ವಿಧಾನಸೌಧದಲ್ಲಿ RCB ಆಟಗಾರರಿಗೆ ಸಿಎಂ ಸಿದ್ದರಾಮಯ್ಯ ಸನ್ಮಾನ
ಬೆಂಗಳೂರು : 17 ವರ್ಷಗಳ ವನವಾಸ ದ ಬಳಿಕ ಅವಮಾನ, ಟ್ರೊಲ್ ಎಲ್ಲವನ್ನು ಸಹಿಸಿಕೊಂಡು ಇದೀಗ ಐಪಿಎಲ್ 18ನೇ ಆವೃತ್ತಿಯಲ್ಲಿ ಚೊಚ್ಚಲ ಕಪ್ ಎತ್ತಿ ಹಿಡಿದಿದೆ. 2025ರ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕರ್ನಾಟಕ ಸರ್ಕಾರ ಸನ್ಮಾನಿಸಲಿದೆ. ಐಪಿಎಲ್ ಟ್ರೋಫಿ ಜಯಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆರ್ ಸಿಬಿ ತಂಡದಿಂದ ವಿಜಯಯಾತ್ರೆ ಆಯೋಜಿಸಿದ್ದು, ಈ ಪರೇಡ್ ವೇಳೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಐಪಿಎಲ್ 18 ನೇ ಆವೃತ್ತಿಯಲ್ಲಿ ಮೊಟ್ಟಮೊದಲ ಬಾರಿಗೆ ಆರ್ ಸಿಬಿ ತಂಡ ಚಾಂಪಿಯನ್ಸ್ ಆಗಿ ಹೊರಹೊಮ್ಮಿದ್ದು, ಈ ಹಿನ್ನೆಲೆಯಲ್ಲಿ ಆರ್‌ಸಿಬಿ ಆಟಗಾರರಿಗೆ ಅಭಿನಂದನೆ ಸಲ್ಲಿಸಲು ಇಂದು ವಿಧಾನಸೌಧದಲ್ಲಿ ಬೃಹತ್ ಮೆಟ್ಟಿಲಿನ ಮೇಲೆ ರಾಜ್ಯ ಸರ್ಕಾರದಿಂದ ಆರ್‌ಸಿಬಿ ಆಟಗಾರರಿಗೆ ಗೌರವ ನೀಡಲು ಸಿದ್ಧತೆ ನಡೆಸಿದ್ದು, ರಾಜ್ಯ ಸರ್ಕಾರದ ವತಿಯಿಂದ ಆರ್‌ಸಿಬಿ ಆಟಗಾರರಿಗೆ ಸನ್ಮಾನವನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಲಿದ್ದಾರೆ.

ಆರ್‌ಸಿಬಿ ಆಟಗಾರರು ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಸಂಜೆ 5 ಗಂಟೆಗೆ ವಿಜಯಯಾತ್ರೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಪರೇಡ್ ವೇಳೆ ಯಾವುದೇ ಸಮಸ್ಯೆ ಆಗಬಾರದು. ಸಂಭ್ರಮಾಚರಣೆ ವೇಳೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಹೀಗಾಗಿ ಅಟಗಾರರು ಅಭಿಮಾನಿಗಳಿಗೆ ಯಾವುದೇ ತೊಂದರೆ ಆಗಬಾರದು ಪರೇಡ್ ವೇಳೆ ಸವಾರರಿಗೂ ಸಮಸ್ಯೆ ಆಗದಂತೆ ನೋಡಿಕೊಳ್ಳಿ ಎಂದು ತಿಳಿಸಿದ್ದಾರೆ.
ವಿಧಾನಸೌಧ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಟ್ರಾಫಿಕ್ ನಿಭಾಯಿಸಿ ಎಂದು ಡಿಜಿ ಮತ್ತು ಐಜಿಪಿ ಸಲೀಂ ಹಾಗೂ ಸಂಚಾರಿ ಜಂಟಿ ಆಯುಕ್ತ ಎಂ ಎನ್ ಅನುಚೆತ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಐ.ಪಿ.ಎಲ್ ಹದಿನೆಂಟನೇ ಆವೃತ್ತಿಯನ್ನು ಗೆದ್ದಿರುವ ಆರ್.ಸಿ.ಬಿ ತಂಡಕ್ಕೆ ಹಾಗೂ ಅಭಿಮಾನಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು. ರಾಜ್ಯ ಅತೀವ ಹೆಮ್ಮೆ ಹಾಗೂ ಪಡುವಂಥ ಕೆಲಸ ಆರ್.ಸಿ.ಬಿ ಮಾಡಿದ್ದು, ವಿಧಾನಸೌಧದ ಮೆಟ್ಟಿಲುಗಳಲ್ಲಿ ಇಂದು ತಂಡಕ್ಕೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.












Click it and Unblock the Notifications