ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ: ಪರಿಹಾರ ಘೋಷಿಸದೇ ವೈಮಾನಿಕ ಸಮೀಕ್ಷೆ! ವಿಪಕ್ಷ ನಾಯಕ ಗರಂ
ಬೆಂಗಳೂರು, ಸೆಪ್ಟಂಬರ್ 30: ಸಿಎಂ ಸಿದ್ದರಾಮಯ್ಯ ಅವರು ಇಂದು ಬೀದರ್, ಕಲಬುರಗಿ ಭಾಗದಲ್ಲಿ ಭೀಮಾ ನದಿಗೆ ನೀರು ಬಿಡುಗಡೆಯಿಂದ ಉಂಟಾದ ಹಾನಿ ಸ್ಥಳಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲು ಪರಿಹಾರ ಘೋಷಣೆ ಮಾಡಿ ನಂತರ ವೈಮಾನಿಕ ಸಮೀಕ್ಷೆ ಮಾಡಬೇಕಿತ್ತು. ಪರಿಹಾರವನ್ನೇ ತಿಳಿಸದೆ ಕೇವಲ ಸಮೀಕ್ಷೆ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ದೂರಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಆಗಿರುವ ಪ್ರವಾಹದ ಸ್ಥಿತಿ ವೀಕ್ಷಿಸಲು ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ಮಾಡುತ್ತಿದ್ದಾರೆ. ಎಲ್ಲ ರಸ್ತೆಗಳಲ್ಲಿ ಗುಂಡಿ ಇರುವುದರಿಂದ ಹಾಗೂ ರಸ್ತೆ ತಡೆದು ಜನರು ಪ್ರತಿಭಟಿಸುವುದರಿಂದ ಭಯಗೊಂಡ ಮುಖ್ಯಮಂತ್ರಿ ಹೆಲಿಕಾಪ್ಟರ್‌ನಲ್ಲಿ ವೀಕ್ಷಣೆ ಮಾಡುತ್ತಿದ್ದಾರೆ.

ಜೋಳ ತೊಗರಿ ಸೇರಿದಂತೆ ಪ್ರತಿ ಬೆಳೆಗಳ ಹಾನಿ, ಮನೆ ಹಾನಿ, ಶಾಲೆ ಹಾನಿಗೆ ಎಷ್ಟು ಪರಿಹಾರ ನೀಡಲಾಗುತ್ತದೆ ಎಂದು ಸರ್ಕಾರ ಘೋಷಣೆ ಮಾಡಬೇಕಿತ್ತು. ಆದರೆ ಈವರೆಗೆ ಸರ್ಕಾರ ಆದೇಶ ಮಾಡಿಲ್ಲ. ಒಂದು ಕಡೆ ಖಜಾನೆ ಖಾಲಿಯಾಗಿದೆ. ಮತ್ತೊಂದು ಕಡೆ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲು ಸಿದ್ಧತೆ ನಡೆದಿದೆ ಎಂದು ದೂರಿದರು.
ಮುಖ್ಯಮಂತ್ರಿಗಳು ಸಚಿವರ ತಂಡ ರಚಿಸಬೇಕಿತ್ತು. ಅಧಿಕಾರಿಗಳ ಸಭೆ ಕರೆದು ನೋಡಲ್ ಅಧಿಕಾರಿಗಳನ್ನು ನಿಯೋಜಿಸಬೇಕಿತ್ತು. ಪುನರ್ವಸತಿ ಕೇಂದ್ರಗಳಲ್ಲಿ ಸರಿಯಾಗಿ ಆಹಾರ ನೀಡಲಾಗುತ್ತಿದೆಯೇ ಎಂದು ಪರಿಶೀಲಿಸಬೇಕಿತ್ತು. ಏನೂ ಮಾಡದೆಯೇ ಹೆಲಿಕಾಪ್ಟರ್‌ನಲ್ಲಿ ಸಮೀಕ್ಷೆ ಮಾಡಲಾಗುತ್ತಿದೆ. ಈ ಸರ್ಕಾರ ಸಂತ್ರಸ್ತರಿಗೆ ಸರಿಯಾಗಿ ಸ್ಪಂದಿಸಿಲ್ಲ.
