ಮೋದಿ 3.0 ಆಡಳಿತಕ್ಕೆ ವರ್ಷದ ಸಂಭ್ರಮ: ಸಿದ್ದರಾಮಯ್ಯ ಕೊಟ್ಟ ಮಾರ್ಕ್ಸ್‌ ಎಷ್ಟು ಗೊತ್ತಾ?

ಮೈಸೂರು, ಜೂನ್ 9: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ಕೇಂದ್ರದಲ್ಲಿ ಸತತ ಮೂರನೇ ಅವಧಿಯ ಮೊದಲ ವರ್ಷವನ್ನು ಪೂರ್ಣಗೊಳಿಸಿದೆ, ನರೇಂದ್ರ ಮೋದಿ ದೇಶದ ಚುಕ್ಕಾಣಿ ಹಿಡಿದು ಇಂದಿಗೆ ಬರೋಬ್ಬರಿ 11 ವರ್ಷ ಪೂರ್ಣಗೊಂಡಿವೆ. 11 ವರ್ಷ ಅಧಿಕಾರ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಕ್ಸ್‌(ಅಂಕ)ಡಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಸೊನ್ನೆ ಅಂಕ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೋದಿ ಅವರು ಪ್ರಚಾರದಿಂದ ಬದುಕಿರುವುದು. ನೋಟು ಅಮಾನ್ಯೀಕರಣದಿಂದ ಯಾರಿಗೆ ಅನುಕೂಲವಾಗಿದೆ? ಅಚ್ಚೆ ದಿನ್ ಆಯೇಗಾ , ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಕೊಡುತ್ತೇನೆ ಎಂದರು. ರೈತರ ಸಮಸ್ಯೆ ಬಗೆಹರಿಸುತ್ತೇನೆ ಎಂದರು. ರೈತರು ಒಂದು ವರ್ಷ ಕಾಲ ಚಳುವಳಿಯನ್ನು ಏಕೆ ಮಾಡಿದರು ಎಂದು ಪ್ರಶ್ನಿಸಿದರು. ಪ್ರಧಾನ ಮಂತ್ರಿಗಳು ಪ್ರಮುಖವಾಗಿ ಏನು ಹೇಳಿದ್ದರೋ ಅದನ್ನು ಮಾಡಿಲ್ಲ. ಹನ್ನೊಂದು ವರ್ಷ ತುಂಬಿಸಿದ್ದಾರೆ ಅಷ್ಟೇ ಎಂದು ತಿಳಿಸಿದರು.

CM Siddaramaiah Gives Zero Marks To PM Modi Government

ಪ್ರಧಾನಿ ನರೇಂದ್ರ ಮೋದಿ ಅವರು ಮಾಧ್ಯಮಗಳು ಅವರಿಗೆ ಹೆಚ್ಚಿನ ಪ್ರಚಾರ ನೀಡುತ್ತಿವೆ. ಅವುಗಳ ಮೂಲಕ ಸುಳ್ಳು ವಿಚಾರಗಳಿಗೆ ಪ್ರಚಾರ ನೀಡುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆ ಗಳನ್ನು ಘೋಷಣೆ ಮಾಡಿದಾಗ ಇದನ್ನು ಅನುಷ್ಠಾನ ಮಾಡಲಾಗುವುದಿಲ್ಲ,ರಾಜ್ಯ ಸರ್ಕಾರ ದಿವಾಳಿಯಾಗುತ್ತದೆ ಎಂದವರು ಅದನ್ನೇ ನಕಲು ಮಾಡಿದರು ಎಂದರು. ರಾಜಸ್ಥಾನ, ಉತ್ತರ ಪ್ರದೇಶ, ದೆಹಲಿಯಲ್ಲಿ ಅದನ್ನೇ ಜಾರಿ ಮಾಡಿದರು. ಗುಜರಾತ್ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಶೇ.50ರಷ್ಟು ತೆರಿಗೆ ಹಂಚಿಕೆ ಮಾಡಿದರು. ಇವರೇ ಪ್ರಧಾನಿಗಳಾದಾಗ ಏನು ಮಾಡಿದರು? ಎಂದು ಪ್ರಶ್ನಿಸಿದರು.

ನಿರ್ಮಲಾ ಸೀತಾರಾಮನ್ 5300 ಕೋಟಿಗಳನ್ನು ಕೊಡುವುದಾಗಿ ಘೋಷಿಸಿ ಕೊಡಲಿಲ್ಲ. 15 ನೇ ಹಣಕಾಸು ಆಯೋಗದವರು 11495 ಕೋಟಿ ಕೊಡಬೇಕು ಎಂದು ಶಿಫಾರಸ್ಸು ಮಾಡಿದರೂ ಕೊಡಲಿಲ್ಲ. ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಬಿಜೆಪಿ ಪ್ರಶ್ನೆ ಮಾಡುವುದನ್ನು ಬಿಟ್ಟು ಅಪಪ್ರಚಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+