ಜನ ಸಣ್ಣ ಸಮಸ್ಯೆಗೂ ನನ್ನ ಬಳಿ ಬರ್ತಾರೆ ಅಂದ್ರೆ ನಿಮ್ಮ ಪ್ರಯೋಜನವೇನು? ಅಧಿಕಾರಿಗಳಿಗೆ ಸಿಎಂ ಕ್ಲಾಸ್‌

ಬೆಂಗಳೂರು, ಸೆಪ್ಟೆಂಬರ್‌ 12: ತಾಲೂಕು ಮಟ್ಟದಲ್ಲಿ ಸಚಿವರು, ಶಾಸಕರನ್ನು ಆಹ್ವಾನಿಸಿ, ಜನ ಸಂಪರ್ಕ ಸಭೆಗಳನ್ನು ವಾರಕ್ಕೊಮ್ಮೆ ನಡೆಸಿ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ವಿಧಾನಸೌಧದಸ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಾಡಿನ ಜನತೆ ಸಣ್ಣ ಪುಟ್ಟ ಸಮಸ್ಯೆಗಳಿಗೂ ನನ್ನ ಬಳಿಗೆ ಬರುತ್ತಾರೆ ಎಂದರೆ ನೀವುಗಳು ಇದ್ದು ಏನು ಪ್ರಯೋಜನ ಎಂದು ಜಿಲ್ಲಾಧಿಕಾರಿಗಳಿಗೆ ಪ್ರಶ್ನಿಸಿದರು.

cm-siddaramaiah-held-meeting

ಮುಖ್ಯಮಂತ್ರಿಯಾದ ಬಳಿಕ ನಾನು ಹಲವಾರು ಜಿಲ್ಲೆಗಳಿಗೆ ಭೇಟಿ ನೀಡಿದ್ದೆ. ಆ ವೇಳೆ ಜನ ಸಾಮಾನ್ಯರು ನೂರಾರು ರೀತಿಯ ಮನವಿಗಳನ್ನು ನನಗೆ ನೀಡುತ್ತಿದ್ದಾರೆ. ಜಿಲ್ಲಾ, ತಾಲೂಕು ಮಟ್ಟದಲ್ಲಿ ಬಗೆಹರಿಸಬೇಕಾದ ಸಮಸ್ಯೆಗಳನ್ನು ಹೊತ್ತುಕೊಂಡು ಜನ ನನ್ನ ಬಳಿ ಬರುತ್ತಿದ್ದಾರೆ. ನೀವು ಸ್ಥಳೀಯವಾಗಿ ಜನ ಸಂಪರ್ಕ ಸಭೆ ನಡೆಸಿ ಸ್ಪಂದಿಸಿ ಸ್ಥಳದಲ್ಲೇ ಪರಿಹಾರ ಕೊಟ್ಟಿದ್ದರೆ ಹೀಗೆ ಆಗುತ್ತಿರಲಿಲ್ಲ.

ಕೆಲವೊಂದು ಸಮಸ್ಯೆಗಳಿಗೆ ವಾರದ ಕಾಲ ಮಿತಿಯಲ್ಲಿ ಪರಿಹಾರ ಒದಗಿಸಿ ಕೊಡಿ. ಕೆಲಸ ಆಗಿದೆಯಾ, ಇಲ್ಲವಾ ಎನ್ನುವುದನ್ನು ಮರು ಪರೀಕ್ಷಿಸಿ. ಆಗ ಸ್ಥಳೀಯ ಸಮಸ್ಯೆಗಳಿಗಾಗಿ ಜನತೆ ಬಸ್ ಚಾರ್ಜ್ ಖರ್ಚು ಮಾಡಿಕೊಂಡು ನನ್ನ ತನಕ ಬರುವ ಅಗತ್ಯವೇ ಬೀಳುವುದಿಲ್ಲ ಎಂದು ತಿಳಿಸಿದರು.

ಕೇವಲ ಬದಲಾವಣೆಗಾಗಿ ನಾಡಿನ ಜನತೆ ಸರ್ಕಾರವನ್ನು ಬದಲಾಯಿಸಿಲ್ಲ. ಬಹಳ ನಿರೀಕ್ಷೆಗಳನ್ನು ಇಟ್ಟುಕೊಂಡು ಹಿಂದಿನ ಸರ್ಕಾರವನ್ನು ಬದಲಾಯಿಸಿ ನಮ್ಮನ್ನು ಅಧಿಕಾರಕ್ಕೆ ತಂದಿದ್ದಾರೆ. ಹೀಗಾಗಿ ಅಭಿವೃದ್ಧಿಯ ಆಶೋತ್ತರಗಳನ್ನು ಇಟ್ಟುಕೊಂಡ ಜನರ ನಿರೀಕ್ಷೆಗಳಿಗೆ ತಕ್ಕಂತೆ ಅಧಿಕಾರಿಗಳು ಕೆಲಸ ಮಾಡಬೇಕು. ಶಾಸಕರು, ಮಂತ್ರಿಗಳು, ಅಧಿಕಾರಿಗಳು ಜನ ಸೇವಕರು. ಈ ಸಾಮಾನ್ಯ ತಿಳಿವಳಿಕೆ ಪ್ರತಿಯೊಬ್ಬರಲ್ಲೂ ಇರಬೇಕು. ನಾವ್ಯಾರು ರಾಜರುಗಳಲ್ಲ ಎಂದು ಅಧಿಕಾರಿಗಳಿಗೆ ತಿಳಿಸಿದರು.

cm-siddaramaiah-held-meeting

ನ್ಯಾಯ ವಿಳಂಬ ಸರ್ಕಾರ ಸುತಾರಾಂ ಸಹಿಸಲ್ಲ

ತಹಶೀಲ್ದಾರ್‌, ಉಪವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಬರುವ ಅರ್ಜಿಗಳು 5 ವರ್ಷಕ್ಕೂ ಹೆಚ್ಚು ಅವಧಿಗೆ ಬಾಕಿ ಉಳಿದಿರುವುದನ್ನು ಗಮನಿಸಲಾಗಿದೆ. 5 ವರ್ಷವಾದರೂ ಪ್ರಕರಣ ಇತ್ಯರ್ಥಪಡಿಸದೆ ಇದ್ದರೆ, ನೀವು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಅರ್ಥ. Justice delayed is justice denied. ವಿಳಂಬ ಜಾಸ್ತಿಯಾದಷ್ಟು ಭ್ರಷ್ಟಾಚಾರಕ್ಕೆ ಅವಕಾಶವಾಗುತ್ತದೆ. ವಿಳಂಬವೂ ಭ್ರಷ್ಟಾಚಾರವೇ ಎಂದರು.

ವಿಳಂಬ ಮಾಡಿದರೆ ತಹಶೀಲ್ದಾರ್‌ ಒಂದು ಅರ್ಜಿಯನ್ನು ಸ್ವೀಕರಿಸಿದರೆ, ಮೂರು ತಿಂಗಳಲ್ಲಿ ಇತ್ಯರ್ಥವಾಗಬೇಕು. ಉಪವಿಭಾಗಾಧಿಕಾರಿಗಳ ಬಳಿ ಬರುವ ಮನವಿಗಳ ಇತ್ಯರ್ಥಕ್ಕೆ ಬಹಳ ವಿಳಂಬ ಮಾಡ್ತಾರೆ. ಇದನ್ನು ಕನಿಷ್ಠ ಆರು ತಿಂಗಳಲ್ಲಿ ಹಾಗೂ ಜಿಲ್ಲಾಧಿಕಾರಿಗಳು ಒಂದು ವರ್ಷದಲ್ಲಿ ಇತ್ಯರ್ಥ ಮಾಡಬೇಕು. ಜಿಲ್ಲಾಧಿಕಾರಿಗಳು ಅನಗತ್ಯವಾಗಿ ಪ್ರಕರಣ ಮುಂದೂಡುವುದು, ಕಕ್ಷಿದಾರರನ್ನು ಕಾಯಿಸುವುದು, ವಾದ-ವಿವಾದಗಳನ್ನು ಆಲಿಸಿದ ನಂತರ ತೀರ್ಪು ಬರೆಯಲು ವಿಳಂಬ ಮಾಡುವುದು ತರವಲ್ಲ. ಪ್ರಕರಣ ಇತ್ಯರ್ಥಗೊಳಿಸಲು ವಿಳಂಬ ಮಾಡಿದರೆ ನಮ್ಮ ಸರ್ಕಾರ ಸಹಿಸಲ್ಲ. ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವ ಸಂಪುಟದ ಇತರ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+