹೋರಾಟಕ್ಕೆ ಏಕೆ ಬರಲಿಲ್ಲ ? ಏನ್ ಮಾಡ್ತಾ ಕೂತಿದ್ರಿ?. ಮೊನ್ನೆಯಷ್ಟೇ ಕಾಶ್ಮೀರದಲ್ಲಿ ಅಮಾಯಕ ಭಾರತೀಯರನ್ನು, ಕರ್ನಾಟಕದ ಮೂವರು ಅಮಾಯಕರನ್ನು ರಾಜಾರೋಷವಾಗಿ ಗನ್ ಗಳ ಸಮೇತ ಬಂದು ಅಮಾನುಷವಾಗಿ ಹತ್ಯೆ ಮಾಡಿ ಹೋದರು. ಇದು ಕೇಂದ್ರ ಸರ್ಕಾರದ ಭದ್ರತಾ ಲೋಪ ಅಲ್ಲವಾ? ಭಾರತೀಯರಿಗೆ ರಕ್ಷಣೆ ಕೊಡುವುದರಲ್ಲಿ ವಿಫಲ ಆಗಿರುವುದನ್ನು ನಾವು ಭಾರತೀಯರು ಪ್ರಶ್ನಿಸಬಾರದಾ? ಪ್ರಶ್ನಿಸಿದರೆ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸುತ್ತೀರಾ ಎಂದರು.

CM Siddaramaiah Congress Not Afraid of BJP-RSS Threats Slams Centre Over Price Hike

ಪೊಲೀಸ್ ಮೇಲೆ 'ಕೈ' ಮಾಡಲು ಮುಂದಾದ ಸಿಎಂ..

ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡುವಾಗ ಕೆಲವರಿಂದ ಅಡ್ಡಿ ಆಗಿದ್ದಕ್ಕೆ ಅವರು ಗರಂ ಆದರೆ. ಯಾವನಯ್ಯ ಅವನ ಎಸ್‌ಪಿ ಎಂದಾಗ ಎದುರಿಗೆ ಬಂದ ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಲು ಅವರು ಮುಂದಾಗಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

RSS ಕಚೇರಿ ಮೇಲೆ ಭಾವುಟ ಹಾರಾಡಿಲ್ಲ

ಮುಂದುವರಿದ ಮಾತನಾಡಿದ ಮುಖ್ಯಮಂತ್ರಿಗಳು, ನಮ್ಮ ಕಾರ್ಯಕ್ರಮಕ್ಕೆ ಬಂದು ಅಡ್ಡಿಪಡಿಸಿದ ದುಷ್ಟರಿಗೆ ದೇಶಪ್ರೇಮ ಇಲ್ಲವೇ? ಭಾರತಕ್ಕೆ ಸ್ವಾತಂತ್ರ್ಯ ಬಂದು 52 ವರ್ಷಗಳ ಕಾಲ RSS ಕೇಂದ್ರ ಕಚೇರಿ ಮೇಲೆ ಭಾರತದ ಬಾವುಟ ಹಾರಿಸಲೇ ಇಲ್ಲ. ಇದಕ್ಕೆ ನಾಚಿಕೆ ಆಗುವುದಿಲ್ಲವೇ ನಿಮಗೆ? ಯಾವತ್ತಾದರೂ ಆರ್.ಎಸ್.ಎಸ್ ಕಚೇರಿ ಮುಂದೆ ಹೋಗಿ ಪ್ರತಿಭಟಿಸಿದ್ದೀರಾ? ಎಂದು ಅವರು ಪ್ರಶ್ನಿಸಿದರು.

CM Siddaramaiah Congress Not Afraid of BJP-RSS Threats Slams Centre Over Price Hike

ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಆಧುನಿಕ ಭಾರತ ನಿರ್ಮಾಣದವರೆಗೂ ಬಿಜೆಪಿ, ಸಂಘ ಪರಿವಾರದ ಕೊಡುಗೆ ಏನಿದೆ? ನಾಚಿಕೆ ಇಲ್ಲದೆ ದೇಶಭಕ್ತಿ ಬಗ್ಗೆ ಮಾತನಾಡುವ ನಿಮ್ಮ ಕೊಡುಗೆ ಏನು? ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಅತ್ಯಂತ ಶ್ರೀಮಂತರ ಮೇಲೆ 32% ತೆರಿಗೆ ಹಾಕಲಾಗಿತ್ತು. ಪ್ರಧಾನಿ ಮೋದಿ ಬಂದ ಮೇಲೆ ಅತ್ಯಂತ ಶ್ರೀಮಂತ ಮೇಲಿನ ತೆರಿಗೆಯನ್ನು 25 % ಇಳಿಸಲಾಯಿತು.

ಬಡವರು, ಮಧ್ಯಮ ವರ್ಗದವರ ಮೇಲಿನ ತೆರಿಗೆಯನ್ನು ಹೆಚ್ಚಿಸಿರುವ ನಿಮಗೆ ನಾಚಿಕೆ ಆಗುತ್ತಿಲ್ಲವೇ? ಬಡವರ, ಮಧ್ಯಮ ವರ್ಗದವರ ವಿರೋಧಿ ಬಿಜೆಪಿಯ ಆಡಳಿತವನ್ನು ಪ್ರಶ್ನಿಸಬಾರದಾ? ಭಾರತೀಯರನ್ನು ಇನ್ನೂ ಎಷ್ಟು ವರ್ಷ ಸುಳ್ಳು ಹೇಳಿ ಮರಳು ಮಾಡ್ತೀರಿ ಎಂದು ಅವರು ದೂರಿದರು.

