ಮೈಸೂರು: ಕುರ್ಚಿಯಿಂದ ಬಿದ್ದ ಸಿದ್ದರಾಮಯ್ಯ, ತಲೆಗೆ ಚಿಕ್ಕ ಗಾಯ
Recommended Video

ಮೈಸೂರು, ಏಪ್ರಿಲ್ 03: ಕರ್ನಾಟಕ ವಿಧಾನಸಭೆ ಚುನಾವಣೆಗೆ ಪ್ರಚಾರ ಕಾರ್ಯದಲ್ಲಿ ಬ್ಯಸಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ(ಏ.02) ತಮ್ಮ ತವರು ಜಿಲ್ಲೆ ಮೈಸೂರಿನಲ್ಲಿ ಪ್ರಚಾರ ಕಾರ್ಯ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಮಾವಿನಹಳ್ಳಿಯಲ್ಲಿ ನಡೆದ ಸಭೆಯೊಂದರಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ ಕುರ್ಚಿಯಿಂದ ಬಿದ್ದ ಪರಿಣಾಮ ಅವರ ತಲೆಯಲ್ಲಿ ಚಿಕ್ಕ ಗಾಯವಾಗಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಸಭೆಯಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯ ಕುಳಿತಿದ್ದ ಪ್ಲಾಸ್ಟಿಕ್ ಚೇರ್ ಮುರಿದ ಪರಿಣಾಮ ಈ ಘಟನೆ ನಡೆದಿದೆ. ಜೊತೆಯಲ್ಲೇ ಇದ್ದ ಅವರ ಮಗ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ನೆರವು ನೀಡಿದರು. 'ತಲೆಗೆ ಚಿಕ್ಕ ಗಾಯವಾಗಿದ್ದು, ನೋವು ಉಲ್ಬಣಿಸಿದರೆ ಬೆಂಗಳೂರಿಗೆ ಹಿಂದಿರುಗಿದ ನಂತರ ವೈದ್ಯರನ್ನು ಸಂಪರ್ಕಿಸುತ್ತೇನೆ' ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೇ.12 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ಭರ್ಜರಿ ಪ್ರಚಾರ ಆರಂಭಿಸಿರುವ ಸಿದ್ದರಾಮಯ್ಯ, ಕಳೆದ ಐದು ದಿನಗಳಿಂದ ಮೈಸೂರಿನಲ್ಲಿ ಪ್ರಚಾರ ನಡೆಸುತ್ತಿದ್ದಾರೆ.












Click it and Unblock the Notifications