ಬಾಣಂತಿಯರ ಸರಣಿ ಸಾವು, ಸಿಎಂ ಸಿದ್ದರಾಮಯ್ಯ ತೆಗೆದುಕೊಂಡ ಖಡಕ್‌ ಕ್ರಮವೇನು?

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣದ ಬೆನ್ನಲ್ಲೇ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಈ ಕೇಸ್‌ ಸಂಬಂಧಪಟ್ಟಂತೆ ಕರ್ತವ್ಯಲೋಪ ಎಸಗಿದ್ದಕ್ಕಾಗಿ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಇತ್ತೀಚೆಗೆ ಸಂಭವಿಸಿದ ಬಾಣಂತಿಯರ ಸಾವಿನ ಕುರಿತಾಗಿ ಉನ್ನತ ಮಟ್ಟದ ಸಭೆ ನಡೆಸಿ ಈ ಕ್ರಮ ತೆಗೆದುಕೊಂಡಿದ್ದಾರೆ. ರಿಂಗರ್‌ ಲ್ಯಾಕ್ಟೇಟ್‌ ದ್ರಾವಣ ಪೂರೈಸಿರುವ ಪಶ್ಚಿಮ ಬಂಗಾಳದ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕಂಪನಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಆದೇಶಿಸಲಾಗಿದೆ ಎಂದು ಸಿಎಂ ಹೇಳಿದ್ದಾರೆ.

CM Siddaramaiah Held A Meeting Regarding The Death Of Womens At Ballari District Hospital

ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸರ್ಕಾರದಿಂದ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಡ್ರಗ್ ಪೂರೈಸಿದ ಕಂಪೆನಿಯಿಂದಲೂ ಪರಿಹಾರವನ್ನು ವಸೂಲು ಮಾಡಿ, ಮೃತರ ಕುಟುಂಬಕ್ಕೆ ನೀಡಲು ಸೂಚನೆ ನೀಡಲಾಗಿದೆ. ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿರುವ ಈ ರೀತಿಯ ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲು ನಿರ್ಧರಿಸಲಾಗಿದೆ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಬಾಣಂತಿಯರ ಸಾವಿನ ಕುರಿತು ತಜ್ಞರ ಸಮಿತಿ ರಚಿಸಿ ಘಟನಾವಳಿಗಳ ಬಗ್ಗೆ ಪ್ರಾಥಮಿಕ ವರದಿ ಪಡೆಯಲಾಗಿದೆ. ಬಾಣಂತಿಯರಿಗೆ ನೀಡಲಾಗಿರುವ ರಿಂಗರ್‌ ಲ್ಯಾಕ್ಟೇಟ್‌ ದ್ರಾವಣದ ಎಲ್ಲ ಬ್ಯಾಚ್‌ಗಳ ಬಳಕೆಯನ್ನು ಹಿಂಪಡೆಯಲಾಗಿದ್ದು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಳಸಲಾದ ದ್ರಾವಣ ಪರೀಕ್ಷಿಸಲು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದಿದ್ದಾರೆ.

ತಮಿಳುನಾಡು ಮಾದರಿಯಲ್ಲಿ ಔಷಧಿಗಳ ಖರೀದಿ ಪ್ರಕ್ರಿಯೆ ಹಾಗೂ ಔಷಧ ನಿಯಂತ್ರಣ ಇಲಾಖೆಯನ್ನು ಪುನಾರಚನೆ ಮಾಡುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ. ಇನ್ನು ಮುಂದೆ ಈ ರೀತಿಯ ದುರ್ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಎಚ್ಚೆತ್ತುಕೊಂಡಿದ್ದಾರೆ.

