Waqf Notice: ರೈತರಿಗೆ ನೀಡಿರುವ ವಕ್ಫ್‌ ಬೋರ್ಡ್ ನೋಟಿಸ್ ವಾಪಸ್ ಪಡೆಯಲು ಸಿಎಂ ಸಿದ್ದರಾಮಯ್ಯ ಸೂಚನೆ

ರಾಜ್ಯದಲ್ಲಿ ವಕ್ಫ್‌ ಬೋರ್ಡ್ ವಿವಿಧ ಭಾಗಗಳಲ್ಲಿ ರೈತರಿಗೆ ನೋಟಿಸ್ ಕೊಟ್ಟಿರುವ ವಿಚಾರ ವಿವಾದಕ್ಕೆ ಕಾರಣವಾಗಿದೆ. ಈ ವಿಚಾರ ಈಗಾಗಲೇ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು ಬಿಜೆಪಿ-ಕಾಂಗ್ರೆಸ್ ನಡುವೆ ವಾಗ್ವಾದ ನಡೆಯುತ್ತಿದೆ. ರೈತರ ಒಡೆತನದ ಭೂಮಿಗಳ ಪಹಣಿಯಲ್ಲಿ ವಕ್ಫ್‌ ಆಸ್ತಿ ಎಂದು ನಮೂದಾಗಿದ್ದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ವ್ಯಾಪಕ ಆಕ್ರೋಶದ ಬಳಿಕ ಎಚ್ಚೆತ್ತಿರುವ ಸಿಎಂ ಸಿದ್ದರಾಮಯ್ಯ ಇದೀಗ ವಕ್ಫ್‌ ಬೋರ್ಡ್ ಆಸ್ತಿ ವಿಚಾರವಾಗಿ ರೈತರಿಗೆ ನೋಟಿಸ್ ಕೊಡಬೇಡಿ ಎಂದು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.

ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದು, ಈಗ ಕೊಟ್ಟಿರುವ ನೋಟಿಸ್‌ಗಳನ್ನು ವಾಪಸ್ ಪಡೆಯುವಂತೆ ಹೇಳಲಾಗಿದ್ದು, ತುಮಕೂರು ಜಿಲ್ಲೆಯಲ್ಲಿ ವಕ್ಫ್‌ ಬೋರ್ಡ್‌ನಿಂದ ಯಾರಿಗೂ ನೋಟಿಸ್ ಕೊಟ್ಟಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

CM Siddaramaiah Directs DCs to Withdraw Waqf Board Notices Issued to Farmers

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಿ. ಪರಮೇಶ್ವರ್, ವಕ್ಫ್‌ ವಿವಾದ ಇಲ್ಲಿಗೆ ಮುಗಿದ ಅಧ್ಯಾಯ. ಮುಂದೆ ಇನ್ನು ಯಾವ ರೀತಿ ಬೆಳವಣಿಗೆ ನಡೆಯುತ್ತದೆ ಗೊತ್ತಿಲ್ಲ, ಕಂದಾಯ ಇಲಾಖೆಯಲ್ಲಿನ ದಾಖಲಾತಿ ಹಾಗೂ ವಕ್ಫ್‌ ದಾಖಲಾತಿ ಒಂದೇ ರೀತಿ ಇದ್ದರೆ ಮಾತ್ರ ಗೊಂದಲ ಉಂಟಾಗುವುದಿಲ್ಲ, ಕಂದಾಯ ದಾಖಲಾತಿಯೇ ಮುಖ್ಯವಾಗುತ್ತದೆ, ಅದರಲ್ಲಿ ಏನಿದೆ ಅದರಂತೆ ದಾಖಲಾಗುತ್ತದೆ ಎಂದರು.

ಕಂದಾಯ ದಾಖಲೆಗಳನ್ನು ಆಧಾರವಾಗಿಟ್ಟುಕೊಂಡು ಈ ವಿವಾದವನ್ನು ಬಗೆಹರಿಸಲಾಗುವುದು. ರೈತರು ಆತಂಕಪಡುವ ಅಗತ್ಯವಿಲ್ಲ, ಯಾವ ರೈತರಿಗೂ ವಕ್ಫ್ ನೋಟಿಸ್ ಕೊಡದಂತೆ ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ

ಇನ್ನು ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ವಿಚಾರದಲ್ಲಿ ಕಾಂಗ್ರೆಸ್ ನಾಯಕರೇ ಹಲವು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಶಕ್ತಿ ಯೋಜನೆ ಪರಿಷ್ಕರಣೆ ಮಾಡುವುದಾಗಿ ಡಿ.ಕೆ. ಶಿವಕುಮಾರ್ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆ ಹುಟ್ಟುಹಾಕಿತ್ತು. ಗ್ಯಾರಂಟಿ ಯೋಜನೆಗಳ ನಿಲ್ಲಿಸುವ ಬಗ್ಗೆ ಸ್ಪಷ್ಟನೆ ನೀಡಿದ ಡಾ. ಜಿ ಪರಮೇಶ್ವರ್, ಗ್ಯಾರಂಟಿ ಯೋಜನೆಗಳಲ್ಲಿ ಯಾವ ಗೊಂದಲವಿಲ್ಲ, ಎಲ್ಲವೂ ಅನುಷ್ಠಾನವಾಗುತ್ತಿವೆ ಎಂದರು.

ಯಾರು ಏನೇ ಹೇಳಿಕೆ ನೀಡಬಹುದು ಆದರೆ ಇದೆಲ್ಲ ಸಚಿವ ಸಂಪುಟದಲ್ಲಿ ತೀರ್ಮಾನ ಆಗಬೇಕು. ಗ್ಯಾರಂಟಿ ಯೋಜನೆ ನಿಲ್ಲಿಸುವ ಬಗ್ಗೆಯಾಗಲಿ, ಪರಿಷ್ಕರಣೆ ಮಾಡುವ ಬಗ್ಗೆಯಾಗಲಿ ಕ್ಯಾಬಿನೆಟ್‌ನಲ್ಲಿ ಚರ್ಚೆಯಾಗಿಲ್ಲ, ಗ್ಯಾರಂಟಿ ಕಾರ್ಯಕ್ರಮಗಳು ಮುಂದುವರೆಯುತ್ತವೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗಿರುವ ಬಗ್ಗೆ ಎಲ್ಲಾ ಶಾಸಕರು ಮಾತನಾಡಿದ್ದಾರೆ. ಎಲ್ಲ ಮಹಿಳೆಯರಿಗೂ 2,000 ರೂಪಾಯಿ ಕೊಡುವ ಬಗ್ಗೆ ಮಾತನಾಡಿದ್ದಾರೆ. ಸಚಿವರು, ಶಾಸಕರು ಕೊಟ್ಟಿರುವ ಸಲಹೆಗಳನ್ನು ಕೇಳಿದ್ದೇವೆ. ಆದರೆ ಇದನ್ನು ಒಬ್ಬರೇ ನಿರ್ಧಾರ ಮಾಡಲು ಆಗಲ್ಲ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+