ರೈತರಿಗೆ ಗುಡ್​ನ್ಯೂಸ್: ರಾಜ್ಯ ಸರ್ಕಾರದಿಂದ ಬೆಳೆ ಪರಿಹಾರ ಹಣ ಬಿಡುಗಡೆ: ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು, ನವೆಂಬರ್‌ 10: ಕರ್ನಾಟಕರ ಸರ್ಕಾರ ಬರ ಪರಿಹಾರ ಹಣ ಬಿಡುಗಡೆ ಮಾಡಿದೆ. 31 ಜಿಲ್ಲೆಗಳ ಬೆಳೆ ನಷ್ಟ ಆಧರಿಸಿ ಎಸ್.ಡಿ.ಆರ್.ಎಫ್ ಅಡಿಯಲ್ಲಿ 324 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಮುಂಗಾರು ವೈಫಲ್ಯದಿಂದ ರೈತರಿಗೆ ಬೆಳೆ ಬೆಳೆಯಲು ಸಾಧ್ಯವಾಗಿಲ್ಲ. ಇದರಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅತಿವೃಷ್ಟಿಯಿಂದ ಬೆಳೆ ನಾಶವಾಗಿದ್ದು, ಬೆಳೆ ಪರಿಹಾರದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ.

ರೈತರಿಗೆ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ನಿಗದಿ ಮಾಡುತ್ತದೆ ಎಂದು ಮಾಧ್ಯಮಗಳ ಪ್ರತಿನಿಧಿಗಳ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಅತಿವೃಷ್ಟಿಯಿಂದ 11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹಾನಿಯಾಗಿದ್ದು, ರೈತರಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದರು. ಇನ್ನೂ ವಾಲ್ಮೀಕಿ ಸಮುದಾಯಕ್ಕೆ ಸಚಿವ ಸ್ಥಾನ ನೀಡುವ ಬಗ್ಗೆ ಕುರಿತು ಸಚಿವ ಸಂಪುಟ ಪುನರ್ ರಚನೆಯಾದಾಗ ಪರಿಗಣಿಸಲಾಗುವುದು ಎಂದರು.

CM Siddaramaiah gave information about the release of crop compensation

ಸಕ್ಕರೆ ಕಾರ್ಖಾನೆ ಮಾಲೀಕರು ಸರ್ಕಾರದ ತೀರ್ಮಾನದ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿ ಅವರ ಸಮ್ಮುಖದಲ್ಲಿಯೇ ಈ ಬಗ್ಗೆ ತೀರ್ಮಾನ ಮಾಡಲಾಗಿದೆ. 50 ರೂ.ಗಳನ್ನು ಎಲ್ಲರೂ ಕೊಡಲೇಬೇಕು. ಕೊಡದಿರುವವರೂ ಕೊಡುತ್ತಾರೆ ಎಂದು ಭಾವಿಸಿದ್ದೇನೆ ಎಂದರು. ಬಸನಗೌಡ ಪಾಟೀಲ ಯತ್ನಾಳ್ ಅವರು ಸಹ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸರ್ಕಾರದ ಆದೇಶ ಪಾಲಿಸದ ಸಕ್ಕರೆ ಕಾರ್ಖಾನೆ ಮಾಲೀಕರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಬ್ರಿಟಿಷರ ಕಾಲದಲ್ಲಿಯೇ ಆರ್.ಎಸ್.ಎಸ್ ಇತ್ತು , ಆಗಲೇ ನೋಂದಣಿ ಮಾಡಿಕೊಳ್ಳಬೇಕಿತ್ತು ಎಂಬ ಬಗ್ಗೆ ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಆರ್.ಎಸ್.ಎಸ್. ನ್ನು ಹೊರಗಿಡುವ ಬಗ್ಗೆ ಸರ್ಕಾರದ ಆದೇಶದಲ್ಲಿ ಹೇಳಿಲ್ಲ. ಯಾವುದೇ ಸಂಘ ಸಂಸ್ಥೆಗಳು ಆಯಾ ಜಿಲ್ಲಾಧಿಕಾರಿಗಳ ಬಳಿ ಅನುಮತಿ ಪಡೆಯಬೇಕು ಎಂದು ಹೇಳಿದೆ. ಅವರು ಹಾಗೆ ಭಾವಿಸಿಕೊಂಡಿದ್ದಾರೆ ಎಂದರು. ಭಾಗವತ್ ಹೇಳಿದ್ದಕ್ಕೆಲ್ಲ ನಾವು ಉತ್ತರಿಸಲಾಗುವುದಿಲ್ಲ ಎಂದರು.

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ಬಗ್ಗೆ ಮಾತನಾಡಿ ಸಂಬಂಧಪಟ್ಟ ಅಧಿಕಾರಿಗಳು ರಜೆಯ ಮೇಲೆ ತೆರಳಿದ್ದರು. ಇಂದು ಗೃಹ ಸಚಿವರು ಈ ಬಗ್ಗೆ ಸಭೆ ಕರೆದಿದ್ದಾರೆ. ತಪ್ಪು ಮಾಡಿದವರ ಮೇಲೆ ಗಂಭೀರ ಕ್ರಮ ಕೈಗೊಳ್ಳಲಾಗುವುದು ಹಾಗೂ ಇನ್ನೂ ಮುಂದೆ ಇಂಥದ್ದು ನಡೆಯದಂತೆ ಕ್ರಮ ವಹಿಸಲಾಗುವುದು ಎಂದರು. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಪ್ರಕರಣ ನ್ಯಾಯಾಲಯದಲ್ಲಿದ್ದು, ಎಂದು ಮಾಡಬೇಕೆಂದು ಸೂಚಿಸಲಾಗುವುದೋ ಆಗ ಚುನಾವಣೆ ನಡೆಸಲಾಗುವುದು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+