ವಿದ್ಯೆ ಕಲಿತು ಜಾತಿವಾದಿಗಳಾದರೆ ಏನು ಪ್ರಯೋಜನ? ಸಿದ್ದರಾಮಯ್ಯ

ಮೈಸೂರು: ಇಡೀ ವಿದ್ಯಾರ್ಥಿ ಸಮುದಾಯಕ್ಕೆ ಸಂವಿಧಾನದ ಪೀಠಿಕೆ ಓದಿಸುವ ಕೆಲಸವನ್ನು ಮಾಡಲಾಗುತ್ತಿದೆ. ಪ್ರತಿಯೊಬ್ಬರೂ ಸಂವಿಧಾನವನ್ನ ಓದಿಕೊಳ್ಳಬೇಕು ಮತ್ತು ಸಂವಿಧಾನದ ಧ್ಯೇಯೋದ್ದೇಶ ಜಾರಿ ಮಾಡುವ ಪ್ರಯತ್ನ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದರು. ಆದಿಚುಂಚನಗಿರಿ ಶಾಖಾ ಮಠದ ನೂತನ ಕಟ್ಟಡ ಹಾಗೂ ಬಿಜಿಎಸ್ ಸಾಂಸ್ಕೃತಿಕ ಭವನ ಉದ್ಘಾಟನೆ ನೆರವೇರಿಸಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಾತನಾಡಿದರು.

ನೂತನ ವಿದ್ಯಾರ್ಥಿ ನಿಲಯದಲ್ಲಿ 200 ವಿದ್ಯಾರ್ಥಿಗಳಿಗೆ ಓದಲು ಅವಕಾಶ ಕಲ್ಪಿಸಲಾಗಿದ್ದು, ಇನ್ನಷ್ಟು ಭಾಗದಲ್ಲಿ ವಿದ್ಯಾರ್ಥಿ ನಿಲಯಗಳು ಇವೆ. ವಿದ್ಯೆ ನೀಡುವುದು ಸಮಾಜಕ್ಕೆ ನೀಡುವ ದೊಡ್ಡ ಕೊಡುಗೆ. ಸಮಾಜದಲ್ಲಿ ಎಲ್ಲರಿಗು ಶಿಕ್ಷಣ ದೊರೆತರೆ ಮಾತ್ರ ಜ್ಞಾನ ಬೆಳೆಯಲು ಮತ್ತು ಎಲ್ಲರೂ ಸ್ವಾಭಿಮಾನದಿಂದ ಬದುಕಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹಾಗೇ ವಿದ್ಯೆ ಕಲಿಯದೇ ಹೋದರೆ ಯೋಚನಾಪರವಾಗಲು ಸ್ವಾಭಿಮಾನಿಗಳಾಗಲು, ಜ್ಞಾನಿಗಳಾಗಲು ಸಾಧ್ಯವಿಲ್ಲ ಎಂದು ಸಿಎಂ ಅಭಿಪ್ರಾಯಪಟ್ಟರು.

cm-siddaramaiah

ಹಾಗೇ ತಮ್ಮ ಮಾತು ಮುಂದುವರಿಸಿದ ಸಿಎಂ ಸಿದ್ದರಾಮಯ್ಯ ಅವರು, ಗುಣಮಟ್ಟ ಶಿಕ್ಷಣ ನೀಡುವುದು ಅಗತ್ಯ. ವೈಜ್ಞಾನಿಕ, ವೈಚಾರಿಕತೆ ಬೆಳೆಸುವ ಶಿಕ್ಷಣ ಅತ್ಯಗತ್ಯ. ಮಾತನಾಡಲು ಓದು ಬರೆಯಲು ಕಲಿತರೆ ಅದು ವಿದ್ಯೆಯಲ್ಲ. ವಿದ್ಯೆ ಅಂದ್ರೆ ನಮ್ಮ ಯೋಚನೆ, ನಿಲುವುಗಳು, ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು. ಆಗ ಮಾತ್ರ ವಿದ್ಯೆ ಕಲಿತಿರುವುದಕ್ಕೆ ಸಾರ್ಥಕ ಎಂದು ಸಿದ್ದರಾಮಯ್ಯ ಹೇಳಿದರು.

ವಿದ್ಯೆ ಕಲಿತು ಜಾತಿವಾದಿಗಳಾದರೆ...

