Dharmasthala Case: ಧರ್ಮಸ್ಥಳ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಖಡಕ್ ರಿಯಾಕ್ಷನ್

ಬೆಂಗಳೂರು, ಆಗಸ್ಟ್‌ 07: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ದಲ್ಲಿ ನಡೆಯುತ್ತಿರುವ ಮೃತದೇಹಗಳಿಗಾಗಿನ ಹುಡುಕಾಟ ಶೋಧ ಕಾರ್ಯದಲ್ಲಿ ದಿನಕ್ಕೊಂದು ಅಸ್ಥಿಪಂಜರದ ಮೂಳೆಗಳು ಸಿಗುತ್ತಿವೆ. ಇತ್ತ ನಿನ್ನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದೆ. ಸೌಜನ್ಯ ವಿಚಾರವಾಗಿ ಪ್ರಶ್ನೆ ಕೇಳುತ್ತಿದ್ದ , ಯೂಟ್ಯೂಬರ್‌ಗಳಿಗೆ ಧರ್ಮದೇಟು ನೀಡಲಾಗಿದೆ. ಕ್ಷೇತ್ರಕ್ಕೆ ಅವಮಾನ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಇಂದು(ಗುರುವಾರ) ತೋಟಗಾರಿಕೆ ಇಲಾಖೆ ಲಾಲ್ ಬಾಗ್ ಬೆಂಗಳೂರು ಇವರ ವತಿಯಿಂದ ಲಾಲ್ ಬಾಗ್ ನಾ ಗಾಜಿನ ಮನೆ ಯಲ್ಲಿ ಆಯೋಜಿಸಲಾಗಿದ್ದ ವೀರ ರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ವಿಷಯಾಧರಿತ ಸ್ವಾತಂತ್ರೋತ್ಸವ 218 ನೇ ಫಲಪುಷ್ಪ ಪ್ರದರ್ಶನ -2025 ಅನ್ನು ಉದ್ಘಾಟನೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಧರ್ಮಸ್ಥಳದಲ್ಲಿ ನಡೆದ ಗುಂಪು ಘರ್ಷಣೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಯಾರು ತಪ್ಪು ಮಾಡಿದರೂ ಕಾನೂನಿನ ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದರು.

CM Siddaramaiah First Reaction To The Dharmasthala Case

ಕಿತ್ತೂರು ರಾಣಿ ಚೆನ್ನಮ್ಮ ಜಾತ್ಯತೀತವಾಗಿ ಎಲ್ಲರನ್ನೂ ಬಳಸಿಕೊಂಡು ಕಿತ್ತೂರು ಪ್ರಾಂತ್ಯವನ್ನು ಆಳಿದ ಧೀರ ಮಹಿಳೆ ಹಾಗೂ ಸ್ವಾತಂತ್ರ್ಯ ಯೋಧೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಲಾಲ್ ಬಾಗ್ ನಲ್ಲಿ ತೋಟಗಾರಿಕಾ ಇಲಾಖೆ ಆಯೋಜಿಸಿರುವ 218 ನೇ ವರ್ಷದ ಫಲಪುಷ್ಪ ಉದ್ಘಾಟಿಸಲಾಗಿದೆ. ಈ ಬಾರಿ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅವರಿಗೆ ಗೌರವ ಸಲ್ಲಿಸುವ ಕೆಲಸವನ್ನು ಪ್ರದರ್ಶನದ ಮೂಲಕ ಮಾಡಲಾಗಿದೆ ಎಂದರು.

ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ಧ ಎರಡು ಯುದ್ಧಗಳನ್ನು ಮಾಡಿದರು. ಮೊದಲ ಯುದ್ಧದಲ್ಲಿ ಬ್ರಿಟಿಷ್ ಅಧಿಕಾರಿ ಥ್ಯಾಕರೆಯನ್ನು ಕೊಂದು ಜಯ ಗಳಿಸಿದರು. ಎರಡನೇ ಯುದ್ಧದಲ್ಲಿ ಚೆನ್ನಮ್ಮನವರಿಗೆ ಹಿನ್ನಡೆಯಾಯಿತು. ಸಂಗೊಳ್ಳಿ ರಾಯಣ್ಣ ಚೆನ್ನಮ್ಮನ ಬಲಗೈ ಬಂಟರಾಗಿದ್ದರು. ಸ್ವಾತಂತ್ರ್ಯ ದಿನಾಚರಣೆಯಂದು ಹುಟ್ಟಿದ ಸಂಗೊಳ್ಳಿ ರಾಯಣ್ಣ ನಂತರದಲ್ಲಿ 1831 ಗಲ್ಲು ಜನವರಿ 26 ರಂದು ಶಿಕ್ಷೆಯಾಯಿತು. ಇದು ಕಾಕತಾಳೀಯವಾದರೂ ಎರಡೂ ಮಹತ್ವದ ದಿನಗಳಲ್ಲಿ ಹುಟ್ಟಿ, ಮರಣ ಹೊಂದಿದರು. ಸಂಗೊಳ್ಳಿ ರಾಯಣ್ಣ ಬ್ರಿಟಿಷರ ವಿರುದ್ಧ ತನ್ನದೇ ಸೈನ್ಯ ಕಟ್ಟಿಕೊಂಡು ಗೆರಿಲ್ಲಾ ಯುದ್ಧವನ್ನು ಮಾಡುತ್ತಿದ್ದರು. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಇಬ್ಬರು ಸ್ವಾತಂತ್ರ್ಯ ಯೋಧರ ವಿಷಯಾಧಾರಿತ ಫಲಪುಷ್ಪ ಪ್ರದರ್ಶನವನ್ನು ಏರ್ಪಾಡು ಮಾಡಿದೆ ಎಂದರು.

ಈ ವರ್ಷ ಚೆನ್ನಮ್ಮ ಬ್ರಿಟಿಷರನ್ನು ಸೋಲಿಸಿ 200 ವರ್ಷಗಳಾಗಿವೆ. ಸಂಗೊಳ್ಳಿ ರಾಯಣ್ಣ ಹಿಂದುಳಿದ ಜಾತಿಗೆ ಸೇರಿದವರು. ಕಿತ್ತೂರು ರಾಣಿ ಚೆನ್ನಮ್ಮ ಅವರ ಜಯಂತಿಯನ್ನು ನಾನು ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಆಚರಿಸಲು ತೀರ್ಮಾನ ಮಾಡಲಾಯಿತು. ಸಂಗೊಳ್ಳಿರಾಯಣ್ಣ ಪ್ರಾಧಿಕಾರವನ್ನು ಕೂಡ ನಮ್ಮ ಸರ್ಕಾರವೇ ಸ್ಥಾಪಿಸಿ 110 ಎಕರೆ ಜಾಗವನ್ನು ಒದಗಿಸಿತು. ಸಂಗೊಳ್ಳಿ ಮತ್ತು ನಂದಗಡವನ್ನು ಅಭಿವೃದ್ಧಿ ಪಡಿಸಿದೆ ಎಂದರು. ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದವರನ್ನು ನಾವು ಸ್ಮರಿಸಿಕೊಳ್ಳಬೇಕು. ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಬೆಳವಾಡಿ ಮಲ್ಲಮ್ಮ, ರಾಣಿ ಅಬ್ಬಕ್ಕ ಎಲ್ಲರೂ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಎಂದು ತಿಳಿಸಿದರು .

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+