19,000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ: ರೈತರಿಗೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟ ಸರ್ಕಾರ!

ಪಂಪ್‌ಸೆಟ್‌ಗೆ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಭರ್ಜರಿ ಗುಡ್‌ನ್ಯೂಸ್ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ನಮ್ಮ ಸರ್ಕಾರ ಪ್ರತಿ ವರ್ಷ ₹19,000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದೆ. ಹಿಂದಿನ ಬಿಜೆಪಿ ಸರ್ಕಾರದ ಎರಡು ವರ್ಷಗಳಲ್ಲಿ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬಂದು ಜಾರಿ ಮಾಡಿದ್ದೇವೆ. ಇಂದು (ಜೂನ್‌ 11) ನಾನು ಉದ್ಘಾಟನೆ ಮಾಡಿರುವ 70 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯ ಸೌರೀಕರಣ ಘಟಕದಿಂದ ರೈತರಿಗೆ ಹಗಲಿನಲ್ಲೇ 3 ಫೇಸ್ ವಿದ್ಯುತ್ ಅನ್ನು 5 ಗಂಟೆಗಳ ಕಾಲ ಒದಗಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ ನೀಡಿ, 'ಲಿಪಿ-ಮನೆ' ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದ್ದಾರೆ. ಸಂಪೂರ್ಣ ಗುಣಮಟ್ಟದ ವಿದ್ಯುತ್ ರೈತರ ಪಂಪ್ ಸೆಟ್‌ಗಳಿಗೆ ಸಿಗುತ್ತಿರುವುದರಿಂದ ವಿದ್ಯುತ್ ಅಪವ್ಯಯ ಆಗುವುದು ತಪ್ಪಿದೆ. ಹೆಸರಿಗೆ ಇದು ಕೇಂದ್ರದ ಯೋಜನೆ. ಆದರೆ ರಾಜ್ಯ ಸರ್ಕಾರ ಶೇ.50 ರಷ್ಟು ಹಣ ಕೊಡುತ್ತದೆ. ಶೇ.20 ರಷ್ಟು ಹಣ ಹೂಡಿಕೆದಾರರದ್ದು. ಕೇಂದ್ರ ಸರ್ಕಾರ ಕೊಡುವುದು ಕೇವಲ ಶೇ.30 ರಷ್ಟು ಹಣ ಮಾತ್ರ. ಆದರೂ ಇದಕ್ಕೆ ಕೇಂದ್ರದ ಯೋಜನೆ ಎಂದು ಹೆಸರಿಟ್ಟಿದ್ದಾರೆ. ಒಂದು ಮೆವ್ಯಾ ವಿದ್ಯುತ್ ಉತ್ಪಾದನೆಗೆ 3 ಕೋಟಿ ಖರ್ಚಾದರೆ ಒಂದು ಕೋಟಿ ಮಾತ್ರ ಕೇಂದ್ರ ಸರ್ಕಾರದ್ದು. ಉಳಿದದ್ದಷ್ಟನ್ನೂ ನಾವು ಕೊಡುತ್ತೇವೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

CM Siddaramaiah gives great good news to farmers by connecting electricity to farmers pump sets

ನಾವು ಅಧಿಕಾರಕ್ಕೆ ಬಂದು 4 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ ಹೆಚ್ಚಿಸಿದ್ದೇವೆ. ಈಗ ಒಟ್ಟು 30 ಸಾವಿರ ಮೆ.ವ್ಯಾ ಉತ್ಪಾದನೆ ಆಗುತ್ತಿದೆ. ಮುಂದಿನ ಮೂರು ವರ್ಷಗಳಲ್ಲಿ 60 ಸಾವಿರ ಮೆ.ವ್ಯಾ ಗೆ ಉತ್ಪಾದನೆ ಹೆಚ್ಚಿಸುವ ಗುರಿ ಹೊಂದಿದ್ದೇವೆ. ಆ ಮೂಲಕ ರೈತರ ಬಹು ದೊಡ್ಡ ಸಂಕಷ್ಟಕ್ಕೆ ಪರಿಹಾರ ಒದಗಿಸಿಕೊಡುತ್ತಿದ್ದೇವೆ.

ನಾವು ಚುನಾವಣೆಗೂ ಮೊದಲು ಕೊಟ್ಟಿದ್ದ ಭರವಸೆಗಳಲ್ಲಿ ಬಹುಪಾಲನ್ನು ಈಗಾಗಲೇ ಈಡೇರಿಸಿ ರಾಜ್ಯದ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ್ದದ್ದೆಲ್ಲವನ್ನೂ ಈಡೇರಿಸಿ ನುಡಿದಂತೆ ನಡೆಯುವ ನಮ್ಮ ಪರಂಪರೆಯನ್ನು ಮುಂದುವರಿಸುತ್ತೇವೆ.

ಮುಂದಿನ ಬಜೆಟ್‌ನಲ್ಲಿ ಗೌರಿಬಿದನೂರಿಗೆ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಅಲಿಪುರ ಗ್ರಾಮ ಪಂಚಾಯ್ತಿಯನ್ನು ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೆ ಏರಿಸಲಾಗುವುದು. ಶಾಸಕ ಪುಟ್ಟಸ್ವಾಮಿಗೌಡರು ಮತ್ತು ಶಿವಶಂಕರ ರೆಡ್ಡಿಯವರು ಮುಂದಿಟ್ಟಿರುವ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+