ಹಾಗೇ ವಿದ್ಯೆ ಕಲಿತು ಜಾತ್ಯಾತೀತವಾಗಿ ಯೋಚಿಸುವುದನ್ನ ಬಿಟ್ಟು, ಜಾತಿವಾದಿಗಳಾದ್ರೆ ಏನು ಪ್ರಯೋಜನವಿಲ್ಲ. ನಮ್ಮ ದೇಶ ಅನೇಕ ಧರ್ಮ, ಜಾತಿ, ಭಾಷೆ, ಸಂಸ್ಕೃತಿಗಳನ್ನ ಹೊಂದಿದೆ ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕು. ನಾವೆಲ್ಲರೂ ಆಕಸ್ಮಿಕವಾಗಿ ಯಾವುದೋ ಜಾತಿ, ಧರ್ಮಗಳಲ್ಲಿ ಹುಟ್ಟಿರುತ್ತೇವೆ. ಹಾಗೆಂದು ನಾವು ಮನುಷ್ಯತ್ವವನ್ನು ಮರೆಯಲು ಸಾಧ್ಯವಿಲ್ಲ. ನಾವು ಹುಟ್ಟುತ್ತಾ ವಿಶ್ವ ಮಾನವರಾಗುತ್ತೇವೆ. ಬೆಳೆಯುತ್ತಾ ಸಮಾಜದ ಪ್ರಭಾವದ ಪರಿಣಾಮ ಅಲ್ಪ ಮಾನವರಾಗುತ್ತೇವೆ. ರಾಷ್ಟ್ರ ಕವಿ ಕುವೆಂಪು ಅವರು ಬಯಸಿದ್ದು ಎಲ್ಲರೂ ವಿಶ್ವ ಮಾನವರಾಗಬೇಕು ಎಂದು. ರಾಷ್ಟ್ರ ಕವಿ ಕುವೆಂಪು ಅವರ ಕನಸನ್ನು ನನಸು ಮಾಡಲು ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಬೇಕು ಎಂದು ಸಿಎಂ ಸಲಹೆ ನೀಡಿದರು.

ಧರ್ಮ ಅಂದರೆ ಬದುಕಿನ ಮಾರ್ಗ

ಕೆಲವರು ಮನುಷ್ಯ, ಮನುಷ್ಯರಲ್ಲಿ ಬೆಂಕಿ ಇಡುವ ಕೆಲಸ ಮಾಡ್ತಾರೆ. ಅದಕ್ಕೆ ಬಲಿಯಾಗದೆ, ಮನುಷ್ಯ, ಮನುಷ್ಯನನ್ನು ಪ್ರೀತಿಸಬೇಕು. ಧರ್ಮ ಅಂದರೆ ಬದುಕಿನ ಮಾರ್ಗ. ಬಸವಾದಿ ಶರಣರು ದಯವೇ ಧರ್ಮದ ಮೂಲವಯ್ಯಾ ಎಂದಿದ್ದಾರೆ. ದಯೆ ಇಲ್ಲದ ಧರ್ಮ ಅದ್ಯಾವುದಯ್ಯ ಎಂದಿದ್ದಾರೆ. ಮನುಷ್ಯ, ಧರ್ಮವಿರುವುದು ಮನುಷ್ಯನ ಒಳಿತಿಗಾಗಿ, ಅವನ ತ್ತಮ ಬದುಕಿಗಾಗಿ. ಧರ್ಮಕ್ಕಾಗಿ ಮನುಷ್ಯ ಇಲ್ಲ. ಈ ಬಗ್ಗೆ ನಾವು ಸ್ಪಷ್ಟತೆ ಹೊಂದಬೇಕು ಎಂದರು ಸಿಎಂ.

ಮನುಷ್ಯ ಮನುಷ್ಯನನ್ನು ದಯೆ, ಕರುಣೆಯಿಂದ ಕಾಣುವುದೇ ಧರ್ಮ. ಯಾವ ಧರ್ಮದಲ್ಲಿ ದಯೆ, ಪ್ರೀತಿ, ಕರುಣೆ ಇಲ್ಲವೋ , ಅದು ಧರ್ಮವಲ್ಲ. ಮನುಷ್ಯರಾಗಲು ಪ್ರಯತ್ನಿಸೋಣ. ಮಾನವಧರ್ಮ,ಮನುಷ್ಯ ಜಾತಿ, ಎಲ್ಲರಿಗೂ ಉತ್ತಮ ಹಾಗೂ ಸಮಾನ ಅವಕಾಶಗಳನ್ನು ಕಲ್ಪಿಸುವ ಸಮಾಜವಾಗಬೇಕು ಎನ್ನಲು ಶಿಕ್ಷಣ, ಧಾರ್ಮಿಕ, ಆರೋಗ್ಯ ಕ್ಷೇತ್ರಗಳನ್ನು ಕಟ್ಟಿ ಬೆಳೆಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು ಸಿಎಂ.

cm-siddaramaiah

ಕೆಂಪೇಗೌಡರ ಜಯಂತಿ ಆಚರಣೆ ಬಗ್ಗೆ

ಕೆಲವೇ ಧಾರ್ಮಿಕ ಕ್ಷೇತ್ರಗಳಲ್ಲಿ ಆದಿಚುಂಚನಗಿರಿ ಕ್ಷೇತ್ರ ಕೂಡ ಬಹಳ ಪ್ರಸಿದ್ಧವಾದ ಕ್ಷೇತ್ರ. ಆ ಜವಾಬ್ದಾರಿ ಹೊತ್ತು ಧಾರ್ಮಿಕ ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ನಿರ್ಮಲಾನಂದನಾಥ ಶ್ರೀಗಳು ಸಾಧನೆ ಮಾಡಿದ್ದಾರೆ. ನಮ್ಮ ಸರ್ಕಾರ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲು ತೀರ್ಮಾನವನ್ನು ಮಾಡಿದ್ದು ಎಂದು ಸ್ಮರಿಸಿದ ಸಿಎಂ, ಕೆಂಪೇಗೌಡ ಪ್ರಾಧಿಕಾರವನ್ನು ಕೂಡ ನಮ್ಮ ಸರ್ಕಾರವೇ ಸ್ಥಾಪಿಸಿತು. ನಾಡಪ್ರಭು ಕೆಂಪೇಗೌಡ ವಿಮಾನ ನಿಲ್ದಾಣ ಎಂದು ಹೆಸರಿಟ್ಟಿದ್ದು ಕೂಡ ನಮ್ಮ ಸರ್ಕಾರವೇ. ಕೆಂಪೇಗೌಡರ ಹೆಸರು ಚಿರಸ್ಥಾಯಿ ಎಂಬ ಕಾರಣದಿಂದ ಕೆಂಪೇಗೌಡ ಜಯಂತಿ ಆಚರಿಸಲು ತೀರ್ಮಾನ ಮಾಡಿದೆವು ಎಂದರು.

ಹಾಗೇ ರಾಜಕಾರಣ ಮಾಡಲು ಜನರ ಪ್ರೀತಿ ಮತ್ತು ಆಶೀರ್ವಾದ ಇಲ್ಲದೇ ಹೋದ್ರೆ ಯಾರೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಜನರ ಪ್ರೀತಿ ಹಾಗೂ ವಿಶ್ವಾಸವನ್ನು ಗಳಿಸಿದವರು ಮಾತ್ರ ನಾಯಕರಾಗಲು ಹಾಗೂ ರಾಜಕಾರಣದಲ್ಲಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಮಾನವೀಯ ಸಮಾಜ ನಿರ್ಮಾಣ

ಆದಿಚುಂಚನಗಿರಿ 1800 ವರ್ಷಗಳ ಇತಿಹಾಸವಿರುವ ಪ್ರಾಚೀನ ಕ್ಷೇತ್ರ ವಾಗಿದ್ದು, ಈಶ್ವರನ ತಪೋಭೂಮಿ. ಅನೇಕ ಸಾಧುಸಂತರನ್ನು ಕಂಡಿರುವ ಆದಿಚುಂಚನಗಿರಿ ಕ್ಷೇತ್ರ ಹೆಮ್ಮರವಾಗಿ ಬೆಳವಣಿಗೆ ಕಾಣುವಲ್ಲಿ ಶ್ರೀ ಬಾಲಗಂಗಾಧರನಾಥ ಶ್ರೀಗಳ ಪಾತ್ರ ದೊಡ್ಡದಾಗಿದೆ. ಸಾಮಾಜಿಕ, ಶಿಕ್ಷಣ, ಆರೋಗ್ಯ, ಧಾರ್ಮಿಕ ಕ್ಷೇತ್ರದಲ್ಲಿ ಶ್ರೀಮಠ ವಿಶಾಲವಾಗಿ ಬೆಳೆದಿದೆ. ನಾಥ ಪಂಥ ಜಾತಿರಹಿತವಾದದ್ದು. ನಾವೆಲ್ಲ ಮೂಲತ: ಮನುಷ್ಯರು ನಂತರ ವಿವಿಧ ಜಾತಿಗಳನ್ನು ಸೃಷ್ಟಿಸಿ ಸಮಾಜವನ್ನು ವಿಂಗಡಿಸಲಾಗಿದೆ ಎಂದರು.

ಹಾಗೇ ತಮ್ಮ ಮಾತು ಮುಂದುವರಿಸಿದ ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆಯಿದ್ದು, ಮೇಲ್ವರ್ಗ ಹಾಗೂ ಕೆಳವರ್ಗ ಎಂಬ ಬೇಧಭಾವ ಇದೆ. ಈ ಅಸಮಾನತೆ ಹೋಗಲಾಡಿಸಿ, ಮಾನವೀಯ ಸಮಾಜವನ್ನು ನಿರ್ಮಿಸಲು ನಾಥಪಂಥ ಪ್ರಯತ್ನಿಸಿದಂತೆ ಆದಿಚುಂಚನಗಿರಿ ಮಠ ಕೂಡ ಶ್ರಮಿಸಿದೆ ಎಂದು ಸಿದ್ದರಾಮಯ್ಯ ಇದೇ ವೇಳೆ ಹೆಮ್ಮೆ ವ್ಯಕ್ತಪಡಿಸಿದರು.

ಎಲ್ಲರಿಗೂ ಶಿಕ್ಷಣದ ಹಕ್ಕು

ಇದೇ ವೇಳೆ ಬಾಲಗಂಗಾಧರ ಶ್ರೀಗಳನ್ನ ಭೇಟಿ ಮಾಡಿದ ಸಂದರ್ಭ ಕೂಡ ನೆನೆದರು ಸಿಎಂ. ನಾನು ವಕೀಲವೃತ್ತಯಲ್ಲಿ ಇದ್ದಾಗ ಬಾಲಗಂಗಾಧರ ಶ್ರೀಗಳನ್ನು ಭೇಟಿ ಮಾಡಿದ್ದೆ. ಮಠವನ್ನು ಅಗಾಧವಾಗಿ ಬೆಳೆಸಲು ಶ್ರೀಗಳು ಶ್ರಮವಹಿಸಿದ್ದಾರೆ. ಜನರನ್ನ ಧಾರ್ಮಿಕವಾಗಿ ಜಾಗೃತಗೊಳಿಸಿ ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಶಕ್ತಿಯನ್ನು ತುಂಬಿದರು. 500ಕ್ಕೂ ಹೆಚ್ಚು ಸಂಸ್ಥೆ ಸ್ಥಾಪಿಸಿ, 1.50 ಲಕ್ಷಕ್ಕೂ ಹೆಚ್ಚು ಮಕ್ಕಳು ಶ್ರೀಮಠದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಎಂದರು ಸಿಎಂ ಸಿದ್ದರಾಮಯ್ಯ.

ಸಾವಿರಾರು ವರ್ಷಗಳಿಂದಲೂ ಶೂದ್ರ ವರ್ಗ ಶಿಕ್ಷಣ ಸಂಸ್ಕೃತಿಯಿಂದ ವಂಚಿತವಾಗಿತ್ತು. ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನ ಸ್ಥಾಪಿತವಾದ ನಂತರ ಎಲ್ಲರಿಗೂ ಶಿಕ್ಷಣ ಕಡ್ಡಾಯ ಮಾಡಿದರು. ಈಗ ಶಿಕ್ಷಣ ಪಡೆಯುವುದು ಹಕ್ಕು. ಶೂದ್ರರಂತೆ, ಮಹಿಳೆಯರನ್ನ ಶಿಕ್ಷಣದಿಂದ ದೂರ ಇರಿಸಲಾಗಿತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ನಿರ್ಮಲಾನಂದನಾಥ ಶ್ರೀಗಳು ಸೇರಿದಂತೆ ಸಚಿವರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+