CM Siddaramaiah Held A Meeting Regarding The Death Of Womens At Ballari District Hospital

ಪ್ರಯೋಗಾಲಯದ ವರದಿ ಬಂದ ಬಳಿಕ ಘಟನೆಗೆ ಜವಾಬ್ದಾರರಾದ ಪ್ರತಿಯೊಬ್ಬರನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗುತ್ತದೆ. ಡ್ರಗ್‌ ಕಂಟ್ರೋಲರ್‌ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲು ಆದೇಶ ನೀಡಲಾಗಿದೆ. ಔಷಧ ನಿಯಂತ್ರಣ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಹಲವು ರೀತಿಯ ಗಂಭೀರ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಖಡಕ್‌ ಆಗಿ ಸೂಚಿಸಿದ್ದಾರೆ.

ಕರ್ನಾಟಕದ ಆರೋಗ್ಯ ಇಲಾಖೆಯಲ್ಲಿ ಭ್ರಷ್ಟಾಚಾರ, ಸ್ವಜನಪಕ್ಷಪಾತ ಹಾಗೂ ನಿರ್ಲಕ್ಷ್ಯದಿಂದ ಮಕ್ಕಳ ಸಾವು ಸಂಭವಿಸುತ್ತಿದೆ. ತಜ್ಞರ ತಂಡ ಸರ್ಕಾರಿ ಆಸ್ಪತ್ರೆಗಳಲ್ಲಿ ನಿರ್ವಹಣೆ ಕೊರತೆಯಿದೆ ಎಂಬ ವರದಿ ನೀಡಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಹಸುಗೂಸು, ಬಾಣಂತಿಯರ ಸರಣಿ ಸಾವು ಆತಂಕ ಮೂಡಿಸಿದ್ದು, ಅಮಾಯಕರ ಸಾವನ್ನು ಕಾಂಗ್ರೆಸ್ ಸರ್ಕಾರ ಮುಚ್ಚಿಡುತ್ತಿದೆ ಎಂದು ಬಿಜೆಪಿ ಸಚಿವೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯದ ಕಟುಕ ಕಾಂಗ್ರೆಸ್‌ ಸರ್ಕಾರದ ದುರಾಡಳಿತದಿಂದ ಆರೋಗ್ಯ ಇಲಾಖೆ ಅಧೋಗತಿ ತಲುಪಿದ್ದು, ಸರ್ಕಾರಿ ಆಸ್ಪತ್ರೆಗಳೆಲ್ಲ ಸಾವಿನ ಕೇಂದ್ರಗಳಾಗಿವೆ! ಸಚಿವರಾದ ದಿನೇಶ್‌ ಗುಂಡೂರಾವ್‌ ನಿಷ್ಕ್ರಿಯತೆಯಿಂದ ದಾವಣಗೆರೆ ಜಿಲ್ಲೆಯಲ್ಲಿ 135 ಶಿಶುಗಳು, 28 ಬಾಣಂತಿಯರು ಸಾವನ್ನಪ್ಪಿದ್ದರೂ ವಿಚಾರಿಸುವ ಗೋಜಿಗೆ ಹೋಗದಿರುವುದು ನಾಚಿಕೆಗೇಡಿನ ಸಂಗತಿ. ದಿನನಿತ್ಯ ಮಕ್ಕಳು, ತಾಯಂದಿರ ಸಾವಿನ ವರದಿಗಳು ಆಗುತ್ತಿವೆ. ಬಡವರ ಆರೋಗ್ಯದ ಕುರಿತು ಕಾಳಜಿ ವಹಿಸದ ಬೇಜವಾಬ್ದಾರಿ ಸಚಿವರ ತಲೆದಂಡ ಪಡೆಯಿರಿ ಮತ್ತು ಹೊಣೆಗಾರಿಕೆ ನಿಭಾಯಿಸುವಲ್ಲಿ ಎಡವಿರುವ ತಾವು ಕುರ್ಚಿ ಬಿಟ್ಟು ತೊಲಗಿ ಎಂದು ಸಿದ್ದರಾಮಯ್ಯ ಅವರಿಗೆ ತಾಕೀತು ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+