ರಾಜ್ಯದಲ್ಲಿ ಉದ್ಯಮ ಬೆಳವಣಿಗೆಗೆ ಸರ್ಕಾರದ ಕ್ರಮಗಳೇನು?: ಸಿಎಂ ಸಿದ್ದರಾಮಯ್ಯ ಸುದೀರ್ಘ ವಿವರಣೆ

ಬೆಂಗಳೂರು, ನವೆಂಬರ್‌ 19: ರಾಜ್ಯದಲ್ಲಿ ಉದ್ಯಮ ವಲಯದ ಬೆಳವಣಿಗೆ ಉತ್ತೇಜಿಸಲು ಬೆಂಗಳೂರು, ಮೈಸೂರು ಮತ್ತು ಬೆಳಗಾವಿಗಳಲ್ಲಿ ಮೂರು ಜಾಗತಿಕ ನಾವೀನ್ಯತಾ ಪಾರ್ಕ್ ಗಳನ್ನು (ಗ್ಲೋಬಲ್ ಇನ್ನೊವೇಷನ್ ಡಿಸ್ಟ್ರಿಕ್ಟ್ಸ್) ಸ್ಥಾಪಿಸುವ ಜೊತೆಗೆ ಮೈಸೂರಿನ ಕೋಚನಹಳ್ಳಿಯಲ್ಲಿ ಎಲೆಕ್ಟ್ರಾನಿಕ್ ತಯಾರಿಕಾ ಕ್ಲಸ್ಟರ್ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅರಮನೆ ಮೈದಾನದಲ್ಲಿ ಮೂರು ದಿನಗಳ ಬೆಂಗಳೂರು ತಂತ್ರಜ್ಞಾನ ಶೃಂಗ-24ವನ್ನು (27ನೇ ಆವೃತ್ತಿ) ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಸ್ಥಾಪಿಸಲಿರುವ ಈ ಮೂರು ಜಾಗತಿಕ ನಾವೀನ್ಯತಾ ಪಾರ್ಕ್ ಗಳು ಜಿ.ಸಿ.ಸಿ.ಗಳಿಗೆ (ಗ್ಲೋಬಲ್ ಕೇಪಬಿಲಿಟಿ ಸೆಂಟರ್) ತಮ್ಮ ಕೇಂದ್ರಗಳನ್ನು ತೆರೆದು ಕಾರ್ಯಾಚರಣೆ ಆರಂಭಿಸಲು ಅನುವು ಮಾಡಿಕೊಡಲಿವೆ ಎಂದು ಹೇಳಿದರು.

CM Siddaramaiah Has Given Explanation About Growth Of Industry In The State

ರಾಜ್ಯದ ಸೆಮಿಕಂಡಕ್ಟರ್ ಉತ್ಪಾದಕತೆಯನ್ನು ಕೋಚನಹಳ್ಳಿಯಲ್ಲಿಯ ಎಲೆಕ್ಟ್ರಾನಿಕ್ಸ್ ಮ್ಯಾನಫ್ಯಾಕ್ಚರಿಂಗ್ ಕ್ಲಸ್ಟರ್ ಸದೃಢಗೊಳಿಸಲಿದೆ. ಇದು ಉದ್ಯೋಗಗಳನ್ನು ಸೃಷ್ಟಿಸುವ ಜೊತೆಗೆ ನಗರ-ಗ್ರಾಮೀಣ ಸಮಾನತೆಯನ್ನು ತರುವುದಕ್ಕೂ ಸಹಾಯಕವಾಗಲಿದೆ ಎಂದರು.

ಈ ವೇಳೆ ದೇಶದಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ರೂಪಿಸಲಾಗಿರುವ 'ಜಿಸಿಸಿ ಕಾರ್ಯನೀತಿ'ಯನ್ನು ಸಿಎಂ ಅನಾವರಣಗೊಳಿಸಿದರು. ಈ ಕುರಿತು ಮಾತನಾಡಿದ ಅವರು, ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ ಈಗ ಇರುವ 875 ಜಿಸಿಸಿ ಘಟಕಗಳ ಜೊತೆಗೆ ಇನ್ನೂ 500 ಜಿಸಿಸಿ ಘಟಕಗಳ ಸ್ಥಾಪನೆ, 3.5 ಲಕ್ಷ ಉದ್ಯೋಗಗಳ ಸೃಷ್ಟಿ ಹಾಗೂ ಆರ್ಥಿಕ ಉತ್ಪಾದನೆಯನ್ನು 50 ಶತಕೋಟಿ ಡಾಲರ್ ಗಳಷ್ಟು ಹೆಚ್ಚಿಸುವ ಗುರಿಯನ್ನು ಜಿಸಿಸಿ ಕಾರ್ಯನೀತಿ ಹೊಂದಿದೆ ಎಂದು ವಿವರಿಸಿದರು.

CM Siddaramaiah Has Given Explanation About Growth Of Industry In The State

ಮಂಗಳೂರನ್ನು ಫಿನ್ ಟೆಕ್ ವಲಯವನ್ನಾಗಿ, ಹುಬ್ಬಳ್ಳಿ-ಧಾರವಾಡ ಇವಿ ವಲಯವನ್ನಾಗಿ ಹಾಗೂ ಮೈಸೂರನ್ನು ಡ್ರೋನ್ ವಲಯವನ್ನಾಗಿ ರೂಪಿಸಲು ಸರ್ಕಾರ ಒತ್ತು ನೀಡಲಿದೆ. ನಾವೀನ್ಯತೆ, ಸುಸ್ಥಿರತೆ ಮತ್ತು ಎಲ್ಲರನ್ನೂ ಒಳಗೊಳ್ಳುವ ಬೆಳವಣಿಗೆಗೆ ಸರ್ಕಾರ ಬದ್ಧವಾಗಿದ್ದು, ಉದ್ಯಮದ ಬೆಳವಣಿಗೆಗೆ ಒತ್ತಾಸೆಯಾಗಿ ನಿಲ್ಲಲಿದೆ ಎಂದರು.

20ನೇ ಶತಮಾನದ ಆರಂಭಿಕ ಅವಧಿಯಲ್ಲಿ ರಕ್ಷಣಾ ಸಾಮಗ್ರಿಗಳ ತಯಾರಿಕೆ ಹಾಗೂ ವೈಮಾಂತರಿಕ್ಷ ಉದ್ದಿಮೆಗಳ ಮೂಲಕ ಗಮನಸೆಳೆದ ಬೆಂಗಳೂರು ಈಗ ಮಾಹಿತಿ ತಂತ್ರಜ್ಞಾನ ಮತ್ತು ಸ್ಟಾರ್ಟ್ ಅಪ್ ನೆಲೆಯಾಗಿ ಬೆಳೆದಿದೆ. ಐಟಿ, ಡೀಪ್ ಟೆಕ್, ಬಯೋಟೆಕ್, ಜೀವಿವಿಜ್ಞಾನಗಳು. ಬಯೋಮ್ಯಾನಫ್ಯಾಕ್ಚರಿಂಗ್, ಅಡ್ವಾನ್ಸ್ಡ್ ಮ್ಯಾನಫ್ಯಾಕ್ಚರಿಂಗ್ ಇತ್ಯಾದಿಗಳಿಗೆ ನಗರವು ಹೆಸರಾಗಿದೆ. ಅಲ್ಲದೆ, ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಎಂಜಿನಿಯರಿಂಗ್ ಪ್ರತಿಭೆಗಳು ಹಾಗೂ ಎಐ ವೃತ್ತಿಪರರು ಇರುವ ನಗರವೂ ಇದಾಗಿದೆ ಎಂದರು.

ಬೆಂಗಳೂರು ವಿಮಾನ ನಿಲ್ದಾಣದಿಂದ 50 ಕಿ.ಮೀ. ನಿಲ್ದಾಣದಲ್ಲಿ ನಾವೀನ್ಯತೆಯ ಪರಿಕಲ್ಪನೆಯಿಂದ ಕೂಡಿಡ 'ಕ್ವಿನ್ ಸಿಟಿ' ನಿರ್ಮಾಣವಾಗಲಿದೆ. ಇದರ ಜೊತೆಗೆ ನಮ್ಮ ಗ್ರಾಮ, ನಮ್ಮ ರಸ್ತೆ, ಬಿಯಾಂಡ್ ಬೆಂಗಳೂರುದಂತಹ ಉಪಕ್ರಮಗಳು ರಾಜ್ಯದ ಸಮತೋಲಿತ ಬೆಳವಣಿಗೆಗೆ ಪೂರಕವಾಗಲಿವೆ ಎಂದು ಸಿದ್ದರಾಮಯ್ಯ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+