ಕಾಂಗ್ರೆಸ್‌ನಲ್ಲಿ ಅಕ್ಟೋಬರ್ ಕ್ರಾಂತಿ..!
ಕಾಂಗ್ರೆಸ್‌ನಲ್ಲಿ ಅಕ್ಟೋಬರ್ ಕ್ರಾಂತಿಯಾಗುವ ಲಕ್ಷಣಗಳು ಕಂಡುಬಂದಿವೆ. ಕ್ರಾಂತಿಯ ನಂತರ ಸಿಎಂ ಬದಲಾವಣೆಯಾಗುವ ಲಕ್ಷಣವಿದೆ. ಸರ್ಕಾರ ಅಸ್ಥಿರಗೊಂಡು ಬಿದ್ದುಹೋದರೆ ಚುನಾವಣೆ ಮಾಡುವುದು ಸೂಕ್ತ. ನಾವು ಕಾಂಗ್ರೆಸ್‌ನಂತೆ ಸರ್ಕಾರ ಬೀಳಿಸಲು ಹೋಗಲ್ಲ. ಎರಡೂವರೆ ವರ್ಷಗಳಲ್ಲಿ ಸರ್ಕಾರ ಟೇಕಾಫ್ ಆಗಿಲ್ಲ. ಕಾಂಗ್ರೆಸ್ ಶಾಸಕರು ಹಾಗೂ ಸಚಿವರು ಅಭಿವೃದ್ಧಿ ಆಗಿಲ್ಲ ಎನ್ನುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಚುನಾವಣೆ ನಡೆಯುವುದು ಸೂಕ್ತ ಎಂದು ಹೇಳಿದರು.
ಜಾತಿ ಸಮೀಕ್ಷೆಯಲ್ಲಿ ಸರ್ಕಾರ ಅನಗತ್ಯವಾದ ಮಾಹಿತಿಗಳನ್ನು ಸಂಗ್ರಹಿಸುತ್ತಿದೆ. ಜಾತಿ ಸಮೀಕ್ಷೆಯಲ್ಲಿ ತೀರಾ ವೈಯಕ್ತಿಕ ವಿಷಯ ಕೇಳಿದರೆ ಜನರು ಮಾಹಿತಿ ನೀಡದೇ ಇರಬಹುದು. ಇದು ಜನರಿಗೆ ಬಿಟ್ಟ ವಿಚಾರ ಎಂದು ಕೋರ್ಟ್ ಕೂಡ ಹೇಳಿದೆ. ಕೇಂದ್ರ ಸರ್ಕಾರ ಸಂವಿಧಾನದ ಪ್ರಕಾರ ತನ್ನ ಅಧಿಕಾರ ಚಲಾಯಿಸಿ ಜಾತಿ ಗಣತಿ, ಜನ ಗಣತಿ ಮಾಡುತ್ತಿದೆ. ರಾಜ್ಯ ಸರ್ಕಾರಕ್ಕೆ ಸಮೀಕ್ಷೆಯ ಅಧಿಕಾರವೇ ಇಲ್ಲ ಎಂದು ತಿಳಿಸಿದರು.
ಸಮೀಕ್ಷೆಯ ಸಿಬ್ಬಂದಿಗೆ ತರಬೇತಿಯೇ ಕೊಟ್ಟಿಲ್ಲ?
