ಸಿಎಂಗೆ ನೋಟಿಸ್: ಸಿದ್ದರಾಮಯ್ಯ ಪ್ರಾಸಿಕ್ಯೂಶನ್ ಬಗ್ಗೆ ರಾಜ್ಯಪಾಲರ ನಿರ್ಧಾರ ಬಗ್ಗೆ ಕುತೂಹಲ
ಬೆಂಗಳೂರು, ಆಗಸ್ಟ್ 05: ರಾಜ್ಯ ಸರ್ಕಾರ ಮುಡಾ ಹಾಗೂ ವಾಲ್ಮಿಕಿ ಹಗರಣ ಆರೋಪ ಎದುರಿಸುತ್ತಿದೆ. ಸಿಎಂ ಸಿದ್ದರಾಮಯ್ಯನವರ ಕೊರಳಿಗೆ ಸುತ್ತಿಕೊಂಡಿದೆ. ಮತ್ತೊಂದೆಡೆ ಸಿಎಂ ವಿರುದ್ಧ ಶೋಕಾಸ್ ನೋಟಿಸ್ ಜಾರಿ ಮಾಡಿದ್ದ ರಾಜ್ಯಪಾಲರು ಇಂದು ಸೋಮವಾರ ಬೆಂಗಳೂರಿಗೆ ಮರಳಲಿದ್ದಾರೆ. ಅವರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಿದ್ದಾರೆಯೇ? ಎಂಬುದು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಾಗುವಂತೆ ಮಾಡಿದೆ.
ಜುಲೈ 26ರಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ದೆಹಲಿ ಪ್ರವಾಸ ಕೈಗೊಂಡರು. ಅಲ್ಲಿಂದ ಅವರು ಇಂದು ಸೋಮವಾರ ಆಗಸ್ಟ್ 5ರಂದು ರಾಜಧಾನಿಗೆ ಮರಳಿದ್ದಾರೆ.

ಇದೇ ವೇಳೆ ದಾಖಲಾದ ದೂರಿನ ಮೇರೆಗೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಇದೀಗ ಪ್ರವಾಸ ಮುಗಿಸಿ ವಾಪಾಸಾಗಿದ್ದು, ನೋಟಿಸ್ ಮುಂದಿನ ಪ್ರಕ್ರಿಯೆ ಕುರಿತು, ದೂರಿನ ಬಗ್ಗೆ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ? ಈ ಪ್ರಶ್ನೆಗಳಿಗೆ ಉತ್ತರ ಸಿಗಲಿದೆ.
ಅನುಮತಿ ನೀಡಿದರೆ ಏನಾಗಲಿದೆ?
ಸದ್ಯ ದೆಹಲಿ ಪ್ರವಾಸದಿಂದ ರಾಜ್ಯಪಾಲರು ಮರಳಿದ್ದಾರೆ. ಒಂದು ವೇಳೆ ಅವರು ಸಿಎಂ ವಿರುದ್ಧ ತನಿಖೆಗೆ ಅನುಮತಿಸಿದ್ದೆ ಆದಲ್ಲಿ ಸಾರ್ವಜನಿಕವಾಗಿ ಕೋಲಾಹಲಕ್ಕೆ ಎಡೆ ಮಾಡಿಕೊಟ್ಟಂತಾಗಬಹುದು.
ಅಲ್ಲದೇ ದೆಹಲಿಯಲ್ಲಿ ಸಂಸತ್ ಅಧಿವೇಶನ ನಡೆಯುತ್ತದೆ. ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿಸಿದರೆ, ಸದನದಲ್ಲಿ ಪ್ರತಿಪಕ್ಷಗಳು ಕೋಲಾಹಲ ಎಬ್ಬಿಸಬಹುದು. ಹೀಗಾಗಿ ಅಧಿವೇಶನ ಮುಗಿಯುವವರೆಗೂ ಕಾದು ನಂತರ ರಾಜ್ಯಪಾಲರು ತಮ್ಮ ನಿರ್ಧಾರ ಪ್ರಕಟಿಸಬಹುದು ಅಂತಲೂ ಅಂದಾಜಿಸಲಾಗಿದೆ.
ಶೋಕಾಸ್ ನೋಟಿಸ್ ಜಾರಿ ಬಳಿಕ ಆಗಿದ್ದೇನು?
ಮುಡಾ ಹಗರಣದಲ್ಲಿ ನೇರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ, ಅವರ ಕುಟುಂಬದವರ ಹೆಸರಲ್ಲಿ ನಿವೇಶನ ಹಂಚಿಕೆ ಆಗಿದೆ ಎಂಬ ಆರೋಪ ಬಲವಾಗಿ ಕೇಳಿ ಬಂದಿತ್ತು. ಇದಾಗುತ್ತಿದ್ದಂತೆ ಸಾಮಾಜಿಕ ಕಾರ್ಯಕರ್ತ ಇಬ್ರಾಹಂ ಅವರು ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ (ತನಿಖೆ, ಕಾನೂನು ಕ್ರಮ) ಒಳಪಡುವಂತೆ ಅನುಮತಿ ನೀಡುವಂತೆ ಅವರು ದೂರಿನಲ್ಲಿ ಕೋರಿದ್ದರು.
ಜುಲೈ 26ರಂದು ಸಿಎಂ ವಿರುದ್ಧ ದೂರು ದಾಖಲಾದ ದಿನವೇ ರಾಜ್ಯಪಾಲರು ಸಿದ್ದರಾಮಯ್ಯ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದರು. ಇದರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕರು ಸಿಎಂ ಬೆನ್ನಿಗೆ ನಿಂತಿದ್ದಾರೆ. ಅಲ್ಲದೇ ಸಂಪುಟ ಸಭೆ ನಡೆಸಿ ನೋಟಿಸ್ ಹಿಂಡೆಯುವಂತೆ ಮನವಿ ಮಾಡಿದ್ದಾರೆ. ರಾಜ್ಯಪಾಲರು ಇಲ್ಲದ್ದರಿಂದ ಮನವಿಯು ರಾಜಭವನ ತಲುಪಿದ್ದು, ಪ್ರತ್ಯೇಕವಾಗಿ ಸಿಎಂ ಸಿದ್ದರಾಮಯ್ಯ ಸಹ ಕೋರಿದ್ದಾರೆ.
ಕಾನೂನಾತ್ಮಕ ಹೋರಾಟಕ್ಕೆ ನಿರ್ಧಾರ
ಒಂದು ವೇಳೆ ನೋಟಿಸ್ ಹಿಂಪಡೆಯದಿದ್ದರೆ, ರಾಜ್ಯಪಾಲರು ಸ್ಪಷ್ಟನೆ ನೀಡಬೇಕಾಗುತ್ತದೆ. ಸರ್ಕಾರ ಈ ಬಗ್ಗೆ ರಾಜ್ಯಪಾಲರಿಗೆ ಸಲಹೆ ನೀಡಲಿದೆ. ಅಂದುಕೊಂಡಂತೆ ಆಗದಿದ್ದರೆ ಸರ್ಕಾರ ಕಾನೂನಿನ ಮೂಲಕವೇ ಈ ಪ್ರಕ್ರಿಯೆಯನ್ನು ಎದುರಿಸಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.












Click it and Unblock the Notifications