ಕಲುಷಿತ ನೀರಿನಿಂದ ಸಾವು ಸಂಭವಿಸಿದರೆ ಜಿ.ಪಂ ಸಿಇಒ ಅಮಾನತು: ಸಿಎಂ ಸಿದ್ದರಾಮಯ್ಯ ಖಡಕ್‌ ಎಚ್ಚರಿಕೆ

ಬೆಂಗಳೂರು, ಆಗಸ್ಟ್ 22: ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ ಪ್ರಕರಣಗಳು ಮರುಕಳಿಸಿದರೆ ಜಿ.ಪಂ ಸಿಇಒ ಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕಲುಷಿತ ನೀರು ಸೇವನೆಯಿಂದ ಸಾವು ಪ್ರಕರಣಗಳಾದರೆ ನಗರ ಸಭೆಗಳ ಆಯುಕ್ತರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್‌ ಸೂಚನೆ ನೀಡಿದ್ದಾರೆ.

CM Siddaramaiah Held Meeting With Ministers And Officials For Problem Of Water In The state

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಡವರು ವಾಸಿಸುವ ಕೊಳಗೇರಿಗಳಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಹಾಗೂ ಚರಂಡಿ ನೀರಿನ ಪೈಪುಗಳು ಪ್ರತ್ಯೇಕವಾಗಿರುವುದನ್ನು ಖಾತ್ರಿಪಡಿಸಬೇಕು. ಪ್ರತ್ಯೇಕ ಇಲ್ಲದಿರುವ ಸ್ಥಳಗಳನ್ನು ಗುರುತಿಸಿ ರಾಜ್ಯದಲ್ಲಿ ಈ ಕುರಿತು ನೈರ್ಮಲ್ಯ ಅಭಿಯಾನ ಕೈಗೊಂಡು 15 ದಿನಗಳಲ್ಲಿ ಈ ಕುರಿತು ವರದಿ ಸಲ್ಲಿಸಬೇಕು ಎಂದು ಸಿಎಂ ಸೂಚಿಸಿದರು.

ರಾಜ್ಯದಲ್ಲಿ ಕಲುಷಿತ ನೀರಿನ ಸೇವನೆಯಿಂದಾಗಿ 13-14 ಜನ ಸಾವಿಗೀಡಾಗಿದ್ದು, ಚಿತ್ರದುರ್ಗದಲ್ಲಿಯೇ 6-7 ಜನ ಅಸುನೀಗಿದ್ದಾರೆ. ಇದನ್ನು ತಪ್ಪಿಸಲು ಸಾಧ್ಯವಿದೆ. ಕೆಲವೆಡೆ ನಿರ್ವಹಣೆ ಇಲ್ಲದೆ ಇರುವುದರಿಂದ ಈ ರೀತಿ ಅವಘಡಗಳು ಸಂಭವಿಸುತ್ತದೆ ಎಂದರು.

ಕಾವಾಡಿಗರಹಟ್ಟಿಯಲ್ಲಿ ಇತ್ತೀಚೆಗೆ ಕುಡಿಯುವ ನೀರು ಕುಡಿದು ಮರಣ ಹೊಂದಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂತಹ ಪ್ರಕರಣಗಳು ಸಂಭವಿಸುತ್ತದೆ. ಗ್ರಾಮೀಣಾಭಿವೃದ್ಧಿ, ಆರೋಗ್ಯ, ಪೌರಾಡಳಿತ ಹಾಗೂ ನಗರಾಭಿವೃದ್ಧಿ ಈ ನಾಲ್ಕು ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಇನ್ನು ರಾಜ್ಯದ ಕೆಲವು ಜಿಲ್ಲೆಗಳ ಹಾಸ್ಟೆಲ್‌ಗಳಲ್ಲಿಯೂ ವಿದ್ಯಾರ್ಥಿಗಳು ಕಲುಷಿತ ನೀರು ಕುಡಿದು ಆಸ್ಪತ್ರೆ ಸೇರಿದ್ದಾರೆ. ಈ ಬಗ್ಗೆ ಸಮರೋಪಾದಿಯಲ್ಲಿ ಕೆಲಸಗಳಾಗಬೇಕು. ಪೈಪ್ ಲೈನ್ ಸರಿಪಡಿಸುವುದು, ಟ್ಯಾಂಕ್ ಸ್ವಚ್ಛತಾ ಕಾರ್ಯ ತುರ್ತಾಗಿ ಕೈಗೊಳ್ಳಬೇಕು ಎಂದು ಸೂಚಿಸಿದರು.

ಇನ್ನು ಸಭೆಯಲ್ಲಿ ಉಪಸ್ಥಿತರಿದ್ದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್, ನೈರ್ಮಲ್ಯ ಮತ್ತು ಸ್ವಚ್ಛತೆಗೆ ಪ್ರತ್ಯೇಕವಾಗಿ ಕನಿಷ್ಠ ಮೊತ್ತವನ್ನು ನಿಗದಿ ಮಾಡಬೇಕು. ಸಾಮಾನ್ಯವಾಗಿ ಎಸ್.ಸಿ.ಎಸ್.ಪಿ/ ಟಿ. ಎಸ್.ಪಿ ಯಡಿ ಆದ್ಯತೆಯನ್ನು ರಸ್ತೆ, ಇನ್ನಿತರ ಕಾಮಗಾರಿಗಳಿಗೆ ವಹಿಸಲಾಗುತ್ತದೆ ಎಂದರು.

ಇನ್ನು 39 ತಾಲೂಕುಗಳಲ್ಲಿ ಕುಡಿಯುವ ನೀರಿನ ಅಭಾವವಿದೆ. 121 ಹಳ್ಳಿಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇದಕ್ಕೆ 86 ಕೋಟಿ ರೂ.ಗಳ ಅನುದಾನ ಅಗತ್ಯವಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.

ಸಭೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಸಹಕಾರ ಸಚಿವ ಕೆ.ಎನ್.ರಾಜಪ್ಪ, ಪೌರಾಡಳಿತ ಸಚಿವ ರಹೀಮ್ ಖಾನ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+