Siddaramaiah: ವಿದ್ಯುತ್ ದುಂದುವೆಚ್ಚ-ದುರುಪಯೋಗ ಮಾಡುವಂತೆ ಜನರಿಗೆ ಬಿಜೆಪಿ ಕುಮ್ಮಕ್ಕು ಕೊಡುತ್ತಿದೆ: ಸಿದ್ದರಾಮಯ್ಯ

ಬೆಂಗಳೂರು,ಜೂನ್‌ 05: ಜನರಿಂದ ತಿರಸ್ಕೃತಗೊಂಡಿರುವ ಬಿಜೆಪಿ, ವಿದ್ಯುತ್ ಅನ್ನು ಅನಗತ್ಯ ದುರ್ಬಳಕೆ-ದುಂದುವೆಚ್ಚ-ದುರುಪಯೋಗ ಮಾಡಲು ಕುಮ್ಮಕ್ಕು ಕೊಡುತ್ತಿದೆ. ಇದು ಅತ್ಯಂತ ಜನವಿರೋಧಿಯಾದದ್ದು. ನಾಡಿನ ಪ್ರಜ್ಞಾವಂತ ಜನತೆ ಇದಕ್ಕೆ ಸೊಪ್ಪಾಕುವುದಿಲ್ಲ ಎನ್ನುವ ಭರವಸೆ ನಮಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಸೋಮವಾರ ಜ್ಞಾನಜ್ಯೋತಿ ಸಭಾಂಗಣದಲ್ಲಿ ಅರಣ್ಯ ಇಲಾಖೆ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ 2023 ಉದ್ಘಾಟಿಸಿದ ಬಳಿಕ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಸಂಕಷ್ಟದಲ್ಲಿರುವ ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ನೆರವಿಗಾಗಿ ನಾವು ಉಚಿತ ವಿದ್ಯುತ್ ನೀಡಲು ಮುಂದಾಗಿದ್ದೇವೆ. ಒಂದು ವರ್ಷದ ಸರಾಸರಿ ಬಳಕೆಗಿಂತ ಶೇ10 ರಷ್ಟು ಹೆಚ್ಚು ಉಚಿತ ವಿದ್ಯುತ್ ಬಳಕೆಗೆ ನಾವು ಅವಕಾಶ ನೀಡಿದ್ದೇವೆ. ಇದನ್ನು ನಾಡಿನ ಜನತೆ ಸಂಭ್ರಮದಿಂದ ಒಪ್ಪಿಕೊಂಡಿದ್ದಾರೆ ಮತ್ತು ಸ್ವೀಕರಿಸಿದ್ದಾರೆ.

 CM Siddaramaiah Fierce Attack Against BJP

ಆದರೆ ಬಿಜೆಪಿ, ವಿದ್ಯುತ್ ಅನ್ನು ಅನಗತ್ಯ ದುರ್ಬಳಕೆ-ದುಂದುವೆಚ್ಚ-ದುರುಪಯೋಗ ಮಾಡಲು ಕುಮ್ಮಕ್ಕು ಕೊಡುತ್ತಿದೆ. ನಾವು ಅಗತ್ಯಕ್ಕೆ ತಕ್ಕಂತೆ ಬಳಸಲು ನಾಡಿನ ಜನತೆಗೆ ನೆರವಾಗುತ್ತೇವೆ. ನೀರು, ಗಾಳಿ, ವಿದ್ಯುತ್ ಯಾವುದನ್ನೂ ದುಂದುವೆಚ್ಚ ಮಾಡಬಾರದು. ದುಂದುವೆಚ್ಚ ಎನ್ನುವುದು ಪ್ರಕೃತಿ ವಿರೋಧಿ, ಜನ ವಿರೋಧಿ ಮತ್ತು ಪರಿಸರ ವಿರೋಧಿಯಾದದ್ದು ಎಂದು ಹೇಳಿದರು.

ಪರಿಸರ ಉಳಿಸುವುದು, ಕಾಡು ಬೆಳೆಸುವುದು ಮತ್ತು ಉಳಿಸುವುದು ಕೇವಲ ಅರಣ್ಯ ಇಲಾಖೆ ಕರ್ತವ್ಯ ಅಲ್ಲ. ಪ್ರತಿಯೊಬ್ಬರ ಜವಾಬ್ದಾರಿ. ಪ್ರಕೃತಿಯ ಪ್ರಯೋಜನವನ್ನು ಪಡೆಯುತ್ತಿರುವ ಪ್ರತಿಯೊಬ್ಬರ ಮೇಲೂ ಪ್ರಕೃತಿ ಉಳಿಸುವ ಜವಾಬ್ದಾರಿ ಇದೆ. ಮನುಷ್ಯ ಪ್ರಕೃತಿಕ ಅವಿಭಾಜ್ಯ ಅಂಗ. ಪ್ರಕೃತಿ ನಾಶ ನಮ್ಮ ನಾಶ. ಹೀಗಾಗಿ ಪ್ರಕೃತಿಯ ಜತೆಗೆ ನಾವು ಬೆಳೆಯಬೇಕು, ಬಾಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+