ಸಮೀಕ್ಷೆ ಮಾಡುವವರಿಗೆ ತರಬೇತಿ ನೀಡಿಲ್ಲ. ಸಮೀಕ್ಷೆ ಮಾಡದ ಸಿಬ್ಬಂದಿಯನ್ನು ಅಮಾನತು ಮಾಡುತ್ತೇವೆ ಎಂದು ಬೆದರಿಕೆ ಒಡ್ಡಲಾಗಿದೆ. ರಾಜ್ಯ ಸರ್ಕಾರದಿಂದ ಸಮೀಕ್ಷೆ ಅಗತ್ಯವೇ ಇರಲಿಲ್ಲ. ಎರಡು ಕೋಟಿ ಮನೆಗಳ ಹಣೆಬರಹವನ್ನು ಎರಡೇ ದಿನಗಳಲ್ಲಿ ಬರೆಯಲು ಮುಂದಾಗಿದ್ದಾರೆ. ಜಾತಿ ಸಮೀಕ್ಷೆಯ ಕಾಲಂಗಳಲ್ಲಿ ಕೇವಲ ಜಾತಿ/ಧರ್ಮಕ್ಕೆ ಆದ್ಯತೆ ನೀಡಲಾಗಿದೆ. ಇದರಲ್ಲಿ ಸಾಮಾಜಿಕ-ಶೈಕ್ಷಣಿಕ ಅಂಶಗಳಿಲ್ಲ.
ಸಮೀಕ್ಷೆ ಮುಗಿದ ನಂತರ ವರದಿಯನ್ನು ಕಸದ ಬುಟ್ಟಿಗೆ ಹಾಕುತ್ತಾರೆ. ಜಾತಿ ಸಮೀಕ್ಷೆಗೆ ನಮ್ಮ ವಿರೋಧವಿಲ್ಲ, ಆದರೆ ಜಾತಿ/ಧರ್ಮ ಒಡೆಯುವ ಅಜೆಂಡಾಗೆ ನಮ್ಮ ವಿರೋಧವಿದೆ. ಸಿಎಂ ಸಿದ್ದರಾಮಯ್ಯ ಹಿಂದೂ ವಿರೋಧಿಯಾಗಿದ್ದು, ಆ ನಡೆಯನ್ನೇ ಇಲ್ಲಿ ತೋರಿದ್ದಾರೆ. ಸಂವಿಧಾನದ ಅಡಿಯಲ್ಲಿ ಯಾವುದೇ ಜಾತಿಗೆ ಪರಿಶಿಷ್ಟ ಪಂಗಡದ ಸ್ಥಾನ ನೀಡಲು ನಮ್ಮ ಅಭ್ಯಂತರವಿಲ್ಲ ಎಂದರು.
ರಸ್ತೆಗುಂಡಿ ಸಮಸ್ಯೆ, ಇವು ಸಾವಿನ ಗುಂಡಿಗಳು
ಬೆಂಗಳೂರಿನ ರಸ್ತೆ ಗುಂಡಿಗಳು ಸಾವಿನ ಗುಂಡಿಗಳಾಗಿವೆ. ಬೆಂಗಳೂರಿನಲ್ಲಿ ಒಬ್ಬ ಯುವತಿ ರಸ್ತೆ ಗುಂಡಿಯಿಂದಾಗಿ ಜೀವ ಕಳೆದುಕೊಂಡಿದ್ದಾಳೆ. ಈ ಸಾವಿಗೆ ಕಾರಣ ಯಾರು ಎಂದು ಜನರು ಪ್ರಶ್ನಿಸುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಬೈಕ್‌ನಲ್ಲಿ ಓಡಾಡಿದರೂ, ಸಿಎಂ ನಗರ ಪ್ರದಕ್ಷಿಣೆ ಮಾಡಿದರೂ ಪ್ರಯೋಜನವಾಗಿಲ್ಲ. ಬಿಜೆಪಿ ಅವಧಿಯಲ್ಲಿ ರಸ್ತೆ ಡಾಂಬರೀಕರಣ ಮಾಡಲಾಗಿತ್ತು. ಅದಾದ ನಂತರ ಗುಂಡಿಗಳು ಉಂಟಾಗಿವೆ. ಆದರೂ ಈ ಸರ್ಕಾರ ದುರಸ್ತಿ ಮಾಡಿಲ್ಲ ಎಂದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications