ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿನಲ್ಲಿ ಕ್ರಿಸ್‌ಮಸ್ ಸಂಭ್ರಮ, ಶುಭ ಕೋರಿದ ಸಿಎಂ

|
Google Oneindia Kannada News

ಬೆಂಗಳೂರು, ಡಿ. 25 : ಶಾಂತಿಧೂತ ಏಸುಕ್ರಿಸ್ತನ ಜನ್ಮದಿನವಾದ ಕ್ರಿಸ್‌ಮಸ್ ಹಬ್ಬದ ಶುಭ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ ಜನತೆಗೆ ಶುಭ ಹಾರೈಸಿದ್ದಾರೆ. ಕ್ರಿಸ್‌ಮಸ್ ಹಬ್ಬ ನಾಡಿನ ಕ್ರೈಸ್ತ ಬಾಂಧವರೆಲ್ಲರಿಗೂ ಒಳಿತನ್ನು ಉಂಟು ಮಾಡಲಿ ಎಂದು ಸಂದೇಶದಲ್ಲಿ ತಿಳಿಸಿದ್ದಾರೆ.

ಬೆಂಗಳೂರಿನ ಶಿವಾಜಿನಗರದ ಚರ್ಚ್‌ನಲ್ಲಿ ಕ್ರೈಸ್ತ ಭಾಂದವರು ರಾತ್ರಿ 12 ಗಂಟೆಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಇಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಚರ್ಚ್‌ಗೆ ಭೇಟಿ ನೀಡಿ ಕ್ರಿಸ್‌ಮಸ್ ಶುಭಾಶಯ ಹಾರೈಸಿದರು. [ವೈನ್ ಕುಡೀರಿ ತಪ್ಪಿಲ್ಲ..!]

CM Siddaramaiah

ಪ್ರೀತಿಯ ಕಾರಂಜಿಯಾಗಿ, ಸೋದರತೆಯ ಸಾಗರವಾಗಿ ಹಾಗೂ ಅನುಕಂಪದ ಪರ್ವತವಾಗಿದ್ದ ಏಸುಕ್ರಿಸ್ತ ಕ್ಷಮಾಗುಣದಲ್ಲಿ ಆಗಸದಷ್ಟೇ ಎತ್ತರ ಹಾಗೂ ವಿಶಾಲವಾಗಿದ್ದರು. ಏಸುವಿನ ಬದುಕು ಮನುಕುಲಕ್ಕೆ ಬೆಳಕು ಹಾಗೂ ಮಾರ್ಗದರ್ಶಿ ಎಂದು ಸಿಎಂ ಶುಭಾಶಯ ಸಂದೇಶದಲ್ಲಿ ತಿಳಿಸಿದ್ದಾರೆ.

ಕ್ರಿಸ್‌ಮಸ್ ಹಬ್ಬವು ನಾಡಿನ ಕ್ರೈಸ್ತ ಬಾಂಧವರೆಲ್ಲರಿಗೂ ಒಳಿತನ್ನು ಉಂಟು ಮಾಡಲಿ ಎಂದು ಸಿದ್ದರಾಮಯ್ಯ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕ್ರಿಸ್‌ಮಸ್ ಅಂಗವಾಗಿ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ.

Siddaramaiah

ಕ್ರಿಸ್‌ಮಸ್ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

English summary
Karnataka Chief Minister Siddaramaiah greeted Christians on the occasion of Christmas to be celebrated across the world on December 25.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X