ಬಿಜೆಪಿ , ಸಂಘ ಪರಿವಾರ ಎದುರಿಸುವ ಶಕ್ತಿ ಇದೆ: ಸಿಎಂ

ಭಾರತದ ಸ್ವಾತಂತ್ರ್ಯಕ್ಕೆ ಪ್ರಾಣ ತ್ಯಾಗ ಮಾಡಿದ ಕಾಂಗ್ರೆಸ್ ಪಕ್ಷಕ್ಕೆ ಹೋರಾಟ ಹೊಸದಲ್ಲ. ಬ್ರಿಟೀಷರನ್ನೇ ಒಡ್ಡಿದ ನಮಗೆ ನೀವು ಬಿಜೆಪಿ ಮತ್ತು ಆರ್.ಎಸ್.ಎಸ್ ಅನ್ನು ಎದುರಿಸಿ ನಿಲ್ಲುವ ಶಕ್ತಿ ಇದೆ. ಕಾಂಗ್ರೆಸ್ ಹಾಲಿನ ದರ 4 ರೂ ಹೆಚ್ಚಿಸಿ, ಇಡೀ 4 ರೂಪಾಯಿಯನ್ನು ಪೂರ್ತಿಯಾಗಿ ರೈತರಿಗೆ, ಗೋಪಾಲಕರಿಗೆ, ಗೋ ಸಾಕಾಣಿಕೆದಾರರಿಗೆ ವರ್ಗಾಯಿಸಿದ್ದೇವೆ. ಇದರಲ್ಲಿ ಒಂದು ರೂಪಾಯಿ ಕೂಡ ಸರ್ಕಾರಕ್ಕೆ ಬರಲ್ಲ.

ನಾವು 4 ರೂ ಹೆಚ್ಚಿಸಿದರೂ ಹಾಲಿನ ದರ ಇಡೀ ದೇಶದಲ್ಲಿ ಕಡಿಮೆ ಇರುವುದು ನಮ್ಮ ಕರ್ನಾಟಕದಲ್ಲಿ ಮಾತ್ರ. ಬಸ್ ದರ, ನೀರಿನ ದರ, ವಿದ್ಯುತ್ ದರ ಅಕ್ಕ ಪಕ್ಕದ ರಾಜ್ಯಗಳಿಗಿಂತ ಕಡಿಮೆ ಇರುವುದು ನಮ್ಮ ರಾಜ್ಯದಲ್ಲಿ. ನಿಮ್ಮ ಸುಳ್ಳು, ಅಪಪ್ರಚಾರ, ಬೆದರಿಕೆಗೆ ಈ ಸಿದ್ದರಾಮಯ್ಯ ಹೆದರುವವನಲ್ಲ. ನಿಮ್ಮನ್ನು ಮೆಟ್ಟಿ ನಿಲ್ಲುತ್ತೇವೆ. ಕಾಂಗ್ರೆಸ್ ಪಕ್ಷಕ್ಕೆ ಆ ಶಕ್ತಿ ಇನ್ನೂ ಇದೆ ಎಂದು ಅವರು ಎಚ್ಚರಿಸಿದರು.

ಅಕ್ಕಿ, ಎಣ್ಣೆ, ಚಿನ್ನ, ಬೆಳ್ಳಿ, ಗೊಬ್ಬರ, ಕಾಳು, ಬೇಳೆ, ಡೀಸೆಲ್, ಪೆಟ್ರೋಲ್, ಸಿಲಿಂಡರ್ ಎಲ್ಲದರ ಬೆಲೆ ಏರಿಕೆಯಾಗಿದೆ. ಯಾವುದನ್ನು ಬಿಟ್ಟಿದ್ದೀರಿ ಹೇಳಿ?. ಕಚ್ಚಾತೈಲ ಬೆಲೆ ಕಡಿಮೆ ಇದ್ದಾಗಲೂ ಪೆಟ್ರೋಲ್, ಡೀಸೆಲ್ ಬೆಲೆ ಮಾತ್ರ ನಿರಂತರವಾಗಿ ಏರಿಕೆಯಾಗುತ್ತಲೇ ಇರುವುದು ಭಾರತೀಯರಿಗೆ ಬಿಜೆಪಿ ಬಗೆಯುತ್ತಿರುವ ಮಹಾದ್ರೋಹ.

ಬಿಜೆಪಿ ನಿರಂತರವಾಗಿ ಭಾರತೀಯರನ್ನು ಸುಳ್ಳುಗಳ ಸರಮಾಲೆಯಲ್ಲಿ ಮುಳುಗಿಸಿ, ಸಮಾಜದಲ್ಲಿ ಬಿರುಕು ಮೂಡಿಸಿ ಕಾಲ ಕಳೆಯುತ್ತಿದೆ. ನಿಮಗೆ ತಕ್ಕ ಉತ್ತರ ಕೊಡುವ ಶಕ್ತಿ ನಮಗಿದೆ. ನಾವು ಉತ್ತರ ಕೊಡುತ್ತೇವೆ ಎಂದು ಅವರು ಗುಡುಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+