ಡಿಸಿಎಂ ಡಿ.ಕೆ ಶಿವಕುಮಾರ್ ಬಿಟ್ಟು ಮಹತ್ವದ ಸಭೆ ಮಾಡಿದ ಸಿಎಂ ಸಿದ್ದರಾಮಯ್ಯ!
ರಾಜ್ಯ ರಾಜಕೀಯದಲ್ಲಿ ಕಳೆದ ಎರಡೂವರೆ ವರ್ಷಗಳಿಂದಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನಡುವೆ ಅಧಿಕಾರಕ್ಕಾಗಿ ತೆರೆಮರೆಯ ಕಸರತ್ತು ನಡೆಯುತ್ತಲ್ಲೇ ಇದೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಕರೆಯದೆ ಕೆಲವು ಶಾಸಕರೊಂದಿಗೆ ಸಭೆ ಮಾಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಈಚೆಗೆ ಸಿದ್ದರಾಮಯ್ಯ ಅವರು ಮನೆಯಲ್ಲಿ ಇರುವವರಿಗೆ ಎಲ್ಲಾ ಸ್ವಾಗತ ಕೊರುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದು ಭಾರೀ ಚರ್ಚೆಗೆ ಕಾರಣವಾಗಿತ್ತು. ಇತ್ತೀಚಿನ ದಿನಗಳಲ್ಲಿ ಡಿ.ಕೆ ಶಿವಕುಮಾರ್ ಅವರ ಬಗ್ಗೆ ಸಿದ್ದರಾಮಯ್ಯ ಅವರಿಗೆ ಇರುವ ಅಸಮಾಧಾನವನ್ನು ಬಹಿರಂಗವಾಗಿ ಪ್ರದರ್ಶನ ಮಾಡಿದ ಮೊದಲ ಘಟನೆ ಅಂತಲೂ ಇದನ್ನು ವಿಶ್ಲೇಷಿಸಲಾಗುತ್ತಿದೆ.
ಕರ್ನಾಟಕದ ಮುಖ್ಯಮಂತ್ರಿ ಬದಲಾವಣೆ ಆಗಲಿದೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಹಂತದಲ್ಲೂ ಚರ್ಚೆಗಳು ನಡೆದಿವೆ. ಆದರೆ ಬಿಹಾರದ ವಿಧಾನಸಭೆ ಚುನಾವಣೆ ಹಾಗೂ ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇರುವ ಹಿನ್ನೆಲೆಯಲ್ಲಿ ಯಾವುದೇ ದೊಡ್ಡ ಮಟ್ಟದ ಬದಲಾವಣೆಗೆ ಕಾಂಗ್ರೆಸ್ ಮುಂದಾಗುತ್ತಿಲ್ಲ ಅಂತಲೇ ಹೇಳಲಾಗುತ್ತಿದೆ. ಇದರ ನಡುವೆ ಸಿದ್ದರಾಮಯ್ಯ ಅವರ ನಡೆಯು ರಾಜಕೀಯ ವಲಯದಲ್ಲಿ ಭಾರೀ ಅಚ್ಚರಿಯನ್ನು ಮೂಡಿಸಿದೆ. ಅಧಿಕಾರಕ್ಕಾಗಿ ಇಬ್ಬರು ಘಟಾನುಘಟಿ ನಾಯಕರ ನಡುವೆ ತೆರೆಮರೆಯ ಗುದ್ದಾಟ ಜೋರಾಗಿದೆ.

ಇನ್ನು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ನವೆಂಬರ್‌ಗೆ ಎರಡೂವರೆ ವರ್ಷಗಳನ್ನು ಪೂರ್ಣಗೊಳ್ಳಲಿದೆ. ಆ ವೇಳೆಗೆ ಬಿಹಾರ ವಿಧಾನಸಭೆ ಚುನಾವಣೆಯ ಫಲಿಶಾಂಶವೂ ಪ್ರಕಟವಾಗಲಿದೆ. ಆಗ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬಿಹಾರದಲ್ಲಿ ಒಬಿಸಿ ಹಾಗೂ ಹಿಂದೂಳಿದ ವರ್ಗಗಳ ಮತದಾರರ ಸಂಖ್ಯೆ ಹೆಚ್ಚಾಗಿದೆ. ಈ ಕಾರಣಕ್ಕೆ ಅಹಿಂದ ಸಮುದಾಯದ ಮೇಲೆ ಬಿಜೆಪಿ ಹಾಗೂ ಕಾಂಗ್ರೆಸ್ ಕಣ್ಣಿರಿಸಿದೆ. ಈ ಚುನಾವಣೆಯು ಎಲ್ಲಾ ಪಕ್ಷಗಳಿಗೂ ಪ್ರತಿಷ್ಠೆಯಿಂದ ಕೂಡಿದೆ. ಒಂದು ಬಿಹಾರ ಹಾಗೂ ಉತ್ತರ ಪ್ರದೇಶದಲ್ಲಿ ಯಾರೇ ಅಧಿಕಾರಕ್ಕೆ ಬಂದರೂ ಲೋಕಸಭೆ ಗದ್ದುಗೆಗೆ ಮೆಟ್ಟಿಲು ಆಗಲಿದೆ. ಹೀಗಾಗಿ, ಈ ಎರಡು ಕಾರಣಗಳಿಗೆ ಕಾಂಗ್ರೆಸ್ ಹೈಕಮಾಂಡ್ ಸಹ ತನ್ನ ನಿರ್ಧಾರವನ್ನು ಪ್ರಕಟಿಸುತ್ತಿಲ್ಲ.
ಸಿದ್ದರಾಮಯ್ಯ ಅವರ ಬದಲಾವಣೆಗೆ ರಾಹುಲ್ ಗಾಂಧಿ ಅವರು ಮನಸ್ಸು ಮಾಡುತ್ತಿಲ್ಲ ಎಂದು ಹೇಳಲಾಗಿದೆ. ಆದರೆ ಡಿ.ಕೆ ಶಿವಕುಮಾರ್ ಅವರು ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರೊಂದಿಗೆ ಚರ್ಚಿಸಿ ಮನವೊಲಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆದರೆ ಈ ವಿಚಾರದಲ್ಲಿ ಶಾಸಕರ ಬೆಂಬಲವೂ ಅತ್ಯಂತ ಮುಖ್ಯವಾಗಿದೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಅವರು ಪ್ರತ್ಯೇಕ ಸಭೆ ನಡೆಸಿದ್ದಾರೆ ಎನ್ನುವುದು ಭಾರೀ ಚರ್ಚೆಗೆ ಕಾರಣವಾಗಿದೆ.
ಡಿ.ಕೆ ಶಿವಕುಮಾರ್ ಅವರಿಗೆ ಹೆಚ್ಚಿನ ಶಾಸಕ ಬೆಂಬಲ ಇಲ್ಲದೆ ಇರುವುದು ಅವರು ಅಲ್ಪ ಪ್ರಮಾಣದಲ್ಲಿ ಹಿನ್ನಡೆ ಆಗುವುದಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಎಂದು ಎರಡು ಶಕ್ತಿ ಕೇಂದ್ರಗಳು ಸೃಷ್ಟಿಯಾಗಿವೆ. ಎರಡೂ ಕಡೆಗಳಲ್ಲಿ ಕೆಲವು ಶಾಸಕರು ಒಬ್ಬೊಬ್ಬರು ಮುಖ್ಯಮಂತ್ರಿಯಾಗಬೇಕು ಎಂದು ಡಿಮ್ಯಾಂಡ್ ಮಾಡುತ್ತಿದ್ದಾರೆ.












Click it and Unblock the Notifications