Get Updates
Get notified of breaking news, exclusive insights, and must-see stories!

ಪ್ರಬಲ ಸಮುದಾಯ ಒತ್ತಡದಿಂದ ಸಿಎಂ ಜಾತಿ ಗಣತಿ ವರದಿ ಸ್ವೀಕರಿಸುತ್ತಿಲ್ಲ

ಚಾಮರಾಜನಗರ, ಡಿಸೆಂಬರ್ 17: ಎರಡು ಪ್ರಬಲ ಸಮುದಾಯಗಳ ಒತ್ತಡದಿಂದ ಜಾತಿ ಗಣತಿ ವರದಿಯನ್ನು ಸ್ವೀಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೇಟು ಹಾಕುತ್ತಿದ್ದಾರೆ. ಜಾತಿಗಣತಿ ವರದಿ ಸ್ವೀಕಾರದ ವಿಚಾರದಲ್ಲಿ ನುಡಿದಂತೆ ನಡೆಯಬೇಕು ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಹೇಳಿದರು.

ಸ್ಥಳೀಯ ಮಟ್ಟದಲ್ಲಿ ಪಕ್ಷ ಸಂಘಟನೆಯಲ್ಲಿ ನಿರತರಾಗಿರುವ ಮುಖ್ಯಮಂತ್ರಿ ಚಂದ್ರು ಅವರು ಭಾನುವಾರ ಚಾಮರಾಜನಗರ ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದರು. ಈ ಸಂದರ್ಭ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.

CM Siddaramaiah has Not Received Caste Census Report Due To Two Community Pressure, AAP Says

ಜಾತಿ ಗಣತಿ ವರದಿಯನ್ನು ಸ್ವೀಕರಿಸಲು ನಿರಾಕರಿಸುವ ಮೂಲಕ 250ಕ್ಕೂ ಹೆಚ್ಚು ಜಾತಿಯವರಿಗೆ ಅನ್ಯಾಯ ಮಾಡುತ್ತಿದ್ದಾರೆ. ನಮ್ಮ ಜಾತಿಯಲ್ಲಿ ಎಷ್ಟು ಜನಸಂಖ್ಯೆ ಇದ್ದಾರೆ ಎಂಬುದು ನಮಗೆ ತಿಳಿಯದಿದ್ದರೆ ನಮ್ಮ ಸಮುದಾಯಕ್ಕೆ ಸಿಗುತ್ತಿರುವ ಮೀಸಲಾತಿಯನ್ನು ಖಚಿತ ಪಡಿಸಿಕೊಳ್ಳುವುದು ಹೇಗೆ? ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಸರ್ಕಾರ ಬೀಳುತ್ತದೆಂದು ವರದಿ ನಕಾರ

ಪರಿಶಿಷ್ಟ ಜಾತಿ-ಪಂಗಡ, ಒಬಿಸಿ, ಅಲ್ಪಸಂಖ್ಯಾತ ಸಮುದಾಯದವರು ಎಲ್ಲರೂ ಜಾತಿಗಣತಿ ವರದಿಯನ್ನು ಬಿಡುಗಡೆಗೊಳಿಸುವಂತೆ ಹೋರಾಟ ಮಾಡಬೇಕು. ಸಿದ್ದರಾಮಯ್ಯ ಅವರು ಹಿಂದಿನ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರವೆಲ್ಲಿ ಬಿದ್ದುಹೋಗುತ್ತದೋ ಎಂಬ ಭಯದಿಂದ ವರದಿಯನ್ನು ಸ್ವೀಕರಿಸಲಿಲ್ಲ.

ಈ ಬಾರಿ ಚುನಾವಣೆ ಪೂರ್ವದಲ್ಲೇ ಜಾತಿಗಣತಿ ವರದಿ ಸ್ವೀಕರಿಸುವುದಾಗಿ ಹೇಳಿದ್ದಾರೆ. ನುಡಿದಂತೆ ನಡೆಯುವ ಸರ್ಕಾರ ಎಂದು ಬಿಂಬಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ ಅವರು ಜಾತಿಗಣತಿ ವರದಿಯನ್ನು ಸ್ವೀಕರಿಸುವ ಮೂಲಕ ತಮ್ಮ ಮಾತಿನಂತೆ ನಡೆಯಬೇಕು ಎಂದು ಮುಖ್ಯಮಂತ್ರಿ ಚಂದ್ರು ಅವರು ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದರು.

ಕನ್ನಡದಲ್ಲೇ ಸಹಿ ಹಾಕಬೇಕು: ಸಿಎಂಗೆ ಆಗ್ರಹ

ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷ ಸಂದಿರುವ ಸಂದರ್ಭದಲ್ಲಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಶಾಸಕರಿಗೆ ಕನ್ನಡದಲ್ಲೇ ಸಹಿ ಹಾಕಬೇಕು ಎನ್ನುತ್ತಿದ್ದಾರೆ. ಕನ್ನಡ ಅಸ್ಮಿತೆ ಬಗ್ಗೆ ಭಾಷಣ ಮಾಡುತ್ತಾರೆ. ಆದರೆ ಇದೆಲ್ಲವೂ ಬಾಯಿಯಲ್ಲಿ ಮಾತ್ರ, ಕೃತಿಯಲ್ಲಿ ಇಲ್ಲ ಎಂದು ಅವರು ಆರೊಪಿಸಿದರು.

CM Siddaramaiah has Not Received Caste Census Report Due To Two Community Pressure, AAP Says

ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಅನ್ಯಾಯವಾಗಿದೆ. ಅನುದಾನ ಕನಿಷ್ಠ ಮಟ್ಟಕ್ಕೆ ಇಳಿದಿದ್ದು, ಮಂಜೂರಾದ ಹಣ ಇದುವರೆಗೆ ಬಿಡುಗಡೆಯಾಗಿಲ್ಲ. ಪ್ರಾಧಿಕಾರಗಳಿಗೆ ಅಧ್ಯಕ್ಷರ ನೇಮಕವಾಗಿಲ್ಲ. ರಂಗಾಯಣವನ್ನು ಕಡೆಗಣಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇಂಡಿಯಾ ಮೈತ್ರಿ ಭಾಗವಾಗಿ 1-2 ಸ್ಥಾನದ ಬೇಡಿಕೆ

ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನವನ್ನು ಉಳಿಸುವುದಕ್ಕಾಗಿ ರಾಷ್ಟ್ರಮಟ್ಟದ 'ಇಂಡಿಯಾ' ಮೈತ್ರಿಕೂಟದ ಸದಸ್ಯರಾಗಿದ್ದೇವೆ. ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಮೈತ್ರಿ ಭಾಗವಾಗಿ 1-2 ಸ್ಥಾನವನ್ನು ಎಎಪಿಗೆ ಬಿಟ್ಟುಕೊಡುವಂತೆ ಬೇಡಿಕೆ ಮುಂದಿಡುತ್ತೇವೆ. ಸ್ಥಳೀಯ ಚುನಾವಣೆಗಳಲ್ಲಿ ಹಾಗೂ ವಿಧಾನಸಭೆ ಚುನಾವಣೆಗಳಲ್ಲಿ ಸ್ವತಂತ್ರವಾಗಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ.

ಕಳೆದ 75 ವರ್ಷಗಳಿಂದ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ಸರ್ಕಾರಗಳಿಂದ ಜನರು ಬೇಸತ್ತಿದ್ದಾರೆ. ಕಳೆದ 5 ವರ್ಷಗಳ ದುರಾಡಳಿತ, ಭ್ರಷ್ಟಾಚಾರದಿಂದ ಬಿಜೆಪಿಯನ್ನು ಜನರು ತಿರಸ್ಕರಿಸಿದ್ದಾರೆ. ಜೆಡಿಎಸ್‌ನ ವಂಶರಾಜಕಾರಣದಿಂದ ಬೇಸತ್ತು, ಅನಿವಾರ್ಯವಾಗಿ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ. ಹಾಗಾಗಿ ಕಾಂಗ್ರೆಸ್‌ ಪಕ್ಷವು ತನ್ನ ಪರ ಜನತೆಯಿದೆ ಎಂದುಕೊಂಡರೆ ಅದು ಮೂರ್ಖತನ ಎಂದು ತಿಳಿಸಿದರು.

ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಅರವಿಂದ ಕೇಜ್ರಿವಾಲ್‌ ಅವರ ದೆಹಲಿ ಸರ್ಕಾರ ಮಾದರಿ ಸರ್ಕಾರವಾಗಿದೆ. ಕಳೆದ 8 ವರ್ಷಗಳಿಂದ ಅಲ್ಲಿನ ನಾಗರಿಕರಿಗೆ ಗುಣಮಟ್ಟದ ಮೂಲಭೂತ ಸೌಲಭ್ಯಗಳು ಸಿಗುತ್ತಿವೆ. ಬಡವರು, ಮಧ್ಯವರ್ಗದವರು ಸಂತೋಷವಾಗಿದ್ದಾರೆ. ಶಿಕ್ಷಣ, ಚಿಕಿತ್ಸೆ, ಪ್ರಯಾಣ ಎಲ್ಲವೂ ಉಚಿತವಿದ್ದು, ಉತ್ಕೃಷ್ಟ ಗುಣಮಟ್ಟದಿಂದ ಕೂಡಿವೆ. ಕೇಜ್ರಿವಾಲ್‌ ಮಾದರಿಯ ಆಡಳಿತ ನಮ್ಮ ರಾಜ್ಯದಲ್ಲೂ ಬರಬೇಕು. ಅದಕ್ಕಾಗಿ ಎಎಪಿ ಸ್ಥಳೀಯ ಮಟ್ಟದಲ್ಲಿ ಪ್ರಬಲಗೊಳ್ಳಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಎಎಪಿ ರಾಜ್ಯ ಕಾರ್ಯದರ್ಶಿ ಸೋಸ್ಲೆ ಸಿದ್ಧರಾಜು, ಜಿಲ್ಲಾಧ್ಯಕ್ಷ ಹರೀಶ್‌, ಪ್ರಧಾನ ಕಾರ್ಯದರ್ಶಿ ಮಹದೇವ ಪ್ರಸಾದ್‌, ಸಂಘಟನಾ ಕಾರ್ಯದರ್ಶಿ ಮಹದೇವ ಸ್ವಾಮಿ ಮತ್ತಿತರರು ಪಾಲ್ಗೊಂಡಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+