ಮಾದ್ಯಮಗಳಿಗೆ ಪಾಠ ಮಾಡಿದ ಸಿದ್ದರಾಮಯ್ಯ- ವಿಡಿಯೋ ವೈರಲ್
ಬೆಂಗಳೂರು, ಜನವರಿ 11: ವಸ್ತುನಿಷ್ಠವಾಗಿ ಸುದ್ದಿಗಳನ್ನು ವರದಿ ಮಾಡುವುದು ಪತ್ರಿಕಾ ವೃತ್ತಿಯ ಮೂಲಭೂತ ಮೌಲ್ಯ. ಈ ಮೌಲ್ಯಗಳನ್ನು ಪಾಲಿಸುವುದೇ ಸಂವಿಧಾನಕ್ಕೆ ಕೊಡುವ ಗೌರವ. ಇದನ್ನು ಬಿಟ್ಟು ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದನ್ನು ದೊಡ್ಡ ಚರ್ಚೆ ಮಾಡಿ ಮೌಡ್ಯ ಬೆಳೆಸಿದಂತಹ ರೀತಿಯಲ್ಲಿ ಕೆಲಸ ಮಾಡಬೇಡಿ ಎಂದು ಮಾಧ್ಯಮಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಠ ಮಾಡಿದ್ದಾರೆ.
ಪತ್ರಿಕಾ ಧರ್ಮದ ಕುರಿತು ಮಾಧ್ಯಮಗಳ ಕುರಿತು ಸಿದ್ದರಾಮಯ್ಯ ಅವರು ಮಾತನಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಸಿದ್ದರಾಮಯ್ಯ ಕಾರಿನ ಮೇಲೆ ಕಾಗೆ ಕುಳಿತ ವಿಚಾರವನ್ನ ಪ್ರಸ್ತಾಪಿಸಿ, ಕಾರಿನ ಕಾಗೆ ಕುಳಿತಿದೆ, ಅಧಿಕಾರ ಹೋಗಬಹುದು ಎಂದು ಚರ್ಚೆಗಳ ಮೇಲೆ ಚರ್ಚೆ ಶುರುವಾಯ್ತು. ನನ್ನ ಕಾರಿನ ಮೇಲೆ ಕಾಗೆ ಕುಳಿತರೇ ನಿಮಗೆನೂ ಕಷ್ಟ ಎಂದು ಪತ್ರಿಕಾ ರಂಗ ತನ್ನ ಜವಾಬ್ದಾರಿಯನ್ನ ಮರೆತಿದೆ ಎಂದು ಹೇಳಿದರು.

ಸಂವಿಧಾನವೇ ನಮ್ಮ ಧರ್ಮ. ರಾಜಕೀಯ ಧರ್ಮ ಅನುಸರಿಸುವುದೇ ಸಂವಿಧಾನಕ್ಕೆ ಕೊಡುವ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯ ಪಟ್ಟರು. ಸುದೀರ್ಘ ಮತ್ತು ಅರ್ಥಪೂರ್ಣ ಚರ್ಚೆಯ ಬಳಿಕ ನಮ್ಮ ಈ ಸಂವಿಧಾನ ಜಾರಿಯಾಗಿದೆ. ಆದ್ದರಿಂದ ಈ ಸಂವಿಧಾನವನ್ನು ಗೌರವಿಸುವುದು, ಪಾಲಿಸುವುದು ಎಲ್ಲಾ ರಾಜಕೀಯ ಪಕ್ಷಗಳ, ವ್ಯಕ್ತಿಗಳ ಕರ್ತವ್ಯ ಎಂದರು.
ಅವಕಾಶ ವಂಚಿತರ ಪರವಾಗಿ, ಧ್ವನಿ ಇಲ್ಲದವರ ಪರವಾಗಿ ದ್ವನಿ ಎತ್ತಿ ಬೆಂಬಲಿಸುವುದು, ವಸ್ತುನಿಷ್ಠವಾಗಿ ಸುದ್ದಿಗಳನ್ನು ವರದಿ ಮಾಡುವುದು ಪತ್ರಿಕಾ ವೃತ್ತಿಯ ಮೂಲಭೂತ ಮೌಲ್ಯ. ಈ ಮೌಲ್ಯಗಳನ್ನು ಪಾಲಿಸುವುದೇ ಸಂವಿಧಾನಕ್ಕೆ ಕೊಡುವ ಗೌರವ ಎಂದು ಸಿದ್ದರಾಮಯ್ಯ ಹೇಳಿದರು.
ಯಾವುದೇ ಸರ್ಕಾರ ತಪ್ಪು ಮಾಡಿದರೂ ಅದನ್ನು ಹೇಳುವ ಧೈರ್ಯ ಪತ್ರಕರ್ತರಿಗೆ ಇರಬೇಕು. ಸ್ವಾತಂತ್ರ್ಯಾಪೂರ್ವ ದಲ್ಲಿ ದೇಶದ ಅಭಿವೃದ್ಧಿಯ ಚರ್ಚೆ ಮತ್ತು ಕನಸು ಇತ್ತು. ಈಗ ಮಾಧ್ಯಮ ಉದ್ಯಮಿಗಳ ಕೈಗೆ ಸಿಕ್ಕಿ ಕೊಂಡಿದೆ. ಉದ್ಯಮಿಗಳಿಗೆ ಸಮಾಜಮುಖಿಯಾದ ಯಾವ ಕಾಳಜಿಗಳೂ ಇರುವುದಿಲ್ಲ. ಈ ಬಗ್ಗೆ ಪತ್ರಕರ್ತ ಸಮೂಹ ಎಚ್ಚರ ವಹಿಸಬೇಕು. ನನ್ನನ್ನು ಜೆಡಿಎಸ್ ನಿಂದ ಉಚ್ಛಾಟಣೆ ಮಾಡಿದರೇ ಹೊರತು ನಾನು ಜೆಡಿಎಸ್ ಬಿಡಲಿಲ್ಲ. ಹೀಗಾಗಿ ವರದಿ, ವಿಶ್ಲೇಷಣೆ ಮಾಡುವಾಗ ನಾನು ಜೆಡಿಎಸ್ ಪಕ್ಷ ತೊರೆದೆ ಎಂದು ಬರೆಯುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.












Click it and Unblock